ಹುಬ್ಬಳ್ಳಿಯ ಗಣೇಶಪೇಟೆ ನಿವಾಸಿಯಾದ ವಿಜಯ ಸುಳ್ಳದ ಎಂಬುವವರು ಜಯಶ್ರೀ ಜೋಶಿ ಹಾಗೂ ರಾಘವೇಂದ್ರ ಜೋಶಿ ಡೆವಲಪರರಿಂದ 2 ನಿವೇಶನಗಳನ್ನು ರೂ.44 ಲಕ್ಷಗಳಿಗೆ ಖರೀದಿಸುವ ಕುರಿತು ದಿ:24/05/2017 ಖರೀದಿ ಕರಾರು ಒಪ್ಪಂದ ಮಾಡಿಕೊಂಡಿದ್ದರು. ದೂರುದಾರರು ಮುಂಗಡ ಹಣ ರೂ.40 ಲಕ್ಷ ರೂಪಾಯಿ ಪಾವತಿಸಿದ್ದರು.
ಆದರೆ ಡೆವಲಪರ್ಸ್‍ರವರು ಖರೀದಿ ಕರಾರು ಒಪ್ಪಂದದದಂತೆ 2 ವರ್ಷಗಳೊಳಗಾಗಿ ನಿವೇಶನಗಳನ್ನು ಅಭಿವೃಧ್ದಿ ಪಡಿಸುವಲ್ಲಿ ಹಾಗೂ ಖರೀದಿ ಪತ್ರ ಮಾಡಿಕೊಟ್ಟಿರಲಿಲ್ಲ.ಒಂದಿಲ್ಲೊಂದು ನೆಪ ಹೇಳಿ ಖರೀದಿ ಪತ್ರ ಬರೆದುಕೊಡದೇ ಬಿಲ್ಡರ ಸತಾಯಿಸಿ ಸೇವಾ ನ್ಯೂನ್ಯತೆ ಎಸಗಿ ಮೋಸ ಮಾಡಿದ್ದಾರೆ, ಅಂತಾ ಹೇಳಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದರು.
ಇದನ್ನೂ ಓದಿ: ಹಾಲಿನ ಉತ್ಪನ್ನಗಳ ದರ ಏರಿಕೆಯಿಂದಾಗಿ ಬರುವ ಲಾಭ ಹೈನುಗಾರರಿಗೇ ನೀಡಲಿ-ಸಿದ್ದರಾಮಯ್ಯ
ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ ಹಾಗೂ ವಿಶಾಲಾಕ್ಷಿ ಬೋಳಶೆಟ್ಟಿ, ಪ್ರಭು ಹಿರೇಮಠ ಸದಸ್ಯರು ದೂರುದಾರರಿಂದ ಮುಂಗಡವಾಗಿ ಪಡೆದ ಹೇರಳ ಮೊತ್ತದ ಹಣವನ್ನು ಡೆವಲಪರವರು ತಮ್ಮ ವೈಯಕ್ತಿಕ ಅಭಿವೃದ್ಧಿಗಾಗಿ ಉಪಯೋಗಿಸಿಕೊಂಡು ದೂರುದಾರನಿಗೆ ನಿವೇಶನ ಅಭಿವೃದ್ದಿಪಡಿಸಿ ಖರೀದಿ ಪತ್ರ ನೋಂದಣಿ ಮಾಡಿಕೊಡದೇ ಇರುವುದು ಗ್ರಾಹಕರ ರಕ್ಷಣಾ ಕಾಯಿದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಆಯೋಗ ಅಭಿಪ್ರಾಯಪಟ್ಟು ತೀರ್ಪು ನೀಡಿದೆ.
ಇದನ್ನೂ ಓದಿ: ರಾಜ್ಯದ ಗಡಿ ಹಾಗೂ ಜನರನ್ನು ರಕ್ಷಿಸಲು ಶಕ್ತಿ ಮೀರಿ ಹೋರಾಟ: ಬಸವರಾಜ ಬೊಮ್ಮಾಯಿ
ಡವೆಲಪರಗಳು 2 ತಿಂಗಳ ಒಳಗಾಗಿ ನಿವೇಶನದ ಅಭಿವೃದ್ಧಿಪಡಿಸಿ ದೂರುದಾರನಿಗೆ ಖರೀದಿ ಪತ್ರ ಬರೆದುಕೊಡುವಂತೆ ಆದೇಶಿಸಿದೆ. ಅದಕ್ಕೆ ವಿಫಲರಾದಲ್ಲಿ ದೂರುದಾರರಿಂದ ಪಡೆದ ರೂ.40 ಲಕ್ಷ ರೂಪಾಯಿ ಮೇಲೆ ಶೇ.8% ಬಡ್ಡಿ ಲೆಕ್ಕ ಹಾಕಿ ಸಂದಾಯ ಮಾಡುವಂತೆ ಹಾಗೂ ಮಾನಸಿಕ ತೊಂದರೆಗೆ ರೂ.1,00,000/- ಪರಿಹಾರ ಮತ್ತು ಪ್ರಕರಣದ ಖರ್ಚು ವೆಚ್ಚ ರೂ.10,000/-ಗಳನ್ನು ಕೊಡುವಂತೆ ಆಯೋಗ ತನ್ನ ತೀರ್ಪಿನಲ್ಲಿ ಹೇಳಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.