ಮಂಗಳೂರು : ರಾಜ್ಯ  ಕರಾವಳಿ ಪ್ರದೇಶ(Karnataka Coastal Areas)ವು ತೌಕ್ತೆ ಚಂಡಮಾರುತದ ಆರ್ಭಟಕ್ಕೆ ನಲುಗಿ ಹೋಗಿದೆ. ಶುಕ್ರವಾರ ತಡರಾತ್ರಿಯಿಂದಲೇ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ನಿನ್ನೆ ಮಧ್ಯಾಹ್ನದಿಂದ ಅರಬ್ಬೀ ಸಮುದ್ರ ರುದ್ರ ನರ್ತನ ತಾಳಿದೆ.


COMMERCIAL BREAK
SCROLL TO CONTINUE READING

ಅರಬ್ಬೀ ಸಮುದ್ರ ಭೋರ್ಗರೆಯುತ್ತಿದ್ದು, ಮಂಗಳೂರಿನ ಪಣಂಬೂರು, ಸೋಮೇಶ್ವರ, ಉಳ್ಳಾಲ, ಕೋಟೆಪುರ, ಕೈಕೋ, ಉಚ್ಚಿಲ, ಸುರತ್ಕಲ್, ಸಸಿಹಿತ್ಲು, ಬೈಕಂಪಾಡಿ ಇತರೆಡೆ ಅಲೆಗಳ ಅಬ್ಬರ ಜೋರಾಗಿದೆ. ಚಂಡಮಾರುತ(Tauktae Cyclone)ದ ಹೊಡೆತಕ್ಕೆ ಹಿಂದೂ ಸ್ಮಶಾನ ಸಮುದ್ರಪಾಲಾಗಿದೆ.


ಇದನ್ನೂ ಓದಿ : HD Deve Gowda : 'ಈ ಸಂಕಷ್ಟದಲ್ಲಿ ನನ್ನ ಹುಟ್ಟುಹಬ್ಬ ಆಚರಿಸುವುದು ಬೇಡ'


ಮಂಗಳೂರು ಹೊರವಲಯದ ಸೋಮೇಶ್ವರ ಕಡಲತೀರದಲ್ಲಿ ಕಡಲು ಪ್ರಕ್ಷುಬ್ಧಗೊಂಡಿದ್ದು, ಭಾರೀ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಭಾರೀ ಗಾಳಿ- ಮಳೆ(Rain)ಗೆ ಹಲವು ಕಟ್ಟಡಗಳು ಧರಾಶಾಹಿಯಾಗಿವೆ. ಅರಬ್ಬೀ ಸಮುದ್ರ ತೀರದ ಹಲವು ಅಂಗಡಿಗಳು ಸಮುದ್ರಪಾಲಾಗಿವೆ. ಸೋಮೇಶ್ವರ, ಸಸಿಹಿತ್ಲು, ಬೈಕಂಪಾಡಿ, ಉಳ್ಳಾಲ ಭಾಗದಲ್ಲಿ ಭಾರೀ ಅಲೆ ಅಬ್ಬರಕ್ಕೆ ಜನ ಬೆಚ್ಚಿ ಬಿದ್ದಿದ್ದಾರೆ.


ಇದನ್ನೂ ಓದಿ : ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಲಿ -ಪ್ರಿಯಾಂಕ್ ಖರ್ಗೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.