ನಾಡಿನ ಜನರ ಪರ ಧ್ವನಿ ಎತ್ತಲಾಗದ ಹೇಡಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವದಲ್ಲಿದೆ-ಸಿದ್ದರಾಮಯ್ಯ

ರಾಜ್ಯ ಬಿಜೆಪಿ ಸರ್ಕಾರ ಸಾಲದ ಮೇಲೆ ಸಾಲ ಮಾಡಿ ರಾಜ್ಯವನ್ನು ದಿವಾಳಿ ಮಾಡಲು ಹೊರಟಿದೆ. ಕೇಂದ್ರದಿಂದ ಬರಬೇಕಾದ ಯಾವ ಅನುದಾನವನ್ನೂ ಕೇಳುವ ಧೈರ್ಯ ಬಿಜೆಪಿ ಸಚಿವರಿಗಾಗಲೀ, ಶಾಸಕರಿಗಾಗಲೀ ಅಥವಾ ಸಂಸದರಿಗಾಗಲೀ ಇಲ್ಲ. ನಾಡಿನ ಜನರ ಪರ ಧ್ವನಿ ಎತ್ತಲಾಗದ ಹೇಡಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವದಲ್ಲಿದೆ ಎಂದು ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

Last Updated : Sep 28, 2020, 12:09 AM IST
ನಾಡಿನ ಜನರ ಪರ ಧ್ವನಿ ಎತ್ತಲಾಗದ ಹೇಡಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವದಲ್ಲಿದೆ-ಸಿದ್ದರಾಮಯ್ಯ title=
file photo

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಸಾಲದ ಮೇಲೆ ಸಾಲ ಮಾಡಿ ರಾಜ್ಯವನ್ನು ದಿವಾಳಿ ಮಾಡಲು ಹೊರಟಿದೆ. ಕೇಂದ್ರದಿಂದ ಬರಬೇಕಾದ ಯಾವ ಅನುದಾನವನ್ನೂ ಕೇಳುವ ಧೈರ್ಯ ಬಿಜೆಪಿ ಸಚಿವರಿಗಾಗಲೀ, ಶಾಸಕರಿಗಾಗಲೀ ಅಥವಾ ಸಂಸದರಿಗಾಗಲೀ ಇಲ್ಲ. ನಾಡಿನ ಜನರ ಪರ ಧ್ವನಿ ಎತ್ತಲಾಗದ ಹೇಡಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವದಲ್ಲಿದೆ ಎಂದು ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಎಪಿಎಂಸಿ ಕಾಯ್ದೆ ಮೂಲಕ ಸರ್ಕಾರ ರೈತರನ್ನು ಬಂಡವಾಳಶಾಹಿಗಳ ಗುಲಾಮರನ್ನಾಗಿ ಮಾಡುತ್ತಿದೆ-ಸಿದ್ದರಾಮಯ್ಯ

ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತ, ಜನವಿರೋಧಿ ನೀತಿಗಳಿಂದಾಗಿ ನಾಡಿನ ಜನ ಯಾಕಾದ್ರೂ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತಂದೆವೋ ಎಂದು ಪರಿತಪಿಸುತ್ತಿದ್ದಾರೆ. ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂಬ ಚರ್ಚೆ ರಾಜ್ಯದ ಉದ್ದಗಲಕ್ಕೂ ಆರಂಭವಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬ ಮತ್ತೊಮ್ಮೆ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿದೆ ಎನ್ನುವುದಕ್ಕೆ ಮಹತ್ವದ ಸಾಕ್ಷಿಗಳು ಲಭ್ಯವಾಗಿದೆ. ಮುಖ್ಯಮಂತ್ರಿಗಳು ತಾವು ಪ್ರಾಮಾಣಿಕರಾಗಿದ್ದರೆ ಈ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಲು ಏಕೆ ನಿರಾಕರಿಸುತ್ತಿದ್ದರು? ಎಂದು ಪ್ರಶ್ನಿಸಿದರು.

ಬಿಜೆಪಿ ಸರ್ಕಾರ ಉಳ್ಳವನನ್ನೇ ಭೂ ಒಡೆಯನನ್ನಾಗಿ ಮಾಡಲು ಹೊರಟಿದೆ-ಸಿದ್ದರಾಮಯ್ಯ

ಒಂದೆಡೆ ಕೊರೊನಾದಿಂದ ಜನ ಸಾಯುತ್ತಿದ್ದಾರೆ, ಇತ್ತ ಸರ್ಕಾರ ಲೂಟಿಯಲ್ಲಿ ತೊಡಗಿದೆ. ಬಡ ವಿದ್ಯಾರ್ಥಿಗಳಿಗೆ ವಿತರಿಸುವ ಲ್ಯಾಪ್‌ಟಾಪ್‌, ವೈದ್ಯಕೀಯ ಉಪಕರಣಗಳ ಖರೀದಿ ಸೇರಿ ಎಲ್ಲಿ ಸಾಧ್ಯವೋ ಅಲ್ಲೆಲ್ಲಾ ಬರೀ ಭ್ರಷ್ಟಾಚಾರ. ಹೆಣಗಳ ಮೇಲೆ ದುಡ್ಡು ಮಾಡುವ ಇಂಥ ಸರ್ಕಾರವನ್ನು ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಇದೇ ಮೊದಲು ನೋಡುತ್ತಿರೋದು ಎಂದು ಕಿಡಿಕಾರಿದರು.

ಇದೇ ವೇಳೆ ರಾಜ್ಯದಲ್ಲಿನ ಬಂದ್ ಆಚರಣೆಗೆ ಸಿದ್ದರಾಮಯ್ಯ ಬೆಂಬಲ ವ್ಯಕ್ತಪಡಿಸಿದ್ದಾರೆ.'ಭೂ ಸುಧಾರಣಾ ಕಾಯಿದೆ, ಎಪಿಎಂಸಿ ಕಾಯಿದೆ, ಕಾರ್ಮಿಕ ಕಾಯಿದೆ ಸೇರಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜಾರಿಗೆ ತರಲು ಉದ್ದೇಶಿಸಿರುವ ವಿವಿಧ ಜನವಿರೋಧಿ ಕಾಯಿದೆಗಳ ವಿರುದ್ಧ ರೈತ, ದಲಿತ, ಕಾರ್ಮಿಕ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಕರೆಕೊಟ್ಟಿರುವ ಬಂದ್ ಗೆ ನಮ್ಮ‌ ಪಕ್ಷದ ಸಂಪೂರ್ಣ ಬೆಂಬಲವಿದೆ. ಈ ಕಾಯಿದೆಗಳ ಜಾರಿ ನಿರ್ಧಾರವನ್ನು ಸರ್ಕಾರ ವಾಪಾಸು ಪಡೆಯುವವರೆಗೂ ನಾವು ನಿರಂತರ ಹೋರಾಟ ನಡೆಸಲಿದ್ದೇವೆ' ಎಂದು ತಿಳಿಸಿದ್ದಾರೆ.
 

 

Trending News