ರೋಡ್ ಶೋ ಮೂಲಕ ತೆರಳಿ ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ
ನಾಮಪತ್ರ ಸಲ್ಲಿಕೆಗೂ ಮುನ್ನ ಗಿರಿನಗರದ ಶ್ರೀ ಗಣೇಶ ದೇವಸ್ಥಾನದಲ್ಲಿ ಕುಟುಂಬದೊಂದಿಗೆ ಪೂಜೆ ಸಲ್ಲಿಸಿದರು. ಗಿರಿನಗರದ ಭಾಗದಿಂದ ನಾಮಪತ್ರ ಸಲ್ಲಿಕೆ ಮೆರವಣಿಗೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಿ ಶುಭ ಹಾರೈಸಿದರು.
ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಅಭ್ಯರ್ಥಿ ತೇಜಸ್ವಿ ಸೂರ್ಯ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದಕ್ಕೂ ಮೊದಲು ಜಯನಗರ 4ನೇ ಬ್ಲಾಕಿನ ಮಯ್ಯಾಸ್ ಹೋಟೆಲ್’ನಿಂದ ರೋಡ್ ಶೋ ಮೂಲಕ ಹೊರಟು ಬಿಬಿಎಂಪಿ ಜಂಟಿ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಂಸದ ಪ್ರತಾಪ ಸಿಂಹ, ರಾಜ್ಯಸಭಾ ಸದಸ್ಯ ಜಗ್ಗೇಶ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಶಾಸಕರಾದ ಸತೀಶ್ ರೆಡ್ಡಿ, ರವಿ ಸುಬ್ರಹ್ಮಣ್ಯ, ಉದಯ ಗರುಡಾಚಾರ್, ವಿಧಾನಪರಿಷತ್ ಸದಸ್ಯ ಶರವಣ, ಜೆಡಿಎಸ್ ಬೆಂಗಳೂರು ಮಹಾನಗರ ಅಧ್ಯಕ್ಷ ರಮೇಶ್ ಗೌಡ, ಜೆಡಿಎಸ್ ಬೆಂಗಳೂರು ದಕ್ಷಿಣ ಅಧ್ಯಕ್ಷ ತುಳಸಿರಾಮ್ ಹಾಜರಿದ್ದರು.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ಪಕ್ಷದ ಮಾಜಿ ಮಹಾಪೌರರು, ಉಪ ಮಹಾಪೌರರು, ಬಿ.ಬಿ.ಎಂ.ಪಿ. ನಿಕಟಪೂರ್ವ ಸದಸ್ಯರು, ಪಕ್ಷದ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಪ್ರಕೋಷ್ಠಗಳ ಅಧ್ಯಕ್ಷರು, ಪದಾಧಿಕಾರಿಗಳು, ಮಂಡಲದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಗಿರಿನಗರದ ಶ್ರೀ ಗಣೇಶ ದೇವಸ್ಥಾನದಲ್ಲಿ ಕುಟುಂಬದೊಂದಿಗೆ ಪೂಜೆ ಸಲ್ಲಿಸಿದರು. ಗಿರಿನಗರದ ಭಾಗದಿಂದ ನಾಮಪತ್ರ ಸಲ್ಲಿಕೆ ಮೆರವಣಿಗೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಿ ಶುಭ ಹಾರೈಸಿದರು.
ಇದನ್ನೂ ಓದಿ: ಕೊಳವೆ ಬಾವಿಗೆ ಬಿದ್ದ ಮಗುವಿನ ರಕ್ಷಣೆ: ಜಿಲ್ಲಾ ಉಸ್ತುವಾರಿ ಸಚಿವರ ಶ್ಲಾಘನೆ
ನರೇಂದ್ರ ಮೋದಿಯವರನ್ನು 3ನೇ ಬಾರಿಗೆ ಪ್ರಧಾನಿಯನ್ನಾಗಿ ಆಯ್ಕೆ ಮಾಡಲು ಬೆಂಗಳೂರು ದಕ್ಷಿಣ ಕ್ಷೇತ್ರದ ಜನತೆಯ ಉತ್ಸಾಹ, ಹುಮ್ಮಸ್ಸು ಪ್ರೇರಣಾದಾಯಿ ಆಗಿದೆ ಎಂದು ತೇಜಸ್ವಿ ಸೂರ್ಯ ಇದೇ ವೇಳೆ ತಿಳಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ