ಬೆಂಗಳೂರು: ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ವಿತರಿಸುವ ಟೂಲ್‌ಕಿಟ್‌ ಖರೀದಿ ಹಗರಣಕ್ಕೆ ಸಂಬಂಧಿಸಿ ರಾಜ್ಯದ‌ ಜನರನ್ನು ವಂಚಿಸುತ್ತಿರುವ ಸಚಿವ ಅಶ್ವಥ್‌ ನಾರಾಯಣ್‌ ರವರನ್ನು ತಕ್ಷಣವೇ ವಜಾಗೊಳಿಸಬೇಕೆಂದು ಮುಖ್ಯಮಂತ್ರಿಗಳಿಗೆ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆಗ್ರಹಿಸಿದರು.


COMMERCIAL BREAK
SCROLL TO CONTINUE READING

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೃಥ್ವಿ ರೆಡ್ಡಿ, “ನಾವು ಮಾಡಿರುವ ಆರೋಪಕ್ಕೆ ಉತ್ತರ ನೀಡಿರುವ ಸಚಿವ ಅಶ್ವಥ್‌ ನಾರಾಯಣ್‌ರವರು 5.27 ಕೋಟಿ ರೂ. ಉಳಿಸಿದ್ದೇವೆ ಎಂದು ನುಣುಚಿಕೊಳ್ಳುವ ಪ್ರಯತ್ನ ಮಾಡಿದ್ದಾರೆ.ನಿಜಾಂಶ ಏನೆಂದರೆ, ಏಕೈಕ‌ ಬಿಡ್ಡರ್ ಇದ್ದಿದ್ದರಿಂದ ಮರು ಟೆಂಡರ್ ಮಾಡಿ, ಮೊದಲನೇ ಬಾರಿಯ ಪ್ರಕ್ರಿಯೆಯಲ್ಲಿ‌ ಸೋತ ಕಂಪನಿಗೇ ಟೆಂಡರ್ ನೀಡಲಾಗಿದೆ. ಇದು ಕಮಿಷನ್ ಪಡೆಯಲು ಮಾಡಿದ ಕೆಲಸವೇ ಹೊರತು ಹಣ ಉಳಿಸಲು ಅಲ್ಲ. ಟೆಂಡರ್ ಗಿಟ್ಟಿಸಿಕೊಳ್ಳಲು ನಕಲಿ ಕಾಗದ ಪತ್ರಗಳ ಬಗ್ಗೆ ತುಟಿ ಬಿಚ್ಚದ ಸಚಿವರು, ಹಣ ಉಳಿಸಿದ್ದೇನೆ ಎಂದಷ್ಟೇ ಹೇಳುತ್ತಿದ್ದಾರೆ” ಎಂದು ಮಾಹಿತಿ ನೀಡಿದರು.


“ನಿಯಮಾವಳಿ ಪ್ರಕಾರ ಬೇಡಿಕೆಯ 30% ಸಾಮಾಗ್ರಿಗಳನ್ನು ಪೂರೈಸುವ ಶಕ್ತಿ ಹೊಂದಿರುವ ಬಗ್ಗೆ ದಾಖಲೆ ಸಲ್ಲಿಸಬೇಕು. ಆದರೆ, ನಕಲಿ ದಾಖಲೆ ಸೃಷ್ಟಿಸಿರುವುದು GST PORTAL ನಲ್ಲೇ ಬಯಲಾಗಿದೆ. ಸಚಿವರು, ಕಾರ್ಯದರ್ಶಿಗಳು ಇದನ್ನು ಏಕೆ‌ ಪ್ರಶ್ನಿಸಲಿಲ್ಲ‌ ಎಂದರು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.