Congress: ಗ್ರಾ. ಪಂ. ಚುನಾವಣೆ ಫಲಿತಾಂಶ ಬೆನ್ನಲ್ಲೇ ಕಾಂಗ್ರೆಸ್ಗೆ ‘ಶುರುವಾಯ್ತು ಟೆನ್ಷನ್’..!
ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಬಿಜೆಪಿ ಗಾಳ ಹಾಕುತ್ತಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯಾದ್ಯಂತ ಭಾರಿ ಕುತೂಹಲ ಮೂಡಿಸಿದ್ದ ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಕಾಂಗ್ರೆಸ್ಗೆ ಆಪರೇಷನ್ ಭಯ ಕಾಡುತ್ತಿದೆ.
ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಬಿಜೆಪಿ ಗಾಳ ಹಾಕುತ್ತಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah), ಇದು ಕೆಪಿಸಿಸಿಗೆ ಸತ್ವ ಪರೀಕ್ಷೆ ಕಾಲ ಅಂತ ಟ್ವೀಟ್ ಮಾಡಿದ್ದಾರೆ.
Sumalatha: ತೆರೆ ಮೇಲೆ ಬರಲಿದೆ ನಟಿ ಸುಮಲತಾ 'ರಾಜಕೀಯ ಜೀವನ ಆಧಾರಿತ ಬಯೋಪಿಕ್'..!
'ಪಂಚಾಯತ್ ವ್ಯವಸ್ಥೆ ಜಾರಿಗೆ ಬಂದ ದಿನದಿಂದ ಗ್ರಾಮೀಣ ಪ್ರದೇಶದ ಮತದಾರರು ಕಾಂಗ್ರೆಸ್ ಅನ್ನು ಎಂದೂ ಕೈ ಬಿಟ್ಟಿಲ್ಲ. ರೈತಪರ, ಬಡವರ ಪರ ಮತ್ತು ಗ್ರಾಮ ಭಾರತದ ಪರವಾಗಿರುವ ಕಾಂಗ್ರೆಸ್ ನೀತಿ ಮತ್ತು ಕಾರ್ಯಕ್ರಮಗಳೇ ಇದಕ್ಕೆ ಕಾರಣ. ಗೆಲುವಿನ ಪರಂಪರೆ ಈ ಬಾರಿಯೂ ಮುಂದುವರಿಯಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Corona Newstrain : ನೈಟ್ ಕರ್ಫ್ಯು ಬೇಕು ಎಂದ ಅಶೋಕ್, ಬೇಡ ಎಂದ ಸುಧಾಕರ್, ಗೊಂದಲದಲ್ಲಿ ಸರ್ಕಾರ
'ಭಾರತೀಯ ಜನತಾ ಪಕ್ಷದ ರೈತ ವಿರೋಧಿ ಮತ್ತು ಬಡವರ ವಿರೋಧಿ ನೀತಿಯಿಂದ ರೋಸಿಹೋದ ಗ್ರಾಮೀಣ ಜನತೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತಿದ್ದಾರೆ' ಎಂದು ಟೀಕಿಸಿದ್ದಾರೆ.
BJP: ಗ್ರಾ. ಪಂ. ಚುನಾವಣಾ ಫಲಿತಾಂಶ: ಬಿಜೆಪಿಗೆ ಭರ್ಜರಿ ಮುನ್ನಡೆ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.