ಬೆಂಗಳೂರು: ಮಾಜಿ ಸಚಿವ ಆರ್.ಅಶೋಕ್ ಬಕೆಟ್ ಹಿಡಿದುಕೊಂಡೇ ರಾಜಕಾರಣ ಮಾಡುವವವರು ಎಂಬ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿಕೆ ವಿಚಾರವಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ ವ್ಯಂಗ್ಯವಾಡಿದೆ. ಈ ಬಗ್ಗೆ ಶನಿವಾರ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ʼಬಿಜೆಪಿಯವರೇ ಬಿಜೆಪಿಯವರಿಗೆ ಕೊಟ್ಟಿರುವ ಹೆಸರು ʼಬಕೆಟ್ ಜನತಾ ಪಾರ್ಟಿ!ʼ ಎಂದು ಟೀಕಿಸಿದೆ. 


COMMERCIAL BREAK
SCROLL TO CONTINUE READING

ʼಬಿಜೆಪಿಗೆ ಬಿಜೆಪಿಗರಿಂದಲೇ ಸಿಕ್ಕಿದ್ದು ಅದೆಷ್ಟು ಹೆಸರುಗಳು! ಭ್ರಷ್ಟ ಜನತಾ ಪಾರ್ಟಿ, ಬ್ಲಾಕ್ಮೇಲ್ ಜನತಾ ಪಾರ್ಟಿ, ಬ್ಲೂ ಬಾಯ್ಸ್ ಜನತಾ ಪಾರ್ಟಿ ಈಗ ಹೊಸದಾಗಿ ಬಕೆಟ್ ಜನತಾ ಪಾರ್ಟಿ! ಆರ್.ಅಶೋಕ್‌ ಅವರೇ, ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ಯಾರಿಗೆ ಬಕೆಟ್ ಹಿಡಿದಿರಿ? ಯಾವ ಬ್ರಾಂಡ್ ಬಕೆಟ್ ಹಿಡಿದಿರಿ? ಯಾರಿಗೆ ಬಕೆಟ್ ಹಿಡಿದು ನಿಮ್ಮ ಅಕ್ರಮಗಳನ್ನು ಮುಚ್ಚಿಕೊಂಡಿರಿ?ʼ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.


CM Ibrahim : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಜೆಡಿಎಸ್‌ನಿಂದ ಸಿ.ಎಂ. ಇಬ್ರಾಹಿಂ ಉಚ್ಛಾಟನೆ..!


ʼಬಿಜೆಪಿಯಲ್ಲಿನ ಕಚ್ಚಾಟದಿಂದಾಗಿ ಸಾಮ್ರಾಟರು "ಶೋಕ" ರಾಗ ಹಾಡುತ್ತಿದ್ದಾರೆ. ಅಶೋಕರಲ್ಲಿ ಆ ಕಳೆದು "ಶೋಕ" ಮಾತ್ರ ಉಳಿದುಕೊಂಡಿದೆ! ಸದನದಲ್ಲಿ ಏನು ಚರ್ಚಿಸಬೇಕು, ಏನು ಮಾಡಬೇಕು ಎನ್ನುವುದು ವಿರೋಧ ಪಕ್ಷದ ನಾಯಕನ ತೀರ್ಮಾನವೋ, ಶಾಸಕನೊಬ್ಬನ ತೀರ್ಮಾನವೋ? ಬಿಜೆಪಿ ಪಕ್ಷದ ವಿರೋಧ ಪಕ್ಷದ ನಾಯಕ ಅಶೋಕ್ ಅವರೋ ಅಥವಾ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರೋ ಎಂಬ ಗೊಂದಲ ಸ್ವತಃ ಬಿಜೆಪಿಗರಿಗೆ ಇದ್ದಂತಿದೆ. ಶಾಸಕಾಂಗ ಪಕ್ಷದ ನಾಯಕನ ನಿರ್ಧಾರಕ್ಕೆ ಅವರ ಶಾಸಕರೇ ಕಿಮ್ಮತ್ತು ಕೊಡದಿರುವುದು #BucketJanathaParty ಅನುಭವಿಸುತ್ತಿರುವ ದುರಂತ ಸ್ಥಿತಿ. ಬಕೆಟ್ ಹಿಡಿದು ವಿಪಕ್ಷ ನಾಯಕರಾಗಿದ್ದಕ್ಕೆ ನಿಮಗೆ ಈ ದುಃಸ್ಥಿತಿಯೇ  ಆರ್.ಅಶೋಕ್‌?ʼ ಎಂದು ಕಾಂಗ್ರೆಸ್‌ ಕುಟುಕಿದೆ.


ಹಿರಿಯ ನಟಿ ಲೀಲಾವತಿ ಪರಿಪೂರ್ಣ ಕಲಾವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ


ಬೂಟಾಟಿಕೆಯನ್ನು ಇನ್ನಾದರೂ ಬಿಡಿ!


ರಾಜಕೀಯ ಪಕ್ಷ ಬದಲಾದಂತೆ "ಹಿಂದೂ ಉಲಿ"ಯ ವೇಷವೂ ಬದಲಾಗುತ್ತದೆ! ಮುಸ್ಲಿಮರೊಂದಿಗೆ ವ್ಯಾಪಾರ, ವ್ಯವಹಾರ. ಮುಸ್ಲಿಮರೊಂದಿಗೆ ಬದುಕು. ಹೊರಗೆ ಮಾತ್ರ ಮುಸ್ಲಿಮರ ಮೇಲೆ ದ್ವೇಷ ಭಾಷಣ. ಬಸನಗೌಡ ಪಾಟೀಲ್‌ ಯತ್ನಾಳ್ ಅವರೇ, ಮುಸ್ಲಿಂ ಟೋಪಿಯಲ್ಲಿ ನೀವು ತುಂಬಾ ಚೆನ್ನಾಗಿ ಕಾಣ್ತಿದಿರಿ. ನೀವು ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿಕೊಂಡು, ಜನತೆಗೆ ದ್ವೇಷ ತುಂಬುವ ನಿಮ್ಮ ಬೂಟಾಟಿಕೆಯನ್ನು ಇನ್ನಾದರೂ ಬಿಡಿʼ ಎಂದು ಕಾಂಗ್ರೆಸ್‌ ಟೀಕಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ