Syed Shah Khusro Hussaini Dies: ಕಲಬುರಗಿ ನಗರದಲ್ಲಿರುವ ಐತಿಹಾಸಿಕ ಧಾರ್ಮಿಕ ಕೇಂದ್ರವಾದ ಖಾಜಾ ಬಂದೇ ನವಾಜ್ ದರ್ಗಾದ ಸಜ್ಜಾದ ನಶೀರ್ ಡಾ. ಸೈಯದ್ ಶಹಾ ಖುಸ್ರೊ ಹುಸೇನಿ (79) ಇವರು ಬುಧವಾರ (ನ. 06)  ರಾತ್ರಿ ಇಹಲೋಕ ತ್ಯಜಿಸಿದ್ದಾರೆ. 


COMMERCIAL BREAK
SCROLL TO CONTINUE READING

ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ನಿನ್ನೆ ರಾತ್ರಿ ನಿಧನರಾದರು.. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. 


ಇದನ್ನೂ ಓದಿ- ವಕ್ಫ್ ಆಸ್ತಿ ವಿಚಾರ: ವಕ್ಫ್ ಆಸ್ತಿ ತೆರವುಗೊಳಿಸಲು 216 ಪ್ರಕರಣಗಳಲ್ಲಿ ಬಿಜೆಪಿಯೇ ನೋಟೀಸ್ ಕೊಟ್ಟಿತ್ತಲ್ಲಾ ಏಕೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ


ಖಾಜಾ ಬಂದೇ ನವಾಜ್ ವಿಶ್ವವಿದ್ಯಾಲಯದ ಸಂಸ್ಥಾಪಕರಾಗಿದ್ದ ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ, ಮುಂದೆ ಕುಲಪತಿಯೂ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಖಾಜಾ ಎಜುಕೇಷನ್ ಸೊಸೈಟಿಯ ಅಧ್ಯಕ್ಷರಾಗಿದ್ದ ಇರವಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಹರಸಿ ಬಂದಿವೆ. 


ಸೈಯದ್ ಶಹಾ ಖುಸ್ರೊ ಹುಸೇನಿ ಅವರು ಹೈದರಾಬಾದ್‌ ಕರ್ನಾಟಕ ಭಾಗದಲ್ಲಿ ಶಿಕ್ಷಣಕ್ಕೆ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ. 1972ರಿಂದಲೇ ಕೆಬಿಎನ್‌ ಶಿಕ್ಷಣ ಸಂಸ್ಥೆಯೊಂದಿಗೆ ನಂಟು ಹೊಂದಿದ್ದ ಅವರು, ವೈದ್ಯಕೀಯ, ಎಂಜಿನಿಯರಿಂಗ್‌, ಬಿ.ಇಡಿ ಕಾಲೇಜುಗಳನ್ನು ಪ್ರಾರಂಭಿಸುವ ಮೂಲಕ ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದರು. 


ಇದನ್ನೂ ಓದಿ- ಮತ್ತೊಂದು ಜನ್ಮ ಎತ್ತಿ ಬಂದರೂ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್


ವಿಶೇಷವಾಗಿ ಮಹಿಳೆಯರ ವಿದ್ಯಾಭ್ಯಾಸಕ್ಕೆ ಒತ್ತು ನೀಡಿದ್ದ ಸೈಯದ್ ಶಹಾ ಖುಸ್ರೋ ಹುಸೇನಿ ಮಹಿಳೆಯರಿಗಾಗಿಯೇ ಪ್ರೌಢಶಾಲೆ, ಪದವಿಪೂರ್ವ, ಪದವಿ ಹಾಗೂ ಅರೇಬಿಕ್‌ ಭಾಷೆಯ ಕಾಲೇಜುಗಳನ್ನು ತೆರೆದಿದ್ದರು ಎಂಬುದು ಗಮನಾರ್ಹವಾಗಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.