ಬೆಳಗಾವಿ: ರೈತರಿಗೆ ಸರಿಯಾಗಿ ಬೆಳೆ ಪರಿಹಾರ ನೀಡದ ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿ ಯಾವುದೂ ಇಲ್ಲವೆಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಕಿಡಿಕಾರಿದ್ದಾರೆ. ಬೆಳಗಾವಿ ಚಳಿಗಾಲ ಅಧಿವೇಶನ(Belagavi Winter Session)ದಲ್ಲಿ ಮಂಗಳವಾರ ಮಾತನಾಡಿರುವ ಅವರು, ‘2019ರಲ್ಲಿ ಬಂದ ಭಾರಿ ಪ್ರವಾಹದಿಂದ ಬಿದ್ದ ಮನೆಗಳು 2.47 ಲಕ್ಷ. ಅದರಲ್ಲಿ 1 ಲಕ್ಷದ 14 ಸಾವಿರ ಮನೆಗಳಿಗೆ ಇನ್ನೂ ಪರಿಹಾರ ನೀಡಿಲ್ಲ. ಸೂರು ಕಳೆದುಕೊಂಡ ಬಡ ಜನ ದಿಕ್ಕು ತೋಚದೆ ಕೂತಿದ್ದಾರೆ. ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿ ಯಾವುದೂ ಇಲ್ಲ’ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Farmers) ವಿರೋಧಿಯಾಗಿದೆ. ಶೇ.33ಕ್ಕಿಂತ ಕಡಿಮೆ ಬೆಳೆ ಹಾನಿಗೆ ಪರಿಹಾರ ನೀಡಲ್ಲ. ಬೆಳೆದು ನಿಂತ ಬೆಳೆಗಳು ಹಾನಿಯಾದಾಗ ಮಾತ್ರ ಪರಿಹಾರ ನೀಡಲಾಗುತ್ತೆ. ಕಟಾವು ಆಗಿರುವ ಬೆಳೆ ಮಳೆಯಿಂದ ಹಾನಿಯಾದರೆ ಅದಕ್ಕೆ ಪರಿಹಾರ ಸಿಗಲ್ಲ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ ನಿಯಮಗಳು ಕೊನೆಯ ಬಾರಿ ಪರಿಷ್ಕರಣೆಗೊಂಡಿದ್ದು 2015ರಲ್ಲಿ. ಹಳೆಯ ನಿಯಮಗಳಿಗೆ ಬದಲಾವಣೆ ತಂದು ನಷ್ಟದಲ್ಲಿರುವ ಎಲ್ಲ ರೈತರಿಗೆ ಪರಿಹಾರ ನೀಡುವಂತೆ ಪರಿಷ್ಕರಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.


ಪರಿಷತ್ ಫೈಟ್ : ಗೆದ್ದವರು ಯಾರು..? ಸೋತವರು ಯಾರು..? ಇಲ್ಲಿದೆ ಸಂಪೂರ್ಣ ಮಾಹಿತಿ


ಸಾವಿರ ಕೋಟಿ ಒಡೆಯನಿಗೆ ಕೈಹಿಡಿಯದ ಅದೃಷ್ಟ: ‘ಕೆಜಿಎಫ್ ಬಾಬು’ಗೆ ಹೀನಾಯ ಸೋಲು..!


UPA Govt.)ದ ಅವಧಿಯ ಬಜೆಟ್ ಗಾತ್ರ 16 ಲಕ್ಷದ 65 ಸಾವಿರ ಕೋಟಿ ರೂ. ಇತ್ತು. ಕೇಂದ್ರದ ಈಗಿನ ಬಜೆಟ್ ಗಾತ್ರ 34 ಲಕ್ಷದ 83 ಸಾವಿರ ಕೋಟಿ ರೂ. ಆಗಿದೆ. ಬಜೆಟ್ ಗಾತ್ರ ಹೆಚ್ಚಾದಂತೆ NDRFನ ಗಾತ್ರ, ರಾಜ್ಯಗಳಿಗೆ ನೀಡುವ ಪರಿಹಾರದ ಹಣ ಹೆಚ್ಚಾಗಬೇಕಲ್ಲವೇ? ರಾಜ್ಯ ವಿಪತ್ತು ಪರಿಹಾರ ನಿಧಿ ನಿಯಮಗಳ ಅನ್ವಯ 2019ರಲ್ಲಿ ರಾಜ್ಯ ಬಿಜೆಪಿ ಸರ್ಕಾರ ಪರಿಹಾರ ನೀಡಿದ್ದು 1,652 ಕೋಟಿ ರೂ., ನೀಡಬೇಕಾದುದ್ದು 3,891 ಕೋಟಿ ರೂ. 2020ರಲ್ಲಿ 1,318 ಕೋಟಿ ರೂ. ಪರಿಹಾರ ನೀಡಲಾಗಿದೆ. ಕಳೆದ 2 ವರ್ಷದಲ್ಲಿ ಒಟ್ಟು 2,971 ರೂ. ಕೋಟಿ ಮಾತ್ರ ಪರಿಹಾರ ನೀಡಲಾಗಿದೆ’ ಅಂತಾ ಸಿದ್ದರಾಮಯ್ಯ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.