ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಇಬ್ಬರು ಕಾರ್ಯನಿರ್ವಾಹಕ ಇಂಜಿನಿಯರ್`ಗಳ ಅಮಾನತು
ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಹಣ ನಷ್ಟವಾಗುವಂತೆ ಕರ್ತವ್ಯಲೋಪವೆಸಗಿದ ಅಧಿಕಾರಿಗಳ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕ್ರಮ ಜರುಗಿಸಿದ್ದಾರೆ.
ಬೆಂಗಳೂರು : ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಹಣ ನಷ್ಟವಾಗುವಂತೆ ಕರ್ತವ್ಯಲೋಪವೆಸಗಿದ ಅಧಿಕಾರಿಗಳ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕ್ರಮ ಜರುಗಿಸಿದ್ದಾರೆ.
ತುಮಕೂರಿನ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದಲ್ಲಿ ವಿಳಂಬ ಧೋರಣೆ ಬೇಜವಾಬ್ದಾರಿತನ ಹಾಗೂ ಕರ್ತವ್ಯ ನಿರ್ಲಕ್ಷತೆಯಿಂದ ಸುಮಾರು ₹2.76 ಕೋಟಿ ರೂ.ನಷ್ಟಕ್ಕೆ ನೇರ ಕಾರಣವಾಗಿದ್ದ ಕಾರ್ಯಪಾಲಕ ಇಂಜಿನಿಯರ್ ಎಸ್.ಆರ್ ಹರೀಶ್ ಸೇವೆಯಿಂದ ಅಮಾನತು ಮಾಡಲಾಗಿದೆ.
ಯಾದಗಿರಿಯ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದಲ್ಲಿ 41 ವಿವಿಧ ಕಾಮಗಾರಿಗಳಲ್ಲಿ ಕರ್ತವ್ಯಲೋಪವೆಸಗಿ ಸರ್ಕಾರಕ್ಕೆ ಒಟ್ಟು ₹1.3 ಕೋಟಿ ರೂ. ನಷ್ಟ ಮಾಡಿದ್ದ ಕಾರ್ಯಪಾಲಕ ಇಂಜಿನಿಯರ್ ಬಸವರಾಜ. ಕೆ .ಹಲಚೇರ ಸೇವೆಯಿಂದ ಅಮಾನತು ಮಾಡಲಾಗಿದೆ.
ಈ ಕುರಿತಾಗಿ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಭ್ರಷ್ಟರಿಗೆ ಹಾಗೂ ಕರ್ತವ್ಯ ಲೋಪವೆಸಾಗುವವರಿಗೆ ತಮ್ಮ ಇಲಾಖೆಯಲ್ಲಿ ಯಾವುದೇ ಅವಕಾಶವಿಲ್ಲ ಎಂದು ಹೇಳಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.