Koppal: ಲಂಚ ಸ್ವೀಕರಿಸುತ್ತಿದ್ದ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ..!
ತಹಶೀಲ್ದಾರ್ ಮಂಜುನಾಥ್ ಹಿರೇಮಠ್ ಅವರು ರಾಜು ಎಂಬುವರಿಂದ ಹಣಕ್ಕೆ ಬೇಡಿಕೆಯನ್ನು ಇಟ್ಟಿದ್ದರು. ಲೋಕಾಯುಕ್ತ ಡಿವೈಎಸ್ಪಿ ಸಲೀಂ ಪಾಷಾ ನೇತೃತ್ವದಲ್ಲಿ ದಾಳಿ ನಡೆಸಿ ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ರೆಡ್ಹ್ಯಾಂಡ್ ಆಗಿ ಅಧಿಕಾರಿಯನ್ನು ಹಿಡಿಯಲಾಗಿದೆ.
ಕೊಪ್ಪಳ: ಲಂಚ ಸ್ವೀಕರಿಸುತ್ತಿದ್ದ ವೇಳೆ ತಹಶೀಲ್ದಾರ್ ಒಬ್ಬರು ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಖಾಸಗಿ ವ್ಯಕ್ತಿಯಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದ ತಹಶೀಲ್ದಾರ್ ಮಂಜುನಾಥ್ ಹಿರೇಮಠ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿ.
ಅಕ್ರಮ ಮರಳು(ಕೆಂಪು ಮಣ್ಣು) ಸಾಗಾಣಿಕೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೊಪ್ಪಳ ಜಿಲ್ಲೆಯ ಗಂಗಾವತಿ ತಹಶೀಲ್ದಾರ್ ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಇದನ್ನೂ ಓದಿ: "ಪಟ್ಟಭದ್ರ ಹಿತಾಸಕ್ತಿಗಳು ಹಿಂದೆಯೂ ಇದ್ದರು, ಈಗಲೂ ಇದ್ದಾರೆ"
ತಹಶೀಲ್ದಾರ್ ಮಂಜುನಾಥ್ ಹಿರೇಮಠ್ ಅವರು ರಾಜು ಎಂಬುವರಿಂದ ಹಣಕ್ಕೆ ಬೇಡಿಕೆಯನ್ನು ಇಟ್ಟಿದ್ದರು. ಲೋಕಾಯುಕ್ತ ಡಿವೈಎಸ್ಪಿ ಸಲೀಂ ಪಾಷಾ ನೇತೃತ್ವದಲ್ಲಿ ದಾಳಿ ನಡೆಸಿ ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ರೆಡ್ಹ್ಯಾಂಡ್ ಆಗಿ ಅಧಿಕಾರಿಯನ್ನು ಹಿಡಿಯಲಾಗಿದೆ.
ಮೊದಲು 1 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ತಹಶೀಲ್ದಾರ್ ಮಂಜುನಾಥ್ ಹಿರೇಮಠ್ 50 ಸಾವಿರ ರೂ. ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಧೃತರಾಷ್ಟ್ರನಿಗೂ ಸಿಎಂ ಸಿದ್ದರಾಮಯ್ಯರಿಗೂ ಯಾವುದೇ ವ್ಯತ್ಯಾಸ ಇಲ್ಲ: ಬಿಜೆಪಿ ಟೀಕೆ
ಸದ್ಯ ತಹಶೀಲ್ದಾರ್ ಮಂಜುನಾಥ್ ಹಿರೇಮಠ್ ಅವರನ್ನು ಬಂಧಿಸಿರುವ ಲೋಕಾಯುಕ್ತ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.