ಧ್ವಜಾರೋಹಣಕ್ಕೆ ತೆರಳುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು

ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ನಗರದ ಕಿನ್ನಾಳ ರಸ್ತೆಯಲ್ಲಿ  ಶಿಕ್ಷಕ ನಾಗಪ್ಪ ಮೃತಪಟ್ಟಿದ್ದಾರೆ.

Last Updated : Jan 26, 2019, 11:35 AM IST
ಧ್ವಜಾರೋಹಣಕ್ಕೆ ತೆರಳುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು title=

ಕೊಪ್ಪಳ: ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಶಿಕ್ಷಕರೊಬ್ಬರು ರಸ್ತೆ ಮಧ್ಯೆದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. 

ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ನಾಗಪ್ಪ ಏಳುಬಾವಿ(56) ಎಂಬುವರೇ ಹೃದಯಾಘಾತದಿಂದ ಸಾವನ್ನಪ್ಪಿದವರು. ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ನಗರದ ಕಿನ್ನಾಳ ರಸ್ತೆಯಲ್ಲಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ. 

Trending News