ನೀರಾವರಿ ಪ್ರದೇಶ ಹೆಚ್ಚಿಸಲು ಕ್ರಮ ಕೈಗೊಳ್ಳಿ; ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ

ರಾಜ್ಯದಲ್ಲಿ ಅಚ್ಚುಕಟ್ಟು ಪ್ರದೇಶವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರ ಬಜೆಟ್‌ನಲ್ಲಿ ಶೇ.35 ರಷ್ಟು ಅನುದಾನ ನೀಡುತ್ತಿದೆ. 

Last Updated : Jun 12, 2019, 07:59 AM IST
ನೀರಾವರಿ ಪ್ರದೇಶ ಹೆಚ್ಚಿಸಲು ಕ್ರಮ ಕೈಗೊಳ್ಳಿ; ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ title=
File Image

ಬೆಂಗಳೂರು: ನೀರಾವರಿ ಅಚ್ಚುಕಟ್ಟು ಪ್ರದೇಶ ಹೆಚ್ಚಿಸುವ ನಿಟ್ಟಿನಲ್ಲಿ ಐದು ವರ್ಷಗಳ ಯೋಜನೆ ತಯಾರಿಸುವಂತೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಸಲಹೆ ನೀಡಿದರು.

ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ಸಮ್ಮೇಳನ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಚ್ಚುಕಟ್ಟು ಪ್ರದೇಶವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರ ಬಜೆಟ್‌ನಲ್ಲಿ ಶೇ.35 ರಷ್ಟು ಅನುದಾನ ನೀಡುತ್ತಿದೆ. ಈ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ನೀರಾವರಿ ಪ್ರದೇಶ ವಿಸ್ತರಿಸಿ. ಇದರಿಂದ ರೈತರು ಆರ್ಥಿಕವಾಗಿ ಸ್ವಾಲಂಬಿಗಳಾಗುತ್ತಾರೆ. 

ಐದು ವರ್ಷದಲ್ಲಿ ಇಂತಿಷ್ಟು ನೀರಾವರಿ ಪ್ರದೇಶ ವಿಸ್ತರಿಸಲು ಟಾರ್ಗೆಟ್‌ ಹಾಕಿಕೊಂಡು ಕೆಲಸ ನಿರ್ವಹಿಸಿ. ಇದರಿಂದ ನೀರಾವರಿ ಪ್ರದೇಶ ವಿಸ್ತರಣೆ ಬಗ್ಗೆ ನಿಖರ ಮಾಹಿತಿ ಸಿಕ್ಕಂತಾಗುತ್ತದೆ ಎಂದರು.

ಕಾವೇರಿ 5ನೇ ಹಂತದ ಯೋಜನೆ ಪೂರ್ಣಗೊಂಡ ಬಳಿಕ ಬೆಂಗಳೂರಿಗೆ ನೀರಿನ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಇದೆ. ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದರಿಂದ, ಈ ಯೋಜನೆಗೆ ಕಾನೂನು ತೊಡಕು ಇದ್ದರೆ ಶೀಘ್ರ ಬಗೆಹರಿಸಿಕೊಂಡು ಈ ಯೋಜನೆಗೆ ಚಾಲನೆ ನೀಡಿ ಎಂದು ಹೇಳಿದರು.

ಜಲಸಂಪನ್ಮೂಲ ಇಲಾಖೆಗೆ ಬಜೆಟ್‌ನಲ್ಲಿ ಮೀಸಲಿಟ್ಟ ಅನುದಾನ ಎಷ್ಟು ಬಳಕೆಯಾಗಿದೆ? ಯಾವೆಲ್ಲಾ ಯೋಜನೆಗೆ ಬಳಕೆಯಾಗಿದೆ ಎಂಬ ನಿಖರ ಮಾಹಿತಿಯನ್ನು ಇಲಾಖೆ ಹೊಂದಿರಬೇಕು. ಕನಿಷ್ಠ ಪಕ್ಷ ಹಣಕಾಸು ಇಲಾಖೆಯವರು ಪ್ರತಿ ಮೂರು ತಿಂಗಳಿಗೊಮ್ಮೆ ಹಣಕಾಸು ವೆಚ್ಚದ ಬಗ್ಗೆ ಪ್ರಗತಿ ಪರಿಶೀಲನೆ ನಡೆಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.

Trending News