ಹುಬ್ಬಳ್ಳಿ ಗಲಭೆಗೆ ಬಿಜೆಪಿ ಕುಮ್ಮಕ್ಕು ಕಾರಣ ಹೊರತು ಕಾಂಗ್ರೆಸ್ ಅಲ್ಲ: ಡಿ.ಕೆ. ಶಿವಕುಮಾರ್

ಆಡಳಿತ ಪಕ್ಷ ಬಿಜೆಪಿ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ ಡಿ.ಕೆ. ಶಿವಕುಮಾರ್, ಹುಬ್ಬಳ್ಳಿ ಗಲಭೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರಾಗಲಿ , ಸಚಿವ ಆರ್.ಅಶೋಕ್ ಅವರಾಗಲಿ ಪರಿಸ್ಥಿತಿ ತಿಳಿಗೊಳಿಸಲು ಯಾವುದೇ ಪ್ರಯತ್ನ ಮಾಡಿಲ್ಲ. ಬದಲಿಗೆ ಅವರು ಬೇಕು ಬೇಕೆಂದೇ ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಿದ್ದಾರೆ. ಸುಖಾ ಸುಮ್ಮನೆ ನಮ್ಮ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದರೆ ಯಾವುದೇ ಪ್ರಯೋಜನವಿಲ್ಲ ಎಂದು ಕಿಡಿ ಕಾರಿದರು.

Written by - Prashobh Devanahalli | Edited by - Yashaswini V | Last Updated : Apr 21, 2022, 01:53 PM IST
  • ಕಾಂಗ್ರೆಸ್ ನವರಿಗೂ ಹುಬ್ಬಳ್ಳಿ ಗಲಭೆಗೂ ಯಾವುದೇ ಸಂಬಂಧ ಇಲ್ಲ.
  • ನಮ್ಮವರು ಶಾಂತಿ ಕಾಪಾಡಲು ಶ್ರಮಿಸಿದ್ದಾರೆ.
  • 40 % ಕಮಿಷನ್ ವಿಚಾರ ಮುಚ್ಚಿಹಾಕಲು ಈ ವಿಚಾರವನ್ನು ದೊಡ್ಡದಾಗಿ ಬಿಂಬಿಸಲಾಗುತ್ತಿದೆ - ಡಿ.ಕೆ. ಶಿವಕುಮಾರ್
ಹುಬ್ಬಳ್ಳಿ ಗಲಭೆಗೆ ಬಿಜೆಪಿ ಕುಮ್ಮಕ್ಕು ಕಾರಣ ಹೊರತು ಕಾಂಗ್ರೆಸ್ ಅಲ್ಲ: ಡಿ.ಕೆ. ಶಿವಕುಮಾರ್ title=
Dk Shivakumar slame bjp

ಬೆಂಗಳೂರು: ಹುಬ್ಬಳ್ಳಿ ವಿಚಾರದಲ್ಲಿ ಶಾಂತಿ ಕಾಪಾಡಲು ನಮ್ಮ ಪಕ್ಷದ ಎಲ್ಲ ನಾಯಕರು ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದಾರೆ. ಆದರೂ ಕಾಂಗ್ರೆಸ್ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಈ ಎಲ್ಲ ಘಟನೆಗಳಿಗೆ ಪ್ರಚೋದನೆ ಬಿಜೆಪಿಯವರ ಕುಮ್ಮಕ್ಕಿನಿಂದಾದ ಟ್ವೀಟ್ ಕಾರಣ. ಅದರ ಬಗ್ಗೆ ತನಿಖೆ ಆಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಅವರು, ಕೆಲವು ಕಿಡಿಗೇಡಿಗಳು ಕಾನೂನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದಾಗ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದಾರೆ. ನಮ್ಮ ಜಿಲ್ಲಾಧ್ಯಕ್ಷರಾದ ಅಲ್ತಾಫ್ ಪರಿಸ್ಥಿತಿ ನಿಯಂತ್ರಿಸುವ ಸಂದರ್ಭದಲ್ಲಿ ಕಲ್ಲೇಟು ತಿಂದು, ಕೈ ಮುರಿದುಕೊಂಡು, ನೋವು ಅನುಭವಿಸುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ- ಕಾಂಗ್ರೆಸ್ ಈಗ ದೇಶದಲ್ಲಿ ಮುಳುಗುತ್ತಿರುವ ಹಡಗು- ಬಿ.ಎಸ್. ಯಡಿಯೂರಪ್ಪ

ಇದೇ ಸಂದರ್ಭದಲ್ಲಿ ಆಡಳಿತ ಪಕ್ಷ ಬಿಜೆಪಿ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ ಡಿ.ಕೆ. ಶಿವಕುಮಾರ್, ಹುಬ್ಬಳ್ಳಿ ಗಲಭೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರಾಗಲಿ , ಸಚಿವ ಆರ್.ಅಶೋಕ್ ಅವರಾಗಲಿ ಪರಿಸ್ಥಿತಿ ತಿಳಿಗೊಳಿಸಲು ಯಾವುದೇ ಪ್ರಯತ್ನ ಮಾಡಿಲ್ಲ. ಬದಲಿಗೆ ಅವರು ಬೇಕು ಬೇಕೆಂದೇ ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಿದ್ದಾರೆ. ಸುಖಾ ಸುಮ್ಮನೆ ನಮ್ಮ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದರೆ ಯಾವುದೇ ಪ್ರಯೋಜನವಿಲ್ಲ ಎಂದು ಕಿಡಿ ಕಾರಿದರು.

ಇದನ್ನೂ ಓದಿ- ಕರ್ನಾಟಕಕ್ಕೆ ಇಂದು ಅರವಿಂದ ಕೇಜ್ರಿವಾಲ್ ಭೇಟಿ: ರಾಜ್ಯ ವಿಧಾನಸಭಾ ಚುನಾವಣೆಗೆ ಆಪ್ ಕಿಕ್ ಸ್ಟಾರ್ಟ್

ತಮ್ಮ 40 % ಕಮಿಷನ್ ವಿಚಾರ ಮುಚ್ಚಿಹಾಕಲು ಹುನ್ನಾರ:
ಕಾಂಗ್ರೆಸ್ ನವರಿಗೂ ಹುಬ್ಬಳ್ಳಿ ಗಲಭೆಗೂ ಯಾವುದೇ ಸಂಬಂಧ ಇಲ್ಲ. ನಮ್ಮವರು ಶಾಂತಿ ಕಾಪಾಡಲು ಶ್ರಮಿಸಿದ್ದಾರೆ. ಆದರೆ,  ಬಿಜೆಪಿ ಅವರು ತಮ್ಮ 40 % ಕಮಿಷನ್ ವಿಚಾರ ಮುಚ್ಚಿಹಾಕಲು ಈ ವಿಚಾರವನ್ನು ದೊಡ್ಡದಾಗಿ ಬಿಂಬಿಸುತ್ತಿದ್ದಾರೆ ಎಂದು ಡಿಕೆಶಿ ಆರೋಪಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
 

Trending News