ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಇಬ್ಬರು ಕಾರ್ಯನಿರ್ವಾಹಕ ಇಂಜಿನಿಯರ್'ಗಳ ಅಮಾನತು

ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಹಣ ನಷ್ಟವಾಗುವಂತೆ ಕರ್ತವ್ಯಲೋಪವೆಸಗಿದ ಅಧಿಕಾರಿಗಳ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ  ಪ್ರಿಯಾಂಕ್ ಖರ್ಗೆ ಕ್ರಮ ಜರುಗಿಸಿದ್ದಾರೆ.

Written by - Prashobh Devanahalli | Edited by - Manjunath N | Last Updated : Jun 8, 2023, 08:59 PM IST
  • ಸರ್ಕಾರಕ್ಕೆ ಒಟ್ಟು ₹1.3 ಕೋಟಿ ರೂ. ನಷ್ಟ ಮಾಡಿದ್ದ ಕಾರ್ಯಪಾಲಕ ಇಂಜಿನಿಯರ್ ಬಸವರಾಜ. ಕೆ .ಹಲಚೇರ ಸೇವೆಯಿಂದ ಅಮಾನತು.
  • ಕಾರ್ಯಪಾಲಕ ಇಂಜಿನಿಯರ್ ಎಸ್.ಆರ್ ಹರೀಶ್ ಸೇವೆಯಿಂದ ಅಮಾನತು ಮಾಡಲಾಗಿದೆ.
  • ಭ್ರಷ್ಟರಿಗೆ ಹಾಗೂ ಕರ್ತವ್ಯ ಲೋಪವೆಸಾಗುವವರಿಗೆ ತಮ್ಮ ಇಲಾಖೆಯಲ್ಲಿ ಯಾವುದೇ ಅವಕಾಶವಿಲ್ಲ ಎಂದು ಸಚಿವ ಖರ್ಗೆ ಹೇಳಿದರು.
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಇಬ್ಬರು ಕಾರ್ಯನಿರ್ವಾಹಕ ಇಂಜಿನಿಯರ್'ಗಳ ಅಮಾನತು title=

ಬೆಂಗಳೂರು : ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಹಣ ನಷ್ಟವಾಗುವಂತೆ ಕರ್ತವ್ಯಲೋಪವೆಸಗಿದ ಅಧಿಕಾರಿಗಳ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ  ಪ್ರಿಯಾಂಕ್ ಖರ್ಗೆ ಕ್ರಮ ಜರುಗಿಸಿದ್ದಾರೆ.

ತುಮಕೂರಿನ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದಲ್ಲಿ ವಿಳಂಬ ಧೋರಣೆ ಬೇಜವಾಬ್ದಾರಿತನ ಹಾಗೂ ಕರ್ತವ್ಯ ನಿರ್ಲಕ್ಷತೆಯಿಂದ ಸುಮಾರು ₹2.76 ಕೋಟಿ ರೂ.ನಷ್ಟಕ್ಕೆ ನೇರ ಕಾರಣವಾಗಿದ್ದ ಕಾರ್ಯಪಾಲಕ ಇಂಜಿನಿಯರ್ ಎಸ್.ಆರ್ ಹರೀಶ್ ಸೇವೆಯಿಂದ ಅಮಾನತು ಮಾಡಲಾಗಿದೆ.

ಯಾದಗಿರಿಯ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದಲ್ಲಿ 41 ವಿವಿಧ ಕಾಮಗಾರಿಗಳಲ್ಲಿ ಕರ್ತವ್ಯಲೋಪವೆಸಗಿ ಸರ್ಕಾರಕ್ಕೆ ಒಟ್ಟು ₹1.3 ಕೋಟಿ ರೂ. ನಷ್ಟ ಮಾಡಿದ್ದ ಕಾರ್ಯಪಾಲಕ ಇಂಜಿನಿಯರ್ ಬಸವರಾಜ. ಕೆ .ಹಲಚೇರ ಸೇವೆಯಿಂದ ಅಮಾನತು ಮಾಡಲಾಗಿದೆ.

ಈ ಕುರಿತಾಗಿ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ  ಭ್ರಷ್ಟರಿಗೆ ಹಾಗೂ ಕರ್ತವ್ಯ ಲೋಪವೆಸಾಗುವವರಿಗೆ ತಮ್ಮ ಇಲಾಖೆಯಲ್ಲಿ ಯಾವುದೇ ಅವಕಾಶವಿಲ್ಲ ಎಂದು  ಹೇಳಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News