ಮಂಡ್ಯ: ಭೀಕರ ರಸ್ತೆ ಅಪಘಾತ, 2 ಸಾವು, 20 ಜನರಿಗೆ ಗಾಯ

ಜಿಲ್ಲೆಯ ಮಳವಳ್ಳಿ ತಾಲೂಕಿನ ಬಳಿ ಕಾರು ಮತ್ತು ಬುಲೆರೋ ವಾಹನ ಪರಸ್ಪರ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,ಇದರಿಂದಾಗಿ ಇಬ್ಬರು ಸಾವನ್ನಪ್ಪಿದ್ದು ಒಟ್ಟು 20 ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

Written by - Zee Kannada News Desk | Last Updated : Apr 11, 2023, 07:30 PM IST
  • ಈ ದುರ್ಘಟನೆಯಲ್ಲಿ ಗಾಯಗೊಂಡವರನ್ನು ಕೊಳ್ಳೆಗಾಲ ತಾಲೂಕಿನ ಮೊದಲಿಯಮ್ಮ(60) ಜಾಸ್ಮಿನ್ ಮೇರಿ(58) ಎಂದು ಗುರುತಿಸಲಾಗಿದ್ದು,
  • ಗಾಯಗೊಂಡ 20 ಕ್ಕೂ ಅಧಿಕ ಜನರಿಗೆ ಮಳವಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
  • ತೀವ್ರಗಾಯಗೊಂಡವರನ್ನು ಮಂಡ್ಯದ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮಂಡ್ಯ: ಭೀಕರ ರಸ್ತೆ ಅಪಘಾತ, 2 ಸಾವು, 20 ಜನರಿಗೆ ಗಾಯ title=

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಬಳಿ ಕಾರು ಮತ್ತು ಬುಲೆರೋ ವಾಹನ ಪರಸ್ಪರ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,ಇದರಿಂದಾಗಿ ಇಬ್ಬರು ಸಾವನ್ನಪ್ಪಿದ್ದು ಒಟ್ಟು 20 ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಹೊಗೆನಕಲ್ನಲ್ಲಿ ಹಗಲು ದರೋಡೆ: ₹750 ಬೋಟಿಂಗ್ ಗೆ ₹3500 ಶುಲ್ಕ- ಪ್ರವಾಸಿಗರ ಆಕ್ರೋಶ

ಈ ದುರ್ಘಟನೆಯಲ್ಲಿ ಗಾಯಗೊಂಡವರನ್ನು ಕೊಳ್ಳೆಗಾಲ ತಾಲೂಕಿನ ಮೊದಲಿಯಮ್ಮ(60) ಜಾಸ್ಮಿನ್ ಮೇರಿ(58) ಎಂದು ಗುರುತಿಸಲಾಗಿದ್ದು,ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಈ ಘಟನೆಯ ನಂತರ ಮೃತರ ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿದ್ದು, ಗಾಯಗೊಂಡ 20 ಕ್ಕೂ ಅಧಿಕ ಜನರಿಗೆ ಮಳವಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ತೀವ್ರಗಾಯಗೊಂಡವರನ್ನು ಮಂಡ್ಯದ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: ಪ್ರವಾಸಕ್ಕೆ ತೆರಳಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಈಗ ಸ್ಥಳಕ್ಕೆ ಬೆಳಕವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ತಮ್ಮ ವ್ಯಾಪ್ತಿಯ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News