ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೇಲೆ ದಾಳಿ ಮಾಡಿರುವುದು ಕನ್ನಡಿಗರ ಮೇಲೆ, ಕರ್ನಾಟಕದ ಮೇಲೆ ದಾಳಿಗೆ ಸಮ. ಸರಕಾರ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಕೂಡಲೇ ಆ ದುರುಳರಿಗೆ ಕನ್ನಡಿಗರ ಶಕ್ತಿ ಏನೆಂಬುದನ್ನು ತೋರಿಸಬೇಕು ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Sunil Kumar : 'ಕನ್ನಡದ ವಿರುದ್ಧ ಅಗೌರವ ತೋರಿಸುವುದನ್ನು ಸಹಿಸುವುದಿಲ್ಲ'


ಈ ಕುರಿತಾಗಿ ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿರುವ ಕುಮಾರಸ್ವಾಮಿ ಅವರು "ಬೆಳಗಾವಿಯಲ್ಲಿ ಕಳೆದ ರಾತ್ರಿ ಪುಂಡರು ಪೊಲೀಸ್‌ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವುದು ಅಕ್ಷಮ್ಯ. ವಿಧಾನಮಂಡಲ ಅಧಿವೇಶನಕ್ಕೆ ಹೋಗಲು ಪಾಸ್‌ ಅಂಟಿಸಲಾಗಿದ್ದ ವಾಹನಗಳನ್ನೇ ಗುರಿ ಮಾಡಲಾಗಿದೆ. ಕನ್ನಡಿಗರ ಹೆಮ್ಮೆ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಹಾಳು ಮಾಡಿರುವುದು ಕ್ಷಮಾರ್ಹವಲ್ಲದ ಅಪರಾಧ. ಖಂಡನೀಯ ಎಂದು ಹೇಳಿದ್ದಾರೆ.


ಬೆಳಗಾವಿಯಲ್ಲಿ ಪ್ರಕ್ಷುಬ್ಧತೆ ಸೃಷ್ಟಿಸಿ ಭಾಷಾ ವೈಷಮ್ಯ ಹೆಚ್ಚಿಸುವುದು ದುರುಳರ ಉದ್ದೇಶವಿದ್ದಂತಿದೆ. ಶಾಂತಿಯನ್ನು ಕದಡಿ ಜನರಲ್ಲಿ ಭಯಭೀತಿ ಉಂಟು ಮಾಡಲು ಪುಂಡರನ್ನು ಪ್ರಚೋದಿಸಿದವರನ್ನು ಹೊರಗೆಳೆದು ಶಿಕ್ಷಿಸಬೇಕು. ಈ ಪುಂಡಾಟದ ಹಿಂದೆ ದೊಡ್ಡ ಹುನ್ನಾರವೇ ಇರುವಂತಿದೆ ಎಂದು ಹೇಳಿದರು.


ಇದನ್ನೂ ಓದಿ:  ಬೆಳಗಾವಿಯಲ್ಲಿ ಪುಂಡಾಟಿಕೆ ಖಂಡನೀಯ: ಪುಂಡರನ್ನು ಸದೆಬಡಿಯುತ್ತೇವೆ ಎಂದ ಸಿಎಂ ಬೊಮ್ಮಾಯಿ


ಬೆಳಗಾವಿ ವಿವಾದ ಮುಗಿದ ಅಧ್ಯಾಯ.ಆದಾಗ್ಯೂ ಕೆಲ ವಿಚ್ಛಿಧ್ರಕಾರಿ ಶಕ್ತಿಗಳು ಆ ಭಾಗದಲ್ಲಿ ಅಶಾಂತಿ ಸೃಷ್ಟಿಸುತ್ತ ಕನ್ನಡಿಗರು-ಮರಾಠಿಗರ ನಡುವೆ ವೈಷಮ್ಯಕ್ಕೆ ಕಾರಣವಾಗುತ್ತಿದ್ದಾರೆ.ಅಂಥ ಶಕ್ತಿಗಳನ್ನು ಸರಕಾರ ಮೂಲೋತ್ಪಾಟನೆ ಮಾಡಬೇಕು. ಪುಂಡರನ್ನು ಕೂಡಲೇ ಬೇಟೆಯಾಡಿ ಇನ್ನೆಂದೂ ಅಂಥ ತಪ್ಪು ಮಾಡದಂತೆ ತಕ್ಕಶಾಸ್ತಿ ಮಾಡಬೇಕು ಎಂದು ಅವರು ಆಗ್ರಹಿಸಿದರು.


ಇದನ್ನೂ ಓದಿ: ವಾಹನಗಳ ಮೇಲೆ ಕಲ್ಲು ತೂರಾಟ: ಬೆಳಗಾವಿಯಲ್ಲಿ 144 ಸೆಕ್ಷನ್ ಜಾರಿ


ಸರಕಾರಿ ಕಾರುಗಳನ್ನು ಗುರಿ ಮಾಡಿರುವುದು ರಾಜ್ಯ ಸರಕಾರವನ್ನೇ ಗುರಿ ಮಾಡಿದಂತೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೇಲೆ ದಾಳಿ ಮಾಡಿರುವುದು ಕನ್ನಡಿಗರ ಮೇಲೆ, ಕರ್ನಾಟಕದ ಮೇಲೆ ದಾಳಿಗೆ ಸಮ. ಸರಕಾರ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಕೂಡಲೇ ಆ ದುರುಳರಿಗೆ ಕನ್ನಡಿಗರ ಶಕ್ತಿ ಏನೆಂಬುದನ್ನು ತೋರಿಸಬೇಕು.ಬೆಳಗಾವಿಯಲ್ಲಿ ಭಯೋತ್ಪಾದನೆ ಸೃಷ್ಟಿಸುತ್ತಿರುವ ಈ ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರುವುದಿಲ್ಲ. ತಕ್ಕಪಾಠ ಕಲಿಸುವ ಕಾಲ ಸನ್ನಿಹಿತವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಬಿಸಿಎಂ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆ ಸೌಲಭ್ಯ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.