ಬೆಂಗಳೂರು: ರೈತರು ಹಾಗೂ ಸಾರಿಗೆ ನೌಕರರ ಪ್ರತಿಭಟನೆ ಮುಗಿದ ಬೆನ್ನಲ್ಲೇ ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಶಿಕ್ಷಕರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಖಾಸಗಿ ಶಾಲಾ ಶಿಕ್ಷಕರು ಹೋರಾಟ ನಡೆಸಿದ್ದಾರೆ.
ಅನುದಾನ ರಹಿತ ಖಾಸಗಿ ಶಾಲಾ ಶಿಕ್ಷಕ(Teachers)ರು ಬೆಂಗಳೂರಿನಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದ್ದು, ತಳ್ಳುಗಾಡಿಗಳಲ್ಲಿ ತರಕಾರಿಗಳನ್ನು ತಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೃದ್ಧರು ವಿಧವೆಯರು ಮತ್ತು ವಿಕಲಚೇತರಿಗೆ ‘ಸಿಹಿ ಸುದ್ದಿ’ ನೀಡಿದ ರಾಜ್ಯ ಸರ್ಕಾರ..!
ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ವಿಶೇಷ ಅನುದಾನ ನೀಡಬೇಕು, ಶಿಕ್ಷಕರನ್ನು ಕೊರೊನಾ ಯೋಧರೆಂದು ಪರಿಗಣಿಸಬೇಕು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ವಿಮಾ ಸೌಲಭ್ಯ, ಶಾಲಾ ಶುಲ್ಕ ಬಾಕಿ ಉಳಿಸಿಕೊಂಡಿರುವ ಪೋಷಕರು ತಕ್ಷಣ ಬಾಕಿ ಶುಲ್ಕ ಪಾವತಿಗೆ ಆದೇಶ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಶಿಕ್ಷಕರು ಆಗ್ರಹಿಸಿದ್ದಾರೆ.