ಶಿಕ್ಷಣದ ಗುಣಮಟ್ಟ ಸುಧಾರಣೆಗಾಗಿ ಸಮಗ್ರ ವರದಿ ಸಲ್ಲಿಸುವಂತೆ ಸಿಎಂ ಸೂಚನೆ
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಲು ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು.
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಲು ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು. ಈ ನಿಟ್ಟಿನಲ್ಲಿ ಚಿಂತನೆ ನಡೆಸಿ ಶಿಕ್ಷಣ ಗುಣಮಟ್ಟದ ಸುಧಾರಣೆಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ವರದಿಯನ್ನು ಸಲ್ಲಿಸುವಂತೆ ಹೆಚ್.ಡಿ ಕುಮಾರಸ್ವಾಮಿ ಯವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರಿ ಶಾಲೆಯಲ್ಲಿ ಓದುವವರು ಹೆಚ್ಚಾಗಿ ಬಡವರ ಮಕ್ಕಳೇ ಆಗಿರುತ್ತಾರೆ. ಆದ್ದರಿಂದ ಅವರಿಗೆ ಉತ್ತಮ ಭವಿಷ್ಯ ರೂಪಿಸಲು ನೆರವಾಗುವಂತಹ ಶಿಕ್ಷಣ ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಗಳಲ್ಲಿ ಒಂದು. ಈ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಾಡಿರುವ ಸುಧಾರಣಾ ಕ್ರಮಗಳ ಕುರಿತು ಅಧ್ಯಯನ ಮಾಡಿ ರಾಜ್ಯದಲ್ಲಿ ಅಳವಡಿಸಬಹುದಾದ ಪದ್ಧತಿಗಳ ಬಗ್ಗೆ ಸಮಗ್ರ ವರದಿಯ ನೀಡುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಹಾಗೂ ಶಿಕ್ಷಣ ಇಲಾಖೆ ಆಯುಕ್ತ ಶ್ರೀ ಡಾ. ಪಿ. ಸಿ ಜಾಫರ್ ರವರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಶಿಕ್ಷಕರ ನೇಮಕಾತಿ, ಶಾಲಾ ಕಟ್ಟಡಗಳ ಮೂಲಸೌಕರ್ಯಗಳ ಅಭಿವೃದ್ಧಿಗೆ ನಬಾರ್ಡ್ ನೆರವು ಪಡೆಯುವ ಕುರಿತು ಚರ್ಚಿಸಲಾಯಿತು.