ರಾಜ್ಯದಲ್ಲಿ 2000 ಕೋಟಿ ಹೂಡಿಕೆಗೆ ಟಾಟಾ ಟೆಕ್ನಾಲಜೀಸ್ ಪ್ರಸ್ತಾವ: ಎಂ.ಬಿ ಪಾಟೀಲ

Tata Technologies in Karnataka: ಕಂಪನಿಯ ಉನ್ನತ ಅಧಿಕಾರಿಗಳು ಬುಧವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ ಈ ಸಂಬಂಧ ಪ್ರಸ್ತಾವ ಸಲ್ಲಿಸಿ ಮಾತುಕತೆ ನಡೆಸಿದರು.  

Written by - Prashobh Devanahalli | Last Updated : Jul 12, 2023, 06:31 PM IST
  • ಎಂಎಸ್ಎಂಇ ಗಳಿಗೆ 3 ಸಿಇಎಫ್ ಕೇಂದ್ರಗಳ ಸ್ಥಾಪನೆ
  • ರಾಜ್ಯದಲ್ಲಿ 2000 ಕೋಟಿ ಹೂಡಿಕೆಗೆ ಟಾಟಾ ಟೆಕ್ನಾಲಜೀಸ್ ಪ್ರಸ್ತಾವ
  • ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಹೇಳಿಕೆ
ರಾಜ್ಯದಲ್ಲಿ 2000 ಕೋಟಿ ಹೂಡಿಕೆಗೆ ಟಾಟಾ ಟೆಕ್ನಾಲಜೀಸ್ ಪ್ರಸ್ತಾವ: ಎಂ.ಬಿ ಪಾಟೀಲ  title=

ಬೆಂಗಳೂರು: ಪ್ರತಿಷ್ಠಿತ ಟಾಟಾ ಟೆಕ್ನಾಲಜೀಸ್ ಕಂಪನಿಯು 2000 ಕೋಟಿ ರೂಪಾಯಿ ಹೂಡಿಕೆ ಮಾಡಿ ರಾಜ್ಯದಲ್ಲಿ ಮೂರು ಸಾಮಾನ್ಯ ಎಂಜಿನಿಯರಿಂಗ್ ಸೌಲಭ್ಯಗಳ ಕೇಂದ್ರ (ಸಿ ಇ ಎಫ್ ಸಿ- ಕಾಮನ್ ಎಂಜಿನಿಯರಿಂಗ್ ಫೆಸಿಲಿಟಿ ಸೆಂಟರ್)ಗಳನ್ನು ಸ್ಥಾಪಿಸಲು ಮುಂದೆ ಬಂದಿದೆ. ಕಂಪನಿಯ ಉನ್ನತ ಅಧಿಕಾರಿಗಳು ಬುಧವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ ಈ ಸಂಬಂಧ ಪ್ರಸ್ತಾವ ಸಲ್ಲಿಸಿ ಮಾತುಕತೆ ನಡೆಸಿದರು.

ವಿಶೇಷವಾಗಿ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳನ್ನು (ಎಂಎಸ್ಎಂಇ) ಗಳನ್ನು ಗಮನದಲ್ಲಿರಿಸಿಕೊಂಡು ಈ ಘಟಕಗಳ ಕೇಂದ್ರಗಳನ್ನು ಸ್ಥಾಪಿಸುವುದು ಕಂಪನಿಯ ಉದ್ದೇಶವಾಗಿದೆ. ಸರ್ಕಾರ‌ ಖಾಸಗಿ ಸಹಭಾಗಿತ್ವದ ಪಿಪಿಪಿ ಮಾದರಿಯಲ್ಲಿ ಇದನ್ನು ಸ್ಥಾಪಿಸುವ ಯೋಜನೆಯಿದ್ದು, ಟಾಟಾ ಟೆಕ್ನಾಲಜೀಸ್ ಶೇಕಡ 70ರಷ್ಟು ಹೂಡಿಕೆ ಮಾಡಿದರೆ ಸರ್ಕಾರದ ಪಾಲು ಶೇಕಡ 30ರಷ್ಟು ಇರಲಿದೆ ಎಂದು ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಇದನ್ನೂ ಓದಿ: “ರಾಜ್ಯದ ಇತಿಹಾಸದಲ್ಲೇ ಇಂತಹ ಕೊಲೆ ಆಗಿರಲಿಲ್ಲ… ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ”: ಬಿಜೆಪಿ ಪ್ರತಿಭಟನೆ

ಎಂಎಸ್ಎಂಇಗಳಿಗಾಗಿ ಸಿ.ಇ.ಎಫ್.ಸಿ. ಸ್ಥಾಪನೆ ಸಂಬಂಧ ಪ್ರಸ್ತಾವ ಸಲ್ಲಿಕೆಯಾಗಿರುವುದು ರಾಜ್ಯದಲ್ಲಿ ಇದೇ ಮೊದಲು ಎನ್ನಲಾಗಿದೆ. ಪ್ರತಿ ಒಂದು ಕೇಂದ್ರಕ್ಕೆ ಸುಮಾರು 630 ಕೋಟಿ ರೂಪಾಯಿ ವೆಚ್ಚವಾಗಲಿದೆ. ಇವುಗಳಿಂದ ಈಗ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪನೆಯಾಗುತ್ತಿರುವ ಅಡ್ವಾನ್ಸ್ ಮ್ಯಾನಫ್ಯಾಕ್ಚರಿಂಗ್ 4.0, ಎಲೆಕ್ಟ್ರಿಕ್ ವೆಹಿಕಲ್ ಟೆಸ್ಟಿಂಗ್ ಮತ್ತು ಬಾಹ್ಯಾಕಾಶ ಹಾಗೂ ರಕ್ಷಣಾ ವಲಯದ ಉದ್ದಿಮೆಗಳಿಗೆ ಹೆಚ್ಚಿನ ಉಪಯೋಗ ಆಗುತ್ತದೆ. ಅದೇ ರೀತಿ ಈ ವಲಯಗಳ ಸ್ಟಾರ್ಟ್ ಅಪ್ ಗಳಿಗೂ ಇದರಿಂದ ಹೆಚ್ಚಿನ ಅನುಕೂಲವಾಗುತ್ತದೆ ಎಂದು ವಿವರಿಸಿದರು. 

ಈ ಪ್ರಸ್ತಾವ‌ ಸ್ವಾಗತಾರ್ಹ. ಸರ್ಕಾರವೂ ಎಂ.ಎಸ್.ಎಂ.ಇ.ಗಳನ್ನು ಬಲಪಡಿಸಲು ಒತ್ತು ಕೊಟ್ಟಿದೆ. ಪ್ರತಿ ಕೇಂದ್ರಕ್ಕೆ ಸುಮಾರು ಐದು ಎಕರೆಯಷ್ಟು ಜಾಗ ಬೇಕಾಗಲಿದ್ದು, ಇದನ್ನು ಎಲ್ಲಿ ಕೊಡಬೇಕೆಂಬ ಬಗ್ಗೆ ಬರುವ ದಿನಗಳಲ್ಲಿ ನಿರ್ಧರಿಸಲಾಗುತ್ತದೆ ಎಂದು ಅವರು ಹೇಳಿದರು.

ಟಾಟಾ ಟೆಕ್ನಾಲಜೀಸ್ ಅಧ್ಯಕ್ಷ ಪವನ್ ಭಗೇರಿಯಾ, ಉಪಾಧ್ಯಕ್ಷ ಪುಷ್ಕರಾಜ್ ಕೌಲಗೂಡ್, ಮುಖ್ಯಸ್ಥ ಪ್ರವೀಣ್ ದಿವೇಕರ್ ಅವರು ಇದ್ದರು. ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ ಅವರೂ ಇದ್ದರು.

ಇದನ್ನೂ ಓದಿ: Joker Felix: ನನ್ನ ಹುಡುಗಿಗೋಸ್ಕರ ಕೊಂದೆ: ಕ್ಷಣಕ್ಕೊಂದು ಹೇಳಿಕೆ ನೀಡ್ತಿರುವ ಜೋಕರ್ ಫಿಲಿಕ್ಸ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News