ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ: ಸಿದ್ದರಾಮಯ್ಯ
ಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷ ಸಿದ್ಧವಿದೆ- ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ದೇಶದ ಸರ್ವೋಚ್ಛ ನ್ಯಾಯಾಲಯ ತಡೆ ನೀಡಿದ ಒಂದೇ ದಿನದ ಬಳಿಕ ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಶುಕ್ರವಾರ ರಾತ್ರಿ ಕೇಂದ್ರ ಚುನಾವಣಾ ಆಯೋಗ ಮರು ಉಪ ಚುನಾವಣೆ ಘೋಷಿಸಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಚುನಾವಣಾ ಆಯೋಗದ ಉದ್ದೇಶವೇ ಅರ್ಥವಾಗುತ್ತಿಲ್ಲ. ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ. ತರಾತುರಿಯಲ್ಲಿ ಚುನಾವಣೆ ಮುಂದೂಡಿದ್ದ ಆಯೋಗ ಮತ್ತೆ ದಿನಾಂಕ ಘೋಷಣೆ ಮಾಡಿರುವುದು ಅಚ್ಚರಿ ಮೂಡಿಸಿದೆ. ಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷ ಸಿದ್ಧವಿದೆ. ಆದರೆ ಚುನಾವಣಾ ಆಯೋಗದ ನಡೆ ಮಾತ್ರ ಅನುಮಾನಗಳಿಗೆ ಆಸ್ಪದ ಮಾಡಿಕೊಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.