Accident: ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಹಾಗೂ ತೀರ್ಥಹಳ್ಳಿ ಸಮೀಪದ ಶಿವಪುರದ ಬಳಿಕ ಸಂಭವಿಸಿರುವ ಪ್ರತ್ಯೇಕ ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು ಮೂರು ಮಂದಿ ಪ್ರಾಣಕಳೆದುಕೊಂಡಿದ್ದಾರೆ.
ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿಯ ಅಂಚೆಮನೆ ಕ್ರಾಸ್ ಬಳಿ ಅಪಘಾತ ಬೆಂಗಳೂರು ಮಾರ್ಗವಾಗಿ ತುಮಕೂರು ಕಡೆ ಚಲಿಸುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಐವರಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಮೂಲದ ಇಬ್ಬರು ಮಹಿಳೆಯರು ಮೃತಪಟ್ಟಿದ್ದರೆ, ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಮತ್ತೊರ್ವ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.
ಇದನ್ನೂ ಓದಿ- ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿದ ಸಿಎಂ: ರಾಜ್ಯದ ಪ್ರಸ್ತಾವನೆ ಮಂಜೂರು ಮಾಡಲು ಮನವಿ
ತುಮಕೂರಿನಲ್ಲಿ ನಾಮಕರಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಿವರಾಜಪುರ ಬಳಿ ಭೀಕರ ಅಪಘಾತ - ಸ್ಥಳದಲ್ಲೇ ಓರ್ವ ಸಾವು..!
ತಡ ರಾತ್ರಿ ಭೀಕರ ಅಪಘಾತವೊಂದು ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ಸಮೀಪದ ಶಿವರಾಜಪುರ ಬಳಿ ನಡೆದಿದೆ.
ಇದನ್ನೂ ಓದಿ- ಬಿಸಿಲಿನಲ್ಲಿ ಆನೆಗಳ ಜಲಕ್ರೀಡೆ: ವಿಡಿಯೋ ವೈರಲ್
ಮಂಗಳೂರಿಂದ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿ ನಿದ್ರೆ ಮಂಪರಿನಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತಪಟ್ಟ ವ್ಯಕ್ತಿಯನ್ನು ಶಾಶ್ವತ್ (30 ವರ್ಷ) ಎಂದು ಗುರುತಿಸಲಾಗಿದ್ದು ಇವರು ಟೆಂಕ್ ಬೈಲು ನಿವಾಸಿಯಾಗಿದ್ದು ಡಿಸಿಸಿ ಬ್ಯಾಂಕ್ ನಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
https://bit.ly/3AClgDdAndroid Link -
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
https://apple.co/3wPoNgrApple Link -
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
https://bit.ly/3n6d2R8Twitter Link -
https://bit.ly/3HhqmcjFacebook Link -
Youtube Link - https://www.youtube.com/live/RNn4I7iIaYE?si=3G4W5dh0oCdFnu-T
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









