ಬೆಂಗಳೂರು: ಮುಂದಿನ ಚುನಾವಣೆಯೊಳಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ(BS Yediyurappa)ರನ್ನು ಸಂಪೂರ್ಣವಾಗಿ ಮುಗಿಸುವ ‘ಟಾರ್ಗೆಟ್ BSY’ ಯೋಜನೆಯನ್ನು ಬಿಜೆಪಿ ಹಮ್ಮಿಕೊಂಡಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ವ್ಯಂಗ್ಯವಾಡಿದೆ. #B JPvsBSY ಹ್ಯಾಶ್ ಟ್ಯಾಗ್ ಬಳಸಿ ಭಾನುವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಪಕ್ಷ ಕಟ್ಟಿದವರನ್ನು ಮುಗಿಸುವುದು ಬಿಜೆಪಿಯ ಹೊಸ ಟ್ರೆಂಡ್!’ ಎಂದು ಟೀಕಿಸಿದೆ.
‘ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ(BJP) ಸದಾ ಮಲತಾಯಿ ಮಗನಂತೆ ನಡೆಸಿಕೊಂಡಿದೆ. ಅಧಿಕಾರದಲ್ಲಿದ್ದಾಗಲೂ ಬಿಜೆಪಿ ಬಿಎಸ್ವೈರನ್ನು ಕಾಡಿತ್ತು, ಅಧಿಕಾರ ಕಳೆದುಕೊಂಡ ಮೇಲೂ ಕಾಡುತ್ತಿದೆ. ಮುಂದಿನ ಚುನಾವಣೆಯೊಳಗೆ BSYಅವರನ್ನು ಸಂಪೂರ್ಣವಾಗಿ ಮುಗಿಸುವ ‘ಟಾರ್ಗೆಟ್ BSY’ ಯೋಜನೆಯನ್ನು ಬಿಜೆಪಿ ಹಮ್ಮಿಕೊಂಡಿದೆ. ಪಕ್ಷ ಕಟ್ಟಿದವರನ್ನು ಮುಗಿಸುವುದು ಬಿಜೆಪಿಯ ಹೊಸ ಟ್ರೆಂಡ್! ಆಗಿದೆ’ ಎಂದು ಕಾಂಗ್ರೆಸ್ ಕುಟುಕಿದೆ.
'@BSYBJP ಅವರನ್ನು ಬಿಜೆಪಿ ಸದಾ ಮಲತಾಯಿ ಮಗನಂತೆ ನಡೆಸಿಕೊಂಡಿದೆ.
ಅಧಿಕಾರದಲ್ಲಿದ್ದಾಗಲೂ ಬಿಜೆಪಿ ಕಾಡಿತ್ತು, ಅಧಿಕಾರ ಕಳೆದುಕೊಂಡ ಮೇಲೂ ಕಾಡುತ್ತಿದೆ.
ಮುಂದಿನ ಚುನಾವಣೆಯೊಳಗೆ BSYಅವರನ್ನ ಸಂಪೂರ್ಣ ಮುಗಿಸುವ "ಟಾರ್ಗೆಟ್ BSY" ಯೋಜನೆಯನ್ನು ಬಿಜೆಪಿ ಹಮ್ಮಿಕೊಂಡಿದೆ.
ಪಕ್ಷ ಕಟ್ಟಿದವರನ್ನ ಮುಗಿಸುವುದು ಬಿಜೆಪಿಯ ಹೊಸ ಟ್ರೆಂಡ್!#BSPvsBSY
— Karnataka Congress (@INCKarnataka) October 10, 2021
ಇದನ್ನೂ ಓದಿ: Karnataka Rains: ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ, ಕರಾವಳಿ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
‘ನೀರಾವರಿ ಇಲಾಖೆಯ 20 ಸಾವಿರ ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಬಿ.ವೈ.ವಿಜಯೇಂದ್ರ(BY Vijayendra) ಹಾಗೂ ಬಿ.ಎಸ್.ಯಡಿಯೂರಪ್ಪ ಆಪ್ತರನ್ನೇ ಗುರಿಯಾಗಿಸಿ ಐಟಿ ದಾಳಿಯಾಗಿದೆ. ಸರ್ಕಾರದ ಭ್ರಷ್ಟಾಚಾರವನ್ನು, ವಿಜಯೇಂದ್ರ ಹಸ್ತಕ್ಷೇಪವನ್ನು ಬಿಜೆಪಿ ಒಪ್ಪಿಕೊಳ್ಳುತ್ತದೆಯೇ ಅಥವಾ BSY ಅವರನ್ನು ಮುಗಿಸುವ ತಂತ್ರವೆನ್ನುತ್ತದೆಯೇ. ಇದಕ್ಕೆ ಬಿಜೆಪಿಯೇ ಉತ್ತರಿಸಬೇಕು’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ನೀರಾವರಿ ಇಲಾಖೆಯ 20,000 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ@BYVijayendra ಹಾಗೂ @BSYBJP
ಅವರ ಆಪ್ತರನ್ನೇ ಗುರಿಯಾಗಿಸಿ ಐಟಿ ದಾಳಿಯಾಗಿದೆ.ಸರ್ಕಾರದ ಭ್ರಷ್ಟಾಚಾರವನ್ನ, ವಿಜಯೇಂದ್ರ ಹಸ್ತಕ್ಷೇಪವನ್ನು ಬಿಜೆಪಿ ಒಪ್ಪಿಕೊಳ್ಳುತ್ತದೆಯೇ, ಅಥವಾ BSY ಅವರನ್ನು ಮುಗಿಸುವ ತಂತ್ರವೆನ್ನುತ್ತದೆಯೇ.@BJP4Karnataka ಉತ್ತರಿಸಬೇಕು.#BJPvsBSY
— Karnataka Congress (@INCKarnataka) October 10, 2021
ಕೆಲ ದಿನಗಳ ಹಿಂದಷ್ಟೇ ಬಿಎಸ್‌ವೈ ಮಾಜಿ ಆಪ್ತ ಸಹಾಯಕ ಉಮೇಶ್ ಆಯನೂರು(Umesh Ayanur) ಮನೆ ಮೇಲೆ ಐಟಿ ದಾಳಿಯಾಗಿತ್ತು. ಇದು ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿತ್ತು. ದಾಳೆ ವೇಳೆ ಐಟಿ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಇದು ಉಮೇಶ್ ಆಪ್ತ ಗುತ್ತಿಗೆದಾರರಲ್ಲಿ ನಡುಕ ಹುಟ್ಟುವಂತೆ ಮಾಡಿತ್ತು. ಬಿಎಸ್‌ವೈ ಕುಟುಂಬವನ್ನು ಟಾರ್ಗೆಟ್ ಮಾಡಿ ಐಟಿ ದಾಳಿ ನಡೆಸಲಾಗಿದೆ ಎಂಬ ಮಾತುಗಳು ಕೇಳಿಬಂದಿದ್ದವು. ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಈ ಐಟಿ ದಾಳಿ ರಾಜಕೀಯ ಪ್ರೇರಿತ ಅಂತಾ ಹೇಳಿದ್ದರು.
ಇದನ್ನೂ ಓದಿ: Viral News: ಪ್ರವಾಹಕ್ಕೆ ಸಿಲುಕಿದ್ದ ಮರಿ ರಕ್ಷಿಸಲು ಈ ಶ್ವಾನ ಏನು ಮಾಡಿದೆ ನೋಡಿ…
ಸ್ವತಃ ಸ್ಪಷ್ಟನೆ ನೀಡಿದ್ದ ಬಿಎಸ್‌ವೈ, ಐಟಿ ದಾಳಿ(IT Raid )ಗೂ ನಮ್ಮ ಕುಟುಂಬಕ್ಕೂ ಯಾವುದೇ ಸಂಬಂಧವಿಲ್ಲವೆಂದು ಹೇಳಿದ್ದರು. ‘ಐಟಿ ದಾಳಿ ತಡೆಯಲು ನಾವ್ಯಾರು..? ಅಧಿಕಾರಿಗಳು ಅವರ ಕರ್ತವ್ಯವನ್ನು ಮಾಡುತ್ತಾರೆ. ಇಲ್ಲಿ ಯಡಿಯೂರಪ್ಪ ಕುಟುಂಬವನ್ನು ಟಾರ್ಗೆಟ್ ಮಾಡಲಾಗುತ್ತಿಲ್ಲ. ವಿಪಕ್ಷಗಳಿಗೆ ಬೇರೆ ಯಾವುದೇ ಕಾರಣಗಳಿಲ್ಲ. ಹೀಗಾಗಿ ಐಟಿ ದಾಳಿಯನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿವೆ’ ಎಂದು ಹೇಳಿದ್ದರು. ಇದೀಗ ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ಮತ್ತೆ ಐಟಿ ದಾಳಿ ವಿಚಾರವನ್ನೇ ಕೆದಕಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ