ಬೆಂಗಳೂರು: ಕೇಂದ್ರ ಸರ್ಕಾರ ಸಿಬಿಐ ಬಳಸಿಕೊಂಡು ನಮ್ಮ ಪಕ್ಷದ ನಾಯಕರನ್ನು ಹೆದರಿಸುತ್ತಿದೆ. ಸಿಬಿಐ ಕಾಂಗ್ರೆಸ್ ನವರನ್ನೇ ಟಾರ್ಗೆಟ್ ಮಾಡ್ತಿದೆ. ದುರುದ್ದೇಶಪೂರ್ವಕವಾಗಿ ದಾಳಿ ನಡೆಸಲಾಗುತ್ತಿದೆ ಎಂದು ಡಿ.ಕೆ ಶಿವಕುಮಾರ್ ಮೇಲೆ ಸಿಬಿಐ ಸರ್ಚ್ ವಾರೆಂಟ್ ಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.


COMMERCIAL BREAK
SCROLL TO CONTINUE READING

ಬುಧವಾರ ಸಿಬಿಐ 11 ಮಂದಿಯ ವಿರುದ್ಧ ಕೋರ್ಟ್‌ನಲ್ಲಿ ಸರ್ಚ್‌ ವಾರೆಂಟ್‌ ಪಡೆದಿತ್ತು. ಈ ಹಿನ್ನಲೆಯಲ್ಲಿ ಡಿ.ಕೆ.ಶಿವಕುಮಾರ್‌ ಅವರ ಕೆಲ ವ್ಯವಹಾರದ ಪಾಲುದಾರರ ನಿವಾಸಗಳ ಮೇಲೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವ ಕುರಿತು ವರದಿಯಾಗಿದೆ. ಈ ಬಗ್ಗೆ ಡಿಕೆ ಸಹೋದರರು ಗುರುವಾರ ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ, ಸಿಬಿಐ, ಆದಾಯ ತೆರಿಗೆ ಇಲಾಖೆ ಹಾಗೂ ಇಡಿ ಅಧಿಕಾರಿಗಳೊಂದಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ನಮ್ಮ ವಿರುದ್ಧ ಪ್ರಕರಣ ದಾಖಲಿಸಲು ತಂತ್ರ ರೂಪಿಸಿದ್ದಾರೆ ಎಂದು ಡಿಕೆ ಸಹೋದರರು ಆರೋಪಿಸಿದ್ದರು.