ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆಯಾಗಿ ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ಬಿಜೆಪಿ ರಾಜ್ಯ ಉಪಾಧ್ಯಕ್ಷೆಯಾಗಿ ತೇಜಸ್ವಿನಿ ಅನಂತ್ ಕುಮಾರ್ ನೇಮಕವಾಗಿದ್ದಾರೆ ಎಂದು ಪ್ರಕಟಿಸಲು ಸಂತೋಷವಾಗುತ್ತಿದೆ ಎಂದಿದ್ದಾರೆ.
I am very delighted to announce that Smt. @Tej_AnanthKumar has been appointed as state vice president of @BJP4Karnataka.
Wishing her all the very best.
— Chowkidar B.S. Yeddyurappa (@BSYBJP) April 2, 2019
ಬೆಂಗಳೂರು ದಕ್ಷಿಣ ಕ್ಷೇತ್ರದಿಂದ 6 ಬಾರಿ ಸಂಸದರಾಗಿ ನೇಮಕವಾಗಿದ್ದ ಅನಂತ್ ಕುಮಾರ ಅವರ ನಿಧನದ ಬಳಿಕ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಗೆ ಅದೇ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ನೀಡುವುದು ಕೊನೆಯ ಕ್ಷಣದವರೆಗೂ ಬಹುತೇಕ ಖಚಿತವಾಗಿತ್ತು. ಆದರೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಳಿಕ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಲಾಗಿತ್ತು. ಇದರಿಂದಾಗಿ ಅನಂತ್ ಕುಮಾರ್ ಬೆಂಬಲಿಗರು ತೀವ್ರ ಅಸಮಾಧಾನಗೊಂಡಿದ್ದರು.