2018ರ ಚುನಾವಣೆಗೆ ಬಿಜೆಪಿ ನಾಯಕರಿಗೆ ಟಾರ್ಗೆಟ್...!

ಮಾಜಿ ಡಿಸಿಎಂ ಆರ್. ಅಶೋಕ್ ಹೆಗಲಿಗೆ ಹೆಚ್ಚಿನ ಜವಾಬ್ದಾರಿ.

Updated: Dec 14, 2017 , 11:21 AM IST
2018ರ ಚುನಾವಣೆಗೆ ಬಿಜೆಪಿ ನಾಯಕರಿಗೆ ಟಾರ್ಗೆಟ್...!

ಬೆಂಗಳೂರು: 2018ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೇಗಾದರೂ ಅಧಿಕಾರದ ಗದ್ದುಗೆ  ಹಿಡಿಯಲು ಎಲ್ಲಾ ಪಕ್ಷಗಳು ತಾಲೀಮು ನಡೆಸುತ್ತಿವೆ. ಆದರೆ ಬಿಜೆಪಿ ಮಾತ್ರ ತನ್ನ ನಾಯಕರಿಗೆ ಟಾರ್ಗೆಟ್ ಫಿಕ್ಸ್ ಮಾಡಿದೆ. 

ಹೌದು, ರಾಜ್ಯದ ಒಟ್ಟು 224 ಸ್ಥಾನಗಳಲ್ಲಿ 150 ಸ್ಥಾನಗಳನ್ನು ಗೆಲ್ಲುವುದೇ ಬಿಜೆಪಿಯ ಗುರಿಯಾಗಿದೆ. ಬಿಜೆಪಿ ಹೈಕಮಾಂಡ್ ಮಿಷನ್ 150 ಯನ್ನು ಇಟ್ಟುಕೊಂಡು ಪ್ರತಿ ಸ್ಥಳೀಯ ನಾಯಕರ ಹೆಗಲಿಗೆ ಇಂತಿಷ್ಟು ಸ್ಥಾನಗಳನ್ನು ಗೆಲ್ಲಲೇ ಬೇಕು ಎಂಬ ಟಾರ್ಗೆಟ್ ಫಿಕ್ಸ್ ಮಾಡಿದೆ. 

ಅದರಲ್ಲೂ ಮಾಜಿ ಡಿಸಿಎಂ ಆರ್. ಅಶೋಕ್ ಹೆಗಲಿದೆ ಇದರ ಜವಾಬ್ದಾರಿ ಹೆಚ್ಚಿದೆ. ಬೆಂಗಳೂರಿನಲ್ಲಿರುವ ಒಟ್ಟು 28 ವಿಧಾನಸಭಾ ಕ್ಷೇತ್ರಗಳಲ್ಲಿ 25 ಸ್ಥಾನಗಳನ್ನು ಗೆಲ್ಲುವಂತೆ ಅಶೋಕ್ ಗೆ ಸೂಚನೆ ನೀಡಲಾಗಿದೆ. ಹಾಗಾಗಿ ಬೆಂಗಳೂರಿನ ಸಂಪೂರ್ಣ ಜವಾಬ್ದಾರಿ ಆರ್.ಅಶೋಕ್ ಅವರದಾಗಿದೆ. 

ಈ ಬಗ್ಗೆ ಮಾತನಾಡಿದ ಆರ್. ಅಶೋಕ್, ಬೆಂಗಳೂರಿನಲ್ಲಿ ಬಿಜೆಪಿಯ ಭದ್ರ ಕೋಟೆ ಇದೆ. 2008ರ ವಿಧಾನ ಸಭೆ ಚುನಾವಣೆಯಲ್ಲಿ 17 ಶಾಸಕರನ್ನು ಆಯ್ಕೆ ಮಾಡಿಕೊಂಡು ಅಧಿಕಾರಕ್ಕೆ ಬಂದಿದ್ದೆವು. ಇದೀಗ ಮತ್ತಷ್ಟು ಶ್ರಮಿಸಿದರೆ 25ರ ಗುರಿ ಅಸಾಧ್ಯವಲ್ಲ ಎಂದು ತಿಳಿಸಿದ್ದಾರೆ.