Tauktae Cyclone : ರಾಜ್ಯದಲ್ಲಿ 2 ದಿನ ಭಾರೀ ಮಳೆ, ಕೆಲ ಜಿಲ್ಲೆಗಳಲ್ಲಿ `ಯೆಲ್ಲೊ ಅಲರ್ಟ್`
ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು : ತೌಕ್ತೆ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ನಾಳೆಯವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ತೌಕ್ತೆ ಚಂಡಮಾರುತ(Tauktae Cyclone)ದ ಅಬ್ಬರ ಕಡಿಮೆಯಾಗಿದ್ದರೂ ಮುಂದಿನ 2 ದಿನ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮೇ 19 ರವರೆಗೆ ಮಳೆಯಾಗಲಿದ್ದು, ರಾಜ್ಯದ ಕೆಲ ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.
ಇದನ್ನೂ ಓದಿ : Shashikala Jolle : ಕೋವಿಡ್ ಲಸಿಕೆ ಪಡೆಯಲು ಹಿರಿಯ ನಾಗರೀಕರಿಗೆ ಬೇಕಿಲ್ಲ 'ಆಧಾರ್ ಕಾರ್ಡ್'..!
ತೌಕ್ತ ಚಂಡಮಾರುತದ ಪರಿಣಾಮ ಭಾರೀ ಗಾಳಿಯ ಜೊತೆಗೆ ಅರಬ್ಬಿ ಸಮುದ್ರ(Arabian Sea)ದಲ್ಲಿ ಗರಿಷ್ಠ 5 ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುತ್ತಿದ್ದು,ಮೀನುಗಾರರು ಮೇ 19 ರವರೆಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ : Black Fungus : ಬ್ಲ್ಯಾಕ್ ಫಂಗಸ್ ಬಗ್ಗೆ 'ಶಾಕಿಂಗ್' ಹೇಳಿಕೆ ನೀಡಿದ ಸಚಿವ ಸುಧಾಕರ್..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.