ದೇಶದಾದ್ಯಂತ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಜಾರಿಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಶಾಂತ್ ಎ ತಿಮ್ಮಯ್ಯ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Smriti Irani : ರಾಹುಲ್ ಗಾಂಧಿಗೆ ವಾರ್ನಿಂಗ್ ನೀಡಿದ ಸಚಿವೆ ಸ್ಮೃತಿ ಇರಾನಿ..!


ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸಭಾಂಗಣದಲ್ಲಿ ಇಂದು ನಡೆದ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಕುರಿತ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 


ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಕಾಯ್ದೆಯ ಜಾರಿಯನ್ನು ಕೇಂದ್ರ ಸರ್ಕಾರ ಪ್ರತಿದಿನ ಗಂಭೀರವಾಗಿ ಗಮನಿಸುತ್ತಿದೆ.ರಾಜ್ಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನೋಡಲ್ ಕಚೇರಿಯಾಗಿದ್ದು ದೈನಂದಿನ ವರದಿಯನ್ನು ಕಳಿಸುತ್ತಿದ್ದೇವೆ. ಪ್ಲಾಸ್ಟಿಕ್‌ನ ಅಧಿಕ ಹಾವಳಿಯ ಕಾಲದಲ್ಲಿ ಈ ಕಾಯ್ದೆ ಜಾರಿ ಸವಾಲಿನ ಕಾರ್ಯವಾಗಿದೆ. ರಾಜ್ಯದಲ್ಲಿ 2016 ರಲ್ಲಿಯೇ ಏಕ ಬಳಕೆ ಪ್ಲಾಸ್ಟಿಕ್ ನಿಷೇಧಗೊಂಡಿದ್ದರೂ ಕೂಡ ಇಲ್ಲಿಯವರೆಗೂ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಸಾಧ್ಯವಾಗಿರಲಿಲ್ಲ.ನೆರೆಹೊರೆಯ ರಾಜ್ಯಗಳಿಂದ ಅಪಾರ ಪ್ರಮಾಣದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಅವ್ಯಾಹತವಾಗಿ ಹರಿದು ಬರುತ್ತಿದೆ‌.ಸಾರ್ವಜನಿಕರಲ್ಲಿ,ರಾಜ್ಯದ ಹಳ್ಳಿ ಹಳ್ಳಿಗಳ,ಪ್ರತಿಯೊಂದು ಮೂಲೆಯಲ್ಲಿಯೂ ಈ ಕುರಿತು ಜನಜಾಗೃತಿ ಕಾರ್ಯಗಳ ಮೂಲಕ ಅರಿವು ಮೂಡಿಸಬೇಕು.Extended Producer Responsibility) ಸರ್ಕಾರ ಫೆಬ್ರವರಿಯಲ್ಲಿ ಆದೇಶ ಹೊರಡಿಸಿದೆ.ಕಳೆದ ಜುಲೈ 1 ರಿಂದ ಸಂಪೂರ್ಣವಾಗಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧಗೊಂಡಿದೆ, ಅದನ್ನು ಸಮರ್ಪಕವಾಗಿ ಜಾರಿಗೊಳಿಸುವ ಕಾರ್ಯ ಪ್ರತಿಯೊಬ್ಬ ನಾಗರಿಕರ ಜವಬ್ದಾರಿಯಾಗಿದೆ.ಕಾಯ್ದೆಯ ಜಾರಿಯ ನಂತರ ತಾಂತ್ರಿಕ ಅನ್ವೇಷಣೆಗಳ ಮೂಲಕ‌ ಅನೇಕ ಪರ್ಯಾಯಗಳು ದೊರೆಯುವ ಸಾಧ್ಯತೆಗಳಿವೆ, ಜಗತ್ತಿನಾದ್ಯಂತ ಇಂತಹ ಅನ್ವೇಷಣೆಗಳು ನಡೆಯುತ್ತಿವೆ.ಇಂದಲ್ಲ ನಾಳೆ ಪರ್ಯಾಯಕ್ಕೆ ಉತ್ತರ ಸಿಗಲಿವೆ ಎಂದರು.


ಮಹಾನಗರ ಪಾಲಿಕೆ ಆಯುಕ್ತ ಡಾ.ಬಿ.ಗೋಪಾಲಕೃಷ್ಣ ಮಾತನಾಡಿ,ಏಕ ಬಳಕೆ ಪ್ಲಾಸ್ಟಿಕ್ ನಿಷೇಧವನ್ನು ಏಕಾಏಕಿ ಜಾರಿಗೊಳಿಸಲು ಪ್ರಾರಂಭದಲ್ಲಿ ವರ್ತಕರು ,ಹೊಟೆಲ್ ಉದ್ಯಮಿಗಳು ಪ್ರಾರಂಭದಲ್ಲಿ ಅಪಸ್ವರ ವ್ಯಕ್ತಡಿಸಿದಾಗ, ಕಾರ್ಯಾಗಾರ ಹಾಗೂ ಪರ್ಯಾಯ ವಸ್ತುಗಳ ಪ್ರದರ್ಶನ ಮೂಲಕ ಜಾಗೃತಿ ಮೂಡಿಸಲಾಗಿದೆ. ಹೋಟೆಲ್ ಪಾರ್ಸೆಲ್‌ಗಳಿಗೆ ಮನೆಯಿಂದಲೇ ಸ್ಟೀಲ್ ಡಬ್ಬಗಳನ್ನು ತೆಗೆದುಕೊಂಡು ಬರುವ ಗ್ರಾಹಕರಿಗೆ ಕನಿಷ್ಠ ರಿಯಾಯಿತಿ ನೀಡಿ ಪ್ರೋತ್ಸಾಹಿಸಲು ಕೋರಿದಾಗ,ಕೆಲವು ಹೋಟೆಲ್‌ಗಳು ಅದನ್ನು ಪಾಲಿಸುತ್ತಿವೆ.ಮಂಡಳಿ ನೀಡುವ ನಿರ್ದೇಶನಗಳನ್ನು ಅವಳಿ ನಗರದಲ್ಲಿ ಜಾರಿ ಮಾಡಲಾಗುವುದು ಎಂದರು.ಏಕಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದೆ.ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯು 2019 ರಿಂದಲೇ ನಿಯಮಾವಳಿ ರಚಿಸಿಕೊಂಡು ಕಾರ್ಯೋನ್ಮುಖವಾಗಿದೆ.ಅವಳಿ ನಗರದ ಎಲ್ಲಾ 12 ವಲಯಗಳಲ್ಲಿ ತಂಡಗಳು ನಿರಂತರವಾಗಿ ಗಸ್ತು ಕೈಗೊಂಡು ಪ್ಲಾಸ್ಟಿಕ್ ನಿಯಂತ್ರಣಕ್ಕೆ ಪ್ರಯತ್ನಿಸಲಾಗುತ್ತಿದೆ ಎಂದರು.


ಇದನ್ನೂ ಓದಿ: Viral video : ಮಿಂಚಿನ ವೇಗದಲ್ಲಿ ಬಂದ ರೈಲಿಗೆ ಎದುರಾದ ಮಹಿಳೆ ..! ಮುಂದೆ ?


ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ರಾಜಶೇಖರ ಪುರಾಣಿಕ ಪ್ಲಾಸ್ಟಿಕ್ ಉತ್ಪಾದನೆ ಮತ್ತು  ಬಳಕೆ ಹೆಚ್ಚಳ ಹಾಗೂ ಅವುಗಳ ಅಪಾಯದ ಕುರಿತು ಸಭೆಗೆ ಮಾಹಿತಿ ನೀಡಿದರು.ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಉಪಮೇಯರ್ ಉಮಾ ಮುಕುಂದ್,ವಿರೋಧ ಪಕ್ಷದ ನಾಯಕ ದೊರೈರಾಜು ಮನಗುಂಟ್ಲಾ,


ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಜಯಕುಮಾರ್ ಕಡಕ್‌ಬಾವಿ, ಉಪವಿಭಾಗಾಧಿಕಾರಿ ಅಶೋಕ ತೇಲಿ,ಜಿಪಂ ಯೋಜನಾ ನಿರ್ದೇಶಕ ಬಿ.ಎಸ್.ಮೂಗನೂರಮಠ, ಪರಿಸರ ಅಧಿಕಾರಿ ಶೋಭಾ ಪೋಳ ,ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಟಿ.ಸಿದ್ದಣ್ಣ, ಮಹಾನಗರಪಾಲಿಕೆಯ ವಿವಿಧ ವಿಭಾಗಗಳ ಅಧಿಕಾರಿಗಳು ಇದ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ