ರಾಯಚೂರು : ಶಾಲಾ ಸಮವಸ್ತ್ರದಲ್ಲಿ ಮಲವಿಸರ್ಜನೆ ಮಾಡಿದ ಕಾರಣಕ್ಕೆ, ವಿದ್ಯಾರ್ಥಿ ಮೇಲೆ  ಶಿಕ್ಷಕ ಬಿಸಿ ನೀರು ಎರಚಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.  ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಸಂತೆಕೆಲ್ಲೂರು ಶಾಲೆಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಸೆಪ್ಟೆಂಬರ್ 2 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 


COMMERCIAL BREAK
SCROLL TO CONTINUE READING

ಎರಡನೇ ತರಗತಿಯ ವಿದ್ಯಾರ್ಥಿಯೊಬ್ಬ ತರಗತಿಯಲ್ಲೇ ಮಲವಿಸರ್ಜನೆ ಮಾಡಿಕೊಂಡಿದ್ದ ಎಂಬ ಕಾರಣಕ್ಕೆ ಆ ಬಾಲಕನಿಗೆ ಕ್ರೂರ ಶಿಕ್ಷೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿಯ ವರ್ತನೆ ಸಹಿಸಲಾಗದೆ ಶಿಕ್ಷಕ ಬಿಸಿನೀರು ಎರಚಿದ್ದಾರೆಂದು ಆರೋಪಿಸಲಾಗಿದೆ.  ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಸಂತೆಕೆಲ್ಲೂರು ಶ್ರೀಘನಮಠೆಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. 


ಇದನ್ನೂ ಓದಿ : KPTCL Recruitment Scam: ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ ಡಿವೈಸ್ ಪೂರೈಸಿದ್ದ ಆರೋಪಿ ಬಂಧನ!


ಬಿಸಿನೀರಿನ ತಾಪಕ್ಕೆ ವಿದ್ಯಾರ್ಥಿಯ ದೇಹ ಶೇ 40% ರಷ್ಟು ಭಾಗ ಸುಟ್ಟು ಹೋಗಿದೆ. ಶಿಕ್ಷಕ ಹುಲಿಗೆಪ್ಪ ಎಂಬವರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ನಡೆದ ಬೆನ್ನಲ್ಲೇ  ಶಿಕ್ಷಕ ಹುಲಿಗೆಪ್ಪ ಶಾಲೆಗೇ ಗೈರಾಗಿದ್ದಾರೆ ಎನ್ನಲಾಗಿದೆ. ಸದ್ಯ ಗಾಯಾಳು ಅಖಿಲ್ ಗೆ ಲಿಂಗಸುಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ವೆಂಕಟೇಶ್ ಮತ್ತು ಸುನೀತಾ ದಂಪತಿಯ ಪುತ್ರ ಅಖಿಲ್ ಸಂತೆಕೆಲ್ಲೂರು ಶಾಲೆಗೆ ದಿನನಿತ್ಯ ಕೋಚಿಂಗ್ ಹೋಗುತ್ತಿದ್ದ. ಸೆಪ್ಟೆಂಬರ್ 2 ರಂದು ಈ ಘಟನೆ   ನಡೆದಿದೆ. ಆದರೆ ಇದುವರೆಗೂ ಪ್ರಕರಣ ದಾಖಲಿಸಲಾಗಿಲ್ಲ. ಪ್ರಕರಣ ದಾಖಲು ಮಾಡದಂತೆ ಪೋಷಕರ ಮೇಲೆ ಒತ್ತಡ ಹಾಕಲಾಗಿದೆ ಎನ್ನುವ ಆರೋಪ ಕೂಡಾ ಕೇಳಿ ಬಂದಿದೆ. 


ಇದನ್ನೂ ಓದಿ ಅಪ್ಪು ಫೇವರೇಟ್ ಲ್ಯಾಂಬೋರ್ಗಿನಿ ಕಾರು ದುಬೈಗೆ ಕಳುಹಿಸಿಕೊಟ್ಟ ಪತ್ನಿ ಅಶ್ವಿನಿ! ಕಾರಣವೇನು?


 



ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.