ಬಿಜೆಪಿ ರಾಜಕೀಯ ಕಾರಣಗಳಿಂದಾಗಿ ಸಿದ್ದರಾಮಯ್ಯನವರ ವಿರುದ್ಧ ಅಪಪ್ರಚಾರ ಮಾಡುತ್ತಿದೆ-ರಾಮಲಿಂಗಾರೆಡ್ಡಿ
ಬಿಜೆಪಿ ನಾಯಕರು ಹಾಗೂ ಹಿಂದುಳಿದ ವರ್ಗಗಳ ಘಟಕ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಬಗ್ಗೆ ವಿನಾಕಾರಣ ಟೀಕೆ, ಅಪಪ್ರಚಾರ ಮಾಡುತ್ತಿದ್ದಾರೆ.ಅಧಿಕಾರಕ್ಕೋಸ್ಕರ ಕೆಲವರು ಬಿಜೆಪಿಗೆ ಹೋಗಿದ್ದಾರೆ ಎಂದರೇ ಹೊರತು ಹೊಟ್ಟೆಪಾಡಿಗೆ ಹೋಗಿದ್ದಾರೆ ಎಂದು ಹೇಳಿಲ್ಲ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಬಿಜೆಪಿ ನಾಯಕರು ಹಾಗೂ ಹಿಂದುಳಿದ ವರ್ಗಗಳ ಘಟಕ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಬಗ್ಗೆ ವಿನಾಕಾರಣ ಟೀಕೆ, ಅಪಪ್ರಚಾರ ಮಾಡುತ್ತಿದ್ದಾರೆ.ಅಧಿಕಾರಕ್ಕೋಸ್ಕರ ಕೆಲವರು ಬಿಜೆಪಿಗೆ ಹೋಗಿದ್ದಾರೆ ಎಂದರೇ ಹೊರತು ಹೊಟ್ಟೆಪಾಡಿಗೆ ಹೋಗಿದ್ದಾರೆ ಎಂದು ಹೇಳಿಲ್ಲ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇನ್ನೂ ಮುಂದುವರೆದು ಮಾತನಾಡಿದ ಅವರು ಬಿಜೆಪಿಯವರು ವಿಚಾರಗಳನ್ನು ತಿರುಚುವುದರಲ್ಲಿ ನಿಪುಣರು.ಸುಳ್ಳು, ವಿಷಯಾಂತರ ಮಾಡುವುದು ಬಿಜೆಪಿ ಹುಟ್ಟುಗುಣ.ರಾಜ್ಯ ಹಾಗೂ ದೇಶದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ವಿಷಯಾಂತರ ಮಾಡಿಕೊಂಡು ಬರುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ-ಪಡಿತರಾದಾರರಿಗೆ ಬಿಗ್ ಶಾಕ್ : ಇಂದಿನಿಂದ ಉಚಿತ ಪಡಿತರ ಯೋಜನೆ ಬಂದ್!
2008ರಿಂದ 2013ರವರೆಗೂ ಬಿಜೆಪಿಯ 5 ವರ್ಷ ಸರ್ಕಾರ, 2013ರಿಂದ 2018ರವರೆಗೂ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹರಿಜನರ ಕಲ್ಯಾಣಕ್ಕೆ ಯಾರು ಏನು ಸಾಧ್ಯನೆ ಮಾಡಿದ್ದಾರೆ ಎಂದು ನೋಡಿದರೆ ಯಾರಿಗೆ ದಲಿತರು, ತುಳಿತಕ್ಕೆ ಒಳ್ಗಾದವರ ಮೇಲೆ ಕಾಳಜಿ ಇದೆ ಎಂದು ಗೊತ್ತಾಗುತ್ತದೆ.ಕಾಂಗ್ರೆಸ್ (Congress) ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಪಾಲಿಗೆ ಐತಿಹಾಸಿಕ ಕಾನೂನು ತಂದು ಜನಸಂಖ್ಯೆ ಅನುಗುಣವಾಗಿ ಬಜೆಟ್ ನಲ್ಲಿ ಅನುದಾನ ನೀಡಲು ಮುಂದಾಗಿದೆ.
ಇದನ್ನೂ ಓದಿ-UP Elections 2022: ಪ್ರಿಯಾಂಕಾ ಗಾಂಧಿಯಾ 'ಏಳು ಪ್ರತಿಜ್ಞೆಗಳು' ಯಾವುವು ಗೊತ್ತಾ?
ದಲಿತರ ಕಲ್ಯಾಣಕ್ಕೆ ಬಿಜೆಪಿ ಸರ್ಕಾರ 5 ವರ್ಷದಲ್ಲಿ 22,261 ಕೋಟಿ ರೂ. ಕೊಟ್ಟರೆ, ಕಾಂಗ್ರೆಸ್ ಸರ್ಕಾರ ಅವರಿಗಿಂತ ನಾಲ್ಕು ಪಟ್ಟು ಅಂದರೆ 88,395 ಕೋಟಿ ರೂ.ನೀಡಿದೆ.
ಸಮಾಜ ಕಲ್ಯಾಣ ಇಲಾಖೆಯಲ್ಲಿ ಬಿಜೆಪಿ 9542 ಕೋಟಿ ರೂ.ಕೊಟ್ಟರೆ, ಕಾಂಗ್ರೆಸ್ ಸರ್ಕಾರ 23,798 ಕೋಟಿ ನೀಡಿದೆ. ಬಿಜೆಪಿ ಕೇವಲ 196 ವಸತಿ ಶಾಲೆಗಳನ್ನು ನಿರ್ಮಾಣ ಮಾಡಿದರೆ ಕಾಂಗ್ರೆಸ್ ಸರ್ಕಾರ ಪ್ರತಿ ಹೊಬಳಿಗೆ ಒಂದು ವಸತಿ ಶಾಲೆಯಂತೆ 270 ವಸತಿಶಾಲೆಗಳು, ಮೆಟ್ರಿಕ್ ನಂತರದ 200 ವಿದ್ಯಾರ್ಥಿ ನಿಲಯಗಳು ಪ್ರಾರಂಭಿಸಿ 24,300 ವಿದ್ಯಾರ್ಥಿಗಳಿಗೆ ನೆರವಾಗಿದ್ದರು ಎಂದು ರಾಮಲಿಂಗಾರೆಡ್ಡಿ ಅಂಕಿ ಅಂಶಗಳ ಸಮೇತವಾಗಿ ವಿವರಿಸಿದರು.
ಹೀಗೆ ಪ್ರತಿ ವಿಚಾರದಲ್ಲೂ ಕಾಂಗ್ರೆಸ್ ಸರ್ಕಾರ ದಲಿತರ ಕಲ್ಯಾಣಕ್ಕಾಗಿ ಬಿಜೆಪಿಗಿಂತ ನಾಲ್ಕು ಪಟ್ಟು ಹೆಚ್ಚಿನ ಕೊಡುಗೆ ನೀಡಿದೆ.ಬಿಜೆಪಿ ರಾಜಕೀಯ ಕಾರಣಗಳಿಂದಾಗಿ ಸಿದ್ದರಾಮಯ್ಯನವರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.
ಇದನ್ನೂ ಓದಿ: ನೂರು ಕೋಟಿ ವಸೂಲಿ ಪ್ರಕರಣದಲ್ಲಿ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಬಂಧನ
100 ಬಾರಿ ಸುಳ್ಳು ಹೇಳಿ ಅದನ್ನೇ ನಿಜ ಮಾಡುವುದು ಬಿಜೆಪಿ ಕೆಲಸ. ಬಿಜೆಪಿ ಅವರಿಗೆ ದಲಿತರ ಮೇಲೆ ನಿಜಕ್ಕೂ ಕಾಳಜಿ ಇರುವುದಾದರೆ ಮೋದಿ ಅವರಿಗೆ ಹೇಳಿ ಜನಸಂಖ್ಯೆ ಆಧಾರದ ಮೇಲೆ ಬಜೆಟ್ ನಲ್ಲಿ ಹಣ ಮೀಸಲಿಡುವ ಕಾನೂನನ್ನು ದೇಶದಾದ್ಯಂತ ಮಾಡಲಿ ನೋಡೋಣ.ರಾಜ್ಯದಿಂದ ಆಯ್ಕೆಯಾಗಿರುವ 25 ಸಂಸದರು ರಾಜ್ಯಕ್ಕೆ ಅನ್ಯಾಯ ಆಗುತ್ತಿದ್ದರೂ ಮೋದಿ ಎದುರು ನಿಂತು ಮಾತನಾಡುತ್ತಿಲ್ಲ. ನೆರೆ ಪರಿಹಾರದಿಂದ, ಜಿಎಸ್ಟಿ ಬಾಕಿ, ಆರ್ಥಿಕ ಅನುದಾನ ಸೇರಿದಂತೆ ಪ್ರತಿ ಹಂತದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಅದನ್ನು ಪ್ರಶ್ನಿಸುವ ಧೈರ್ಯ ಯಾರೂ ಮಾಡುತ್ತಿಲ್ಲ ಎಂದು ಅವರು ಪ್ರಶ್ನಿಸಿದರು.
ಇದನ್ನೂ ಓದಿ-ಪಡಿತರಾದಾರರಿಗೆ ಬಿಗ್ ಶಾಕ್ : ಇಂದಿನಿಂದ ಉಚಿತ ಪಡಿತರ ಯೋಜನೆ ಬಂದ್!
ಇದೇ ವೇಳೆ ಬಿಜಪಿ ನಾಯಕ ನಾರಾಯಣ ಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು,‘ನಮ್ಮಲ್ಲಿ ದಲಿತ ಸಮುದಾಯಕ್ಕೆ ಸೇರಿದ ರಂಗನಾಥ್, ರಾಥೋಡ್, ಖರ್ಗೆ, ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಬಿಜೆಪಿ ಅವರು ಎಷ್ರು ದಲಿತರಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ?’ಎಂದು ಪ್ರಶ್ನಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ