ಕಾಂಗ್ರೆಸ್ ಪಕ್ಷ ಎನ್ನುವುದು ಪ್ರಭಾವಿಗಳ ಕುಟಿಲ ಕೂಟ: ಬಿಜೆಪಿ ಆಕ್ರೋಶ
60 ವರ್ಷಗಳ ಕಾಲ ದೇಶ ಆಳಿದ ನಂತರವೂ ಅಸಮಾನತೆ, ಬಡತನವನ್ನು ಜೀವಂತವಿಟ್ಟ ಕಾರಣಕ್ಕಾಗಿ ಜನಾಕ್ರೋಶ ಸಭೆ ನಡೆಸುತ್ತೀರಾ? ಎಂದು ಬಿಜೆಪಿ ಪ್ರಶ್ನಿಸಿದೆ.
ಬೆಂಗಳೂರು: ಜನವಿರೋಧಿ ಕಾಂಗ್ರೆಸ್ ನವರು ತಮಗೆ ತಾವೇ ಭಾರತರತ್ನ ಘೋಷಿಸಿಕೊಂಡರು ಎಂದು ಕರ್ನಾಟಕ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಸೋಮವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಾಂಗ್ರೆಸ್ ನವರು ತಮ್ಮನ್ನು ತಾವೇ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ ಮಾಡಿಕೊಂಡರು. ತಮ್ಮದೇ ನ್ಯಾಶನಲ್ ಹೆರಾಲ್ಡ್ ಆಸ್ತಿ ಕೊಳ್ಳೆ ಹೊಡೆದರು. ಜನ ಪದೇ ಪದೇ ಸೋಲಿಸಿದರೂ ರಾಹುಲ್ ಗಾಂಧಿಯೇ ನಮ್ಮ ಪ್ರಧಾನಿ ಎನ್ನುವರು.ಇದಕ್ಕಾಗಿಯೇ ಕಾಂಗ್ರೆಸ್ ವಿರುದ್ಧ ಜನಾಕ್ರೋಶ ಮೊಳಗುತ್ತಿದೆ’ ಎಂದು ಟೀಕಿಸಿದೆ.
Karnataka Govt Jobs: ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ
‘ದೇಶದ ಜನಾಕ್ರೋಶದ ಎದುರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ವಕ್ಷೇತ್ರದಲ್ಲಿ ಸೋತರು. ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಸೋತರು. ಲೋಕಸಭಾ ಚುನಾವಣೆಯಲ್ಲಿ 28ರಲ್ಲಿ ಕೇವಲ 1ರಲ್ಲಿ ಗೆಲುವು ಸಾಧಿಸಿದರು. ರಾಜ್ಯದಲ್ಲಿ ಬಹುಮತದಲ್ಲಿದ್ದ ಕಾಂಗ್ರೆಸ್ ಸರ್ಕಾರ 70 ಸ್ಥಾನಕ್ಕೆ ಇಳಿಯಿತು. ಜನವಿರೋಧಿ ಕಾಂಗ್ರೆಸ್ ವಿರುದ್ಧ ಜನಾಕ್ರೋಶ ನಿರಂತರವಾಗಿದೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಶೀಘ್ರದಲ್ಲೇ ಕಾಂಗ್ರೆಸ್ ನಿಂದ ಪಾದಯಾತ್ರೆ -ಸಿದ್ಧರಾಮಯ್ಯ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ