ವಿಜಯಪುರ: ವಿಜಯಪುರ ಜಿಲ್ಲೆಯನ್ನು ಬಾರಾಮತಿಯಂತೆ ಅಭಿವೃದ್ಧಿಪಡಿಸುವ ಗುರಿ ಇದೆ ಎಂದು ಸಚಿವ ಎಂ.ಬಿ.ಪಾಟೀಲ್ ಅವರು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಅವರು ಜಿಲ್ಲೆಯ ಸಂಸ್ಥಾನ ಹಿರೇಮಠ ಮನಗೂಳಿಯ ಲಿಂ|| ಡಾ. ಮಹಾಂತ ಶಿವಾಚಾರ್ಯ ಮಹಾಸ್ವಾಮಿಗಳವರ 11ನೇ ಪುಣ್ಯಾರಾಧನೆ ಹಾಗೂ ಶ್ರೀ ಷ.ಬ್ರ. ಅಭಿನವಸಂಗನ ಬಸವ ಶಿವಾಚಾರ್ಯ ಮಹಾಸ್ವಾಮಿಗಳವರ ಪಟ್ಟಾಧಿಕಾರದ ದಶಮಾನೋತ್ಸವದ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.


ನಂತರ ನಡೆದ ಧರ್ಮ ಸಭೆಯಲ್ಲಿ ಮಾತನಾಡಿದೆ. ಪೂಜ್ಯ ಶ್ರೀಗಳ ಹಾಗೂ ಶ್ರೀಮಠದ ಕೊಡುಗೆಗಳನ್ನು ಸ್ಮರಿಸಿ, ಶ್ರೀಮಠದಿಂದ ಇನ್ನೂ ಹೆಚ್ಚಿನ ಕೆಲಸಗಳಾಗಲಿ ಎಂಬ ಆಶಯ ವ್ಯಕ್ತಪಡಿಸಿದೆ. ಕೃಷಿ, ಕೈಗಾರಿಕೆ, ಹೈನುಗಾರಿಕೆ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಯ ಮೂಲಕ ವಿಜಯಪುರ ಜಿಲ್ಲೆಯನ್ನು ಮಹಾರಾಷ್ಟ್ರದ ಬಾರಾಮತಿಯಂತೆ, ಮಾಡುವ ಗುರಿ ಇರುವುದಾಗಿ ತಿಳಿಸಿದೆ ಎಂದು ಹೇಳಿದರು.


ಇದನ್ನೂ ಓದಿ: ಕವಿಪವಿ ವೆಬಿನಾರ್: ಯಾವುದೇ ಮಾಧ್ಯಮದ ಭವಿಷ್ಯ ಆತಂಕದಲ್ಲಿಲ್ಲ; ಸಂಪಾದಕರ ಅಭಿಮತ


ಬಾಳೆಹೊನ್ನೂರು ಶ್ರೀ ರಂಭಾಪುರಿ ಮಠದ ಶ್ರೀ ಶ್ರೀ 1008 ಜಗದ್ಗುರು ಡಾ. ವೀರ ಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಇಂದಿನ ಕಾರ್ಯಕ್ರಮದ ಪಾವನ ಸಾನಿಧ್ಯ ವಹಿಸಿದ್ದರು. ಪರಮ ಪೂಜ್ಯ ಅಭಿನವ ಸಂಗನ ಬಸವ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಿತು. ವಿವಿಧ ಮಠಗಳ ಪೂಜ್ಯಗುರುಗಳು, ಜನಪ್ರತಿನಿಧಿಗಳು, ಮುಖಂಡರು ತಾಯಂದಿರು, ಶ್ರೀ ಮಠದ ಅಸಂಖ್ಯಾತ ಭಕ್ತರು ಸಮಾರಂಭದಲ್ಲಿ ಉಪಸ್ಥಿತರಿದ್ದರು.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.