ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ಏಕಾಏಕಿ ಆಫ್ಲೈನ್ ಪರೀಕ್ಷೆಯನ್ನು ನಡೆಸಲು ಮುಂದಾಗಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಸೋಮವಾರದಂದು ಸುವರ್ಣ ವಿಧಾನಸೌಧ ಚಲೋ ಹೋರಾಟಕ್ಕೆ ಮುಂದಾಗಿದ್ದಾರೆ.


COMMERCIAL BREAK
SCROLL TO CONTINUE READING

ಸುಮಾರು ಒಂದು ವಾರಗಳ ಸುದೀರ್ಘ ಹೋರಾಟದ ನಂತರ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದಿದ್ದ ಕಾನೂನು ವಿವಿ ಕುಲಪತಿಗಳಾದ ಈಶ್ವರ್ ಭಟ್ ಉನ್ನತ ಅಧಿಕಾರಿಗಳು ಹಾಗೂ ತಜ್ಞರ ಜೊತೆಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವವರೆಗೂ ಡಿಸೆಂಬರ್ 15 ರಂದು ನಡೆಯಲಿರುವ ಪರೀಕ್ಷೆಯನ್ನು ತಡೆಹಿಡಿಯಲಾಗುವುದು ಎಂದು ಘೋಷಿಸಿದ್ದರು. 


ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಸಿದ ಕರ್ನಾಟಕ ಕಾನೂನು ವಿವಿಯ ಅಧಿಸೂಚನೆಗಳು..!


ಆದರೆ ಅಚ್ಚರಿ ಎನ್ನುವಂತೆ ಕೇವಲ 24 ಗಂಟೆಯೊಳಗೆ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ವಿಶ್ವವಿದ್ಯಾನಿಲಯದಿಂದ ಸುತ್ತೋಲೆ ಹೊರಡಿಸಿದ್ದರು. ಕುಲಪತಿಗಳು ಈಗ ಧೀಡೀರ್ ಯುಟರ್ನ್ ತೆಗೆದುಕೊಂಡಿರುವ ನಡೆ ಈಗ ವಿದ್ಯಾರ್ಥಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಈಗಾಗಲೇ ಬಾರ್ ಕೌನ್ಸಿಲ್ ನಿರ್ದೇಶನದಂತೆ ವಿದ್ಯಾರ್ಥಿಗಳನ್ನು ಮೌಲ್ಯಮಾಪನ ಮಾಡಲು ಆಫ್ ಲೈನ್ ಹೊರತಾಗಿ ಹಲವು ಆಯ್ಕೆಗಳನ್ನು ನೀಡಿದೆ, ಅದರಲ್ಲಿ ಪ್ರಮುಖವಾಗಿ ಆನ್ ಲೈನ್ ಪರೀಕ್ಷೆ, ಆಂತರಿಕ ಮೌಲ್ಯಮಾಪನ, ಸೆಮಿನಾರ್, ಓಪನ್ ಬುಕ್ ಹಾಗೂ ಇನ್ನಿತರ ಆಯ್ಕೆಗಳು ಲಭ್ಯ ಇವೆ. ಈಗಾಗಲೇ ರಾಜ್ಯದ ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯ ಆಫ್ಲೈನ್ ಹೊರತಾದ ಆಯ್ಕೆಗಳ ಮೂಲಕ ವಿದ್ಯಾರ್ಥಿಗಳನ್ನು ಮೌಲ್ಯಮಾಪನ ಮಾಡಿ ಮುಂದಿನ ತರಗತಿಗಳಿಗೆ ಬಡ್ತಿ ಮಾಡುವ ಮೂಲಕ ಹೊಸ ಅಕಾಡೆಮಿಕ್ ವರ್ಷದ ತರಗತಿಗಳನ್ನು ನಡೆಸುತ್ತಿದೆ.


ಕರ್ನಾಟಕ ಕಾನೂನು ವಿವಿಯ ಚೆಲ್ಲಾಟ, ವಿದ್ಯಾರ್ಥಿಗಳಿಗೆ ಪ್ರಾಣ ಸಂಕಟ..!


ಈಗ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯವು ಆಫ್ ಲೈನ್ ಪರೀಕ್ಷೆ ನಡೆಸುವುದರಿಂದ ಅಕಾಡೆಮಿಕ್ ವರ್ಷದಲ್ಲಿ ವಿಳಂಭವಾಗುತ್ತದೆ. ಇದರಿಂದಾಗಿ ಈಗ ಮೂರು ವರ್ಷದ ಕಾನೂನು ಕೋರ್ಸ್ ನ್ನು ನಾಲ್ಕು ವರ್ಷಕ್ಕೆ, ಐದು ವರ್ಷದ ಕೋರ್ಸ್ ನ್ನು ಆರು ವರ್ಷಕ್ಕೆ ಮುಗಿಸಬೇಕಾಗುತ್ತದೆ, ಇದರಿಂದ ತಮ್ಮ ಭವಿಷ್ಯವು ಡೋಲಾಯಮಾನವಾಗುತ್ತದೆ ಎಂದು ವಿದ್ಯಾರ್ಥಿಗಳು ಕಳವಳ ವ್ಯಕ್ತಪಡಿಸಿದ್ದಾರೆ.


ಈಗ ಹುಬ್ಬಳ್ಳಿಯ ವಿಶ್ವವಿದ್ಯಾನಿಲಯದಲ್ಲಿನ ಆವರಣದಲ್ಲಷ್ಟೇ ಅಲ್ಲದೆ ಬೆಂಗಳೂರು ಮತ್ತು ರಾಜ್ಯದ ಇತರ ಜಿಲ್ಲಾ ಕೇಂದ್ರಗಳಲ್ಲಿಯೂ ಕೂಡ ವಿಶ್ವವಿದ್ಯಾನಿಲಯದ ಕುಲಪತಿಗಳ ಈ ಧೋರಣೆಯನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ಕಾನೂನು ವಿವಿಯ ವಿದ್ಯಾರ್ಥಿಗಳ ಹೋರಾಟಕ್ಕೆ ಈಗ ಎನ್ಎಸ್ಯುಐ ಹಾಗೂ ಎಬಿವಿಪಿ ವಿದ್ಯಾರ್ಥಿ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.


ಇದರ ಜೊತೆಗೆ ಕಾನೂನು ಪದವಿಯ ವಿದ್ಯಾರ್ಥಿಗಳು ಪರೀಕ್ಷಾ ವಿಚಾರವಾಗಿ ಹೈಕೋರ್ಟ್ ಮೊರೆ ಹೋಗಿದ್ದು, ಪ್ರಕರಣದ ವಿಚಾರಣೆಯು ಬೆಂಗಳೂರು ಮತ್ತು ಧಾರವಾಡ ಹೈಕೋರ್ಟ್ ಪೀಠಗಳಲ್ಲಿ ಸೋಮವಾರದಂದು( (ಡಿಸೆಂಬರ್ 13) ವಿಚಾರಣೆಗೆ ಬರಲಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.