'ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಬಿರುಕು ಮೂಡಿಸಲು ಬಿಜೆಪಿ ಪ್ರಯತ್ನಿಸುತ್ತಿದೆ'

ಮುಂದಿನ ಮುಖ್ಯಮಂತ್ರಿ ಯಾರೆಂಬ ಬಗ್ಗೆ ನಮ್ಮ ಪಕ್ಷದ ಕೆಲವು ಶಾಸಕರು ವ್ಯಕ್ತಪಡಿಸಿರುವ ಅಭಿಪ್ರಾಯ ಅವರ ವೈಯಕ್ತಿಕ ಅಭಿಪ್ರಾಯ, ನಮ್ಮ ಪಕ್ಷದ ನಿಲುವಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ.

Last Updated : Jun 22, 2021, 11:10 PM IST
  • ಮುಂದಿನ ಮುಖ್ಯಮಂತ್ರಿ ಯಾರೆಂಬ ಬಗ್ಗೆ ನಮ್ಮ ಪಕ್ಷದ ಕೆಲವು ಶಾಸಕರು ವ್ಯಕ್ತಪಡಿಸಿರುವ ಅಭಿಪ್ರಾಯ ಅವರ ವೈಯಕ್ತಿಕ ಅಭಿಪ್ರಾಯ, ನಮ್ಮ ಪಕ್ಷದ ನಿಲುವಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ.
  • ಇದೇ ವೇಳೆ ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷವನ್ನು ಸೇರಿದ್ದ ಶಾಸಕರನ್ನು ಮತ್ತೆ ಪಕ್ಷಕ್ಕೆ ಕರೆದುಕೊಳ್ಳುವುದಿಲ್ಲ ಬೇಕಾದರೆ ಅವರು ಬಾಂಬೆಗಾದರೂ ಹೋಗಲಿ ದೆಹಲಿಗಾದ್ರೂ ಹೋಗಲಿ ನಾವು ಅವರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ"
 'ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಬಿರುಕು ಮೂಡಿಸಲು ಬಿಜೆಪಿ ಪ್ರಯತ್ನಿಸುತ್ತಿದೆ' title=
file photo

ಬೆಂಗಳೂರು: ಮುಂದಿನ ಮುಖ್ಯಮಂತ್ರಿ ಯಾರೆಂಬ ಬಗ್ಗೆ ನಮ್ಮ ಪಕ್ಷದ ಕೆಲವು ಶಾಸಕರು ವ್ಯಕ್ತಪಡಿಸಿರುವ ಅಭಿಪ್ರಾಯ ಅವರ ವೈಯಕ್ತಿಕ ಅಭಿಪ್ರಾಯ, ನಮ್ಮ ಪಕ್ಷದ ನಿಲುವಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Siddaramaiah : '2023 ರ ಎಲೆಕ್ಷನ್ ನಲ್ಲಿ ಸ್ಪರ್ಧಿಸುತ್ತೇನೆ, ಆದ್ರೆ, ಯಾವ ಮತ ಕ್ಷೇತ್ರ ಅಂತ ನಿರ್ಧರಿಸಿಲ್ಲ'

ವಿಧಾನಸಭೆಯ ಚುನಾವಣೆಯಲ್ಲಿ ಬಹುಮತ ಪಡೆದ ನಂತರ ಸಿಎಂ ಯಾರಾಗಬೇಕೆಂದು ಶಾಸಕಾಂಗ ಪಕ್ಷದ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನಿಸಲಿದೆ. ಆದ್ದರಿಂದ ಈಗ ಸಿಎಂ ಸ್ಥಾನದ ಬಗ್ಗೆ ಚರ್ಚೆ ಮಾಡುವುದು ಅನವಶ್ಯಕ ಎಂದು ತಿಳಿಸಿದ್ದಾರೆ.

ಮುಂದಿನ ವಿಧಾನಸಸಭಾ  ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಮುಂದಿರುವ ಪ್ರಮುಖ ಗುರಿಯಾಗಿದೆ. ಇದಕ್ಕಾಗಿ ಈಗ ಪಕ್ಷದ ಎಲ್ಲ ನಾಯಕರು ತಮ್ಮ ತಮ್ಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ ನಮ್ಮ ವಿರೋಧಿ ಪಕ್ಷಗಳು ನಮ್ಮೆಲ್ಲರ ನಡುವೆ ಭಿನ್ನಾಭಿಪ್ರಾಯವನ್ನು ಹುಟ್ಟು ಹಾಕುವ ಯತ್ನಕ್ಕೆ ಕೈ ಹಾಕಿವೆ. ಆದರೆ ಅವರ ಈ ದುರುದ್ದೇಶವು ಈಡೇರುವುದಿಲ್ಲ ಎಂದು ಸಿದ್ಧರಾಮಯ್ಯ (Siddaramaiah) ಹೇಳಿದರು.

ಇದನ್ನೂ ಓದಿ: ಬಿಜೆಪಿಗೆ ಬಿ.ಎಸ್.ಯಡಿಯೂರಪ್ಪ ಬೇಡದ ಕೂಸಾಗಿದ್ದಾರೆ-ಸಿದ್ಧರಾಮಯ್ಯ

ಬಿಜೆಪಿಯಲ್ಲಿಯೇ ಭಿನ್ನಮತ ಸ್ಪೋಟಗೊಂಡು ಉರಿಯುತ್ತಿದೆ. ದೆಹಲಿಯಿಂದ ಬಂದ ಪಕ್ಷದ ಪ್ರತಿನಿಧಿಯೂ ಕೈಚೆಲ್ಲಿ ಹಿಂದಿರುಗಿದ್ದಾರೆ. ಈ ಜಗಳದಿಂದಾಗಿ ಈಗ ಸಂಪೂರ್ಣ ಸರ್ಕಾರ ಸ್ಥಬ್ದವಾಗಿದೆ.ಈ ವೈಫಲ್ಯದಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಬಿರುಕು ಮೂಡಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: "ಸಿಎಂ ಯಡಿಯೂರಪ್ಪ ಘೋಷಿಸಿರುವ ಪ್ಯಾಕೇಜ್ ಊಟಕ್ಕಿಲ್ಲದ ಉಪ್ಪಿನಕಾಯಿಯಂತಿದೆ"

ಇದೇ ವೇಳೆ ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷವನ್ನು ಸೇರಿದ್ದ ಶಾಸಕರನ್ನು ಮತ್ತೆ ಪಕ್ಷಕ್ಕೆ ಕರೆದುಕೊಳ್ಳುವುದಿಲ್ಲ ಬೇಕಾದರೆ ಅವರು ಬಾಂಬೆಗಾದರೂ ಹೋಗಲಿ ದೆಹಲಿಗಾದ್ರೂ ಹೋಗಲಿ ನಾವು ಅವರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ" ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News