Narendra Modi : 'ತುರ್ತು ಪರಿಸ್ಥಿತಿ'ಯ ಕರಾಳ ದಿನಗಳನ್ನು ಮರೆಯಲಾಗದು : ಪ್ರಧಾನಿ ಮೋದಿ ಟ್ವೀಟ್‌

ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿ ಇಂದಿಗೆ ಸರಿಯಾಗಿ 46 ವರ್ಷ

Last Updated : Jun 25, 2021, 02:05 PM IST
  • ತುರ್ತು ಪರಿಸ್ಥಿತಿ ಸಂದರ್ಭದ ಕರಾಳ ದಿನಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ
  • ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿ ಇಂದಿಗೆ ಸರಿಯಾಗಿ 46 ವರ್ಷ
  • ನಮ್ಮ ಪ್ರಜಾಪ್ರಭುತ್ವದ ನೀತಿಗಳನ್ನು ಕಾಂಗ್ರೆಸ್‌ ಹೇಗೆ ಬಳಸಿಕೊಂಡಿದೆ ಎಂಬುದಕ್ಕೆ ಇದು ನಿದರ್ಶನ
Narendra Modi : 'ತುರ್ತು ಪರಿಸ್ಥಿತಿ'ಯ ಕರಾಳ ದಿನಗಳನ್ನು ಮರೆಯಲಾಗದು : ಪ್ರಧಾನಿ ಮೋದಿ ಟ್ವೀಟ್‌ title=

ನವದೆಹಲಿ : ತುರ್ತು ಪರಿಸ್ಥಿತಿ ಸಂದರ್ಭದ ಕರಾಳ ದಿನಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿ ಇಂದಿಗೆ ಸರಿಯಾಗಿ 46 ವರ್ಷ(Emergency 46th anniversary)ಗಳಾಗಿದ್ದು. ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, ಭಾರತದ ಪ್ರಜಾಪ್ರಭುತ್ವ ಮನೋಭಾವ ಹಾಗೂ ಸಂವಿಧಾನದ ಮೌಲ್ಯಗಳನ್ನು ಬಲಪಡಿಸಲು ಪ್ರತಿಜ್ಞೆ ಮಾಡುವಂತೆ ಅವರು ಜನರಿಗೆ ಕರೆ ನೀಡಿದ್ದಾರೆ.

ಇದನ್ನೂ ಓದಿ : EPFO: ನಿಮ್ಮ ಖಾತೆ ಈ ಬ್ಯಾಂಕುಗಳಲ್ಲಿದ್ದರೆ ಈಗಲೇ ಈ ಕೆಲಸ ಮಾಡಿ

ನಮ್ಮ ಪ್ರಜಾಪ್ರಭುತ್ವದ ನೀತಿಗಳನ್ನು ಕಾಂಗ್ರೆಸ್‌(Congress) ಹೇಗೆ ಬಳಸಿಕೊಂಡಿದೆ ಎಂಬುದಕ್ಕೆ ಇದು ನಿದರ್ಶನವಾಗಿದೆ. ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ಭಾರತೀಯ ಪ್ರಜಾಪ್ರಭುತ್ವವನ್ನು ರಕ್ಷಿಸಿದ ಎಲ್ಲ ಶ್ರೇಷ್ಠರನ್ನು ನಾವು ನೆನಪಿಸಿಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : Impact Feature: ಲಕ್ ಬೈ ಚಾನ್ಸ್ ಮಾರಾಟದಲ್ಲಿ ಭಾಗವಹಿಸಿ, 2899 ರೂ.ಗಳಿಗೆ ಸ್ಮಾರ್ಟ್‌ಫೋನ್‌ ಖರೀದಿಸಿ

ಅಲ್ಲದೆ, ಆಗಿನ ಕಾಂಗ್ರೆಸ್ ಸರ್ಕಾರ ಕೈಗೊಂಡಿದ್ದ ಹಲವಾರು ಕಠಿಣ ಕ್ರಮಗಳ ಬಗ್ಗೆಗಿನ ಲಿಂಕ್(Link) ಅನ್ನು ಅವರು ಹಂಚಿಕೊಂಡಿದ್ದಾರೆ. 

ಇದನ್ನೂ ಓದಿ : Indian Currency: 25 ಪೈಸೆಯ ಬದಲಿಗೆ 1.5 ಲಕ್ಷ ರೂ. ಮಾರಾಟ ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ತುರ್ತು ಪರಿಸ್ಥಿತಿ(Emergency)ಯ ಕರಾಳ ದಿನಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. 1975ರಿಂದ 1977ರವರೆಗಿನ ಅವಧಿಯು ಸಂಸ್ಥೆಗಳ ವ್ಯವಸ್ಥಿತ ವಿನಾಶಕ್ಕೆ ಸಾಕ್ಷಿಯಾಯಿತು. ಭಾರತದ ಪ್ರಜಾಪ್ರಭುತ್ವ ಮನೋಭಾವವನ್ನು ಬಲಪಡಿಸಲು ಮತ್ತು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೌಲ್ಯಗಳಿಗೆ ತಕ್ಕಂತೆ ಬದುಕಲು ಸಾಧ್ಯವಿರುವ ಎಲ್ಲವನ್ನೂ ಮಾಡುವುದಾಗಿ ಪ್ರತಿಜ್ಞೆ ಮಾಡೋಣ' ಅವರು ಕರೆ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News