ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಬಿ.ಸಿ.ನಾಗೇಶ್
ಮಾದರಿ ಶಾಲೆ, ಸ್ಪೋಕನ್ ಇಂಗ್ಲಿಷ್ ತರಗತಿ, ನೈತಿಕ ವಿಜ್ಞಾನ ತರಗತಿ ಸೇರಿ ಇನ್ನಿತರ ಶೈಕ್ಷಣಿಕ ಅಭಿವೃದ್ಧಿ ಉಪಕ್ರಮಗಳನ್ನು ಅನುಷ್ಠಾನಗೊಳಿಸುವ ಗುರಿ ಇದೆ ಎಂದು ಬಿ.ಸಿ.ನಾಗೇಶ್ ಹೇಳಿದ್ದಾರೆ.
ಬೆಂಗಳೂರು: ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಗುಡ್ ನ್ಯೂಸ್ ನೀಡಿದ್ದಾರೆ. ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ಅವರು, ‘ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ ಇದೇ ತಿಂಗಳಲ್ಲಿ ಪ್ರಕಟಿಸಲಾಗುತ್ತದೆ. ನವೆಂಬರ್ ತಿಂಗಳಲ್ಲಿ ಟಿಇಟಿ ಪರೀಕ್ಷೆ ನಡೆಸಲಾಗುತ್ತದೆ’ ಎಂದು ಹೇಳಿದ್ದಾರೆ.
‘ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು 1ವರ್ಷ ಪೂರ್ಣಗೊಂಡಿದೆ. ಈ ಅವಧಿಯಲ್ಲಿ ಸುಧಾರಣೆ, ಬದಲಾವಣೆ, ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಕಳೆದ ವರ್ಷ ಕೋವಿಡ್-19 ಸಂದರ್ಭದಲ್ಲಿ ಭೌತಿಕ ತರಗತಿಗಳ ಆರಂಭ ಹಾಗೂ ಕಲಿಕಾ ನಷ್ಟ ಸರಿದೂಗಿಸಲು ಈ ವರ್ಷ ಕಲಿಕಾ ಚೇತರಿಕೆ ಕಾರ್ಯಕ್ರಮ ರೂಪಿಸಲಾಯಿತು’ ಎಂದು ಹೇಳಿದ್ದಾರೆ.
"ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ಯ ಸಂಗ್ರಾಮಕ್ಕೆ ಧುಮುಕಿದರಾ ಮಿಸ್ಟರ್ ಸಿದ್ದರಾಮಯ್ಯ?"
‘ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ, ಬದಲಾವಣೆ ತರಲಿರುವ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನುಷ್ಠಾನ, 15 ಸಾವಿರ ಶಿಕ್ಷಕರ ನೇಮಕ, ಶಾಲಾ- ಕಾಲೇಜುಗಳ 8,101 ಕೊಠಡಿಗಳ ನಿರ್ಮಾಣ, ಶಿಕ್ಷಕರ ಮುಂಬಡ್ತಿ ಹಾಗೂ ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರು ಹಾಗೂ ಬಿಸಿಯೂಟ ಕಾರ್ಯಕರ್ತರ ಗೌರವ ಸಂಭಾವನೆಯನ್ನು ಹೆಚ್ಚಳ ಮಾಡಲಾಗಿದೆ’ ಎಂದು ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ.
ಸಿದ್ದರಾಮಯ್ಯ ನಿದ್ರೆಯಲ್ಲಿಯೂ ಕೇಸರಿ ಬಣ್ಣವನ್ನು ದ್ವೇಷಿಸುತ್ತಾರೆ: ಕಟೀಲ್
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.