ಕಲಬುರಗಿ : ಬಳ್ಳಾರಿ ವಿಜಯನಗರ ವೈದ್ಯಕೀಯ ಕಾಲೇಜಿನಲ್ಲಿ ರೋಗಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸರ್ಕಾರ ರಚಿಸಿರುವ ತಂಡ ನಿನ್ನೆ ಭೇಟಿ ನೀಡಿದ್ದು, ತನಿಖಾ ವರದಿಯನ್ವಯ ಕ್ರಮ ಕೈಗೊಳ್ಳಲಾಗುವುದು.


COMMERCIAL BREAK
SCROLL TO CONTINUE READING

ಇದನ್ನೂ ಓದಿ : PM Modi Birthday: ರಾಷ್ಟ್ರಪತಿ, ರಾಹುಲ್ ಹಾಗೂ ಅಮಿತ್ ಶಾ ಸೇರಿದಂತೆ ಹಲವು ಗಣ್ಯರಿಂದ ಪ್ರಧಾನಿ ಮೋದಿಗೆ ಶುಭ ಹಾರೈಕೆ


ಈ ಘಟನೆಯಿಂದ ತಮಗೂ ಅತ್ಯಂತ ನೋವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯ ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.


ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಭೇಟಿ ನೀಡಿಲ್ಲವೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗರಂ ಆಗಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಅವರು ಗರಂ ಆಗಿದ್ದಾರೋ ಇಲ್ಲವೋ ಎನ್ನುವುದು ಅವರಿಗೆ ಬಿಟ್ಟಿದ್ದು. ನಮ್ಮ ಕರ್ತವ್ಯ ನಾವು ಮಾಡುತ್ತಿದ್ದೇವೆ ಎಂದು ತಿಳಿಸಿದರು.


ಇದನ್ನೂ ಓದಿ : Numerology: ಪ್ರಧಾನಿ ಮೋದಿ ಜನಿಸಿದ ಈ ದಿನ ಹುಟ್ಟಿದವರ ಗುಣ, ವಿಶೇಷತೆಗಳಿವು


ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಎಫ್ಐಆರ್ ದಾಖಲಾಗಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಹಿಂದಿನ ಎಲ್ಲ ಪ್ರಕರಣಗಳು ವಿಫಲವಾಗಿವೆ ಎಂದು ನುಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.