ಬೆಂಗಳೂರು: ಬಿಜೆಪಿ ತನ್ನ ಆಡಳಿತದಲ್ಲಿ ದಲಿತ ವಿರೋಧಿ ವಾತಾವರಣ ನಿರ್ಮಿಸುತ್ತಿದೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ. ಕೊಪ್ಪಳ ಜಿಲ್ಲೆ ಮಿಯಾಪುರದಲ್ಲಿ ದಲಿತರ ಮಗು ದೇವಸ್ಥಾನ ಪ್ರವೇಶಿಸಿದ್ದಕ್ಕೆ ಹೆತ್ತವರಿಗೆ ದಂಡ ವಿಧಿಸಿರುವ ಅಮಾನವೀಯ ಘಟನೆಯನ್ನು ಖಂಡಿಸಿ ಕಾಂಗ್ರೆಸ್ ಟ್ವೀಟ್ ಮಾಡಿದೆ. ‘ದಲಿತರಿಗೆ ಮೂತ್ರ ಕುಡಿಸುವುದರಿಂದ ಹಿಡಿದು ಬಹಿಷ್ಕಾರ, ಹಲ್ಲೆಯ ಪ್ರಕರಣಗಳು ಹೆಚ್ಚುತ್ತಿವೆ. ಮನುವಾದಿ ಬಿಜೆಪಿ ಸರ್ಕಾರದ ಆಡಳಿತದಲ್ಲಿ ದಲಿತರಿಗೆ ನೆಮ್ಮದಿಯ ಬದುಕಿಲ್ಲದಂತಾಗಿದೆ. ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಕಟ್ಟಲು ಹೊರಟ ಹಿಂದೂರಾಷ್ಟ್ರದ ಅಡಿಗಲ್ಲು ಇದೇನಾ!?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
#ದಲಿತವಿರೋಧಿಬಿಜೆಪಿ ಹ್ಯಾಶ್ ಟ್ಯಾಗ್ ಬಳಸಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ‘ಮನುಸ್ಮೃತಿಯನ್ನು ನಂಬಿರುವ ಬಿಜೆಪಿ ತನ್ನ ಗುಪ್ತ ಅಜೆಂಡಾವಾದ ದಲಿತ ವಿರೋಧಿ ವಾತಾವರಣವನ್ನು ವ್ಯವಸ್ಥಿತವಾಗಿ
ಮನುಸ್ಮೃತಿಯನ್ನು ನಂಬಿರುವ ಬಿಜೆಪಿ ತನ್ನ ಗುಪ್ತ ಅಜೆಂಡಾವಾದ ದಲಿತ ವಿರೋಧಿ ವಾತಾವರಣವನ್ನು ವ್ಯವಸ್ಥಿತವಾಗಿ
ಸ್ಥಾಪಿಸುತ್ತಿರುವ ಪರಿಣಾಮದಿಂದಲೇ ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ.@BJP4Karnataka ಪಕ್ಷ ಸಂಪುಟದಲ್ಲಿ ದಲಿತರಿಗೆ ಅವಕಾಶ ನೀಡದೆ ತನಗಿರುವ ದಲಿತರ ಮೇಲಿನ ಅಸಹನೆಯನ್ನ ಬಹಿರಂಗಪಡಿಸಿದೆ.#ದಲಿತವಿರೋಧಿಬಿಜೆಪಿ— Karnataka Congress (@INCKarnataka) September 21, 2021
ಇದನ್ನೂ ಓದಿ: ಸಿನಿಮಾ ಪ್ರಿಯರಿಗೆ ಸದ್ಯದಲ್ಲಿಯೇ ಗುಡ್ ನ್ಯೂಸ್: ಥಿಯೇಟರ್ ಗಳ ಮೇಲೆ ಹೇರಿದ್ದ ನಿರ್ಬಂಧ ತೆರವು?!
ಸ್ಥಾಪಿಸುತ್ತಿರುವ ಪರಿಣಾಮದಿಂದಲೇ ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ’ ಎಂದು ಆರೋಪಿಸಿದೆ. ‘ಕೇಸರಿ ಪಕ್ಷ ತನ್ನ ಸಂಪುಟದಲ್ಲಿ ದಲಿತರಿಗೆ ಅವಕಾಶ ನೀಡದೆ ತನಗಿರುವ ದಲಿತರ ಮೇಲಿನ ಅಸಹನೆಯನ್ನು ಬಹಿರಂಗಪಡಿಸಿದೆ’ ಅಂತಾ ಕಾಂಗ್ರೆಸ್ ಕುಟುಕಿದೆ.
ಪ್ರಧಾನಿ ನರೇಂದ್ರ ಮೋದಿಗೆ ಬಿಎಸ್ ವೈ ಎಚ್ಚರಿಕೆ ಸಂದೇಶ
'@BSYBJP ಅವರನ್ನು ಮೂಲೆಗುಂಪು ಮಾಡುವ @BJP4Karnataka ಪ್ರಯತ್ನಕ್ಕೆ BSY ಅವರು ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ನಿಮ್ಮ ಆಟ ನಡೆಯದು ಎಂದು ತಮ್ಮ ಕುರ್ಚಿ ಕಿತ್ತುಕೊಂಡ @narendramodi ಅವರಿಗೂ ಸಂದೇಶ ಕಳಿಸಿದ್ದಾರೆ.
ಬಿಜೆಪಿ 'ನಾ ಕೊಡೆನು' ಎಂದರೆ BSY 'ನಾ ಬಿಡೆನು' ಎನ್ನುತ್ತಿದ್ದಾರೆ!#BJPvsBJP
— Karnataka Congress (@INCKarnataka) September 20, 2021
ತನ್ನ ಮತ್ತೊಂದು ಟ್ವೀಟ್ ನಲ್ಲಿ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆಂಬುದನ್ನು ವ್ಯಂಗ್ಯವಾಗಿ ಟೀಕಿಸಿದೆ. ‘ಬಿ.ಎಸ್.ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡುವ ಬಿಜೆಪಿ ಪ್ರಯತ್ನಕ್ಕೆ BSY ಅವರೇ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ನಿಮ್ಮ ಆಟ ನಡೆಯದು ಎಂದು ತಮ್ಮ ಕುರ್ಚಿ ಕಿತ್ತುಕೊಂಡ ಪ್ರಧಾನಿ ನರೇಂದ್ರ ಮೋದಿಯವರಿಗೂ ಅವರು ಎಚ್ಚರಿಕೆ ಸಂದೇಶ ಕಳಿಸಿದ್ದಾರೆ. ಬಿಜೆಪಿ ‘ನಾ ಕೊಡೆನು’ ಎಂದರೆ BSY ‘ನಾ ಬಿಡೆನು’ ಎನ್ನುತ್ತಿದ್ದಾರೆ!’ ಅಂತಾ ವ್ಯಂಗ್ಯವಾಡಿದೆ.
ಇದನ್ನೂ ಓದಿ: Karnataka CET Results: ಮೈಸೂರಿನ ಎಚ್.ಕೆ.ಮೇಘನ್ ರಾಜ್ಯಕ್ಕೆ ಮೊದಲ ರ‍್ಯಾಂಕ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.