ಬೆಂಗಳೂರು: ಬಿಜೆಪಿ ತನ್ನ ಆಡಳಿತದಲ್ಲಿ ದಲಿತ ವಿರೋಧಿ ವಾತಾವರಣ ನಿರ್ಮಿಸುತ್ತಿದೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ. ಕೊಪ್ಪಳ ಜಿಲ್ಲೆ ಮಿಯಾಪುರದಲ್ಲಿ ದಲಿತರ ಮಗು ದೇವಸ್ಥಾನ ಪ್ರವೇಶಿಸಿದ್ದಕ್ಕೆ ಹೆತ್ತವರಿಗೆ ದಂಡ ವಿಧಿಸಿರುವ ಅಮಾನವೀಯ ಘಟನೆಯನ್ನು ಖಂಡಿಸಿ ಕಾಂಗ್ರೆಸ್ ಟ್ವೀಟ್ ಮಾಡಿದೆ. ‘ದಲಿತರಿಗೆ ಮೂತ್ರ ಕುಡಿಸುವುದರಿಂದ ಹಿಡಿದು ಬಹಿಷ್ಕಾರ, ಹಲ್ಲೆಯ ಪ್ರಕರಣಗಳು ಹೆಚ್ಚುತ್ತಿವೆ. ಮನುವಾದಿ ಬಿಜೆಪಿ ಸರ್ಕಾರದ ಆಡಳಿತದಲ್ಲಿ ದಲಿತರಿಗೆ ನೆಮ್ಮದಿಯ ಬದುಕಿಲ್ಲದಂತಾಗಿದೆ. ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಕಟ್ಟಲು ಹೊರಟ ಹಿಂದೂರಾಷ್ಟ್ರದ ಅಡಿಗಲ್ಲು ಇದೇನಾ!?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.


COMMERCIAL BREAK
SCROLL TO CONTINUE READING

#ದಲಿತವಿರೋಧಿಬಿಜೆಪಿ ಹ್ಯಾಶ್ ಟ್ಯಾಗ್ ಬಳಸಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ‘ಮನುಸ್ಮೃತಿಯನ್ನು ನಂಬಿರುವ ಬಿಜೆಪಿ ತನ್ನ ಗುಪ್ತ ಅಜೆಂಡಾವಾದ ದಲಿತ ವಿರೋಧಿ ವಾತಾವರಣವನ್ನು ವ್ಯವಸ್ಥಿತವಾಗಿ


ಸಿನಿಮಾ ಪ್ರಿಯರಿಗೆ ಸದ್ಯದಲ್ಲಿಯೇ ಗುಡ್ ನ್ಯೂಸ್: ಥಿಯೇಟರ್ ಗಳ ಮೇಲೆ ಹೇರಿದ್ದ ನಿರ್ಬಂಧ ತೆರವು?!


ಸ್ಥಾಪಿಸುತ್ತಿರುವ ಪರಿಣಾಮದಿಂದಲೇ ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ’ ಎಂದು ಆರೋಪಿಸಿದೆ. ‘ಕೇಸರಿ ಪಕ್ಷ ತನ್ನ ಸಂಪುಟದಲ್ಲಿ ದಲಿತರಿಗೆ ಅವಕಾಶ ನೀಡದೆ ತನಗಿರುವ ದಲಿತರ ಮೇಲಿನ ಅಸಹನೆಯನ್ನು ಬಹಿರಂಗಪಡಿಸಿದೆ’ ಅಂತಾ ಕಾಂಗ್ರೆಸ್ ಕುಟುಕಿದೆ.


ಪ್ರಧಾನಿ ನರೇಂದ್ರ ಮೋದಿಗೆ ಬಿಎಸ್ ವೈ ಎಚ್ಚರಿಕೆ ಸಂದೇಶ


Karnataka CET Results: ಮೈಸೂರಿನ ಎಚ್‌.ಕೆ.ಮೇಘನ್ ರಾಜ್ಯಕ್ಕೆ ಮೊದಲ ರ‍್ಯಾಂಕ್


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.