ಮಗನಿಂದ ಮೋಸ... ತಾಯಿಯನ್ನ ಮಂಚದ ಸಮೇತ ಕೋರ್ಟ್‌ಗೆ ಹಾಜರುಪಡಿಸಿದ ಮಗಳು

ಹೆತ್ತ ಮಗನೇ ಸುಳ್ಳು ಹೇಳಿ ಆಸ್ತಿ ಬರೆಸಿಕೊಂಡು ಮೋಸ ಮಾಡಿದ್ದ ಪ್ರಕರಣದ ವಿಚಾರಣೆಗೆ ತನ್ನ ತಾಯಿಯನ್ನು ಮಂಚದ ಸಮೇತ ಎಸಿ ಕೋರ್ಟ್ ಗೆ ಹಾಜರುಪಡಿಸಿದ ಘಟನೆ ನಡೆದಿದೆ. 

Written by - Chetana Devarmani | Last Updated : Dec 15, 2022, 03:35 PM IST
  • ಹೆತ್ತ ಮಗನೇ ಸುಳ್ಳು ಹೇಳಿ ಆಸ್ತಿ ಬರೆಸಿಕೊಂಡು ಮೋಸ ಮಾಡಿದ್ದ ಪ್ರಕರಣ
  • ತಾಯಿಯನ್ನ ಮಂಚದ ಸಮೇತ ಕೋರ್ಟ್‌ಗೆ ಹಾಜರುಪಡಿಸಿದ ಮಗಳು
  • ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ನೋಟೀಸ್ ನೀಡಲಾಗಿತ್ತು
ಮಗನಿಂದ ಮೋಸ... ತಾಯಿಯನ್ನ ಮಂಚದ ಸಮೇತ ಕೋರ್ಟ್‌ಗೆ ಹಾಜರುಪಡಿಸಿದ ಮಗಳು  title=

ಚಾಮರಾಜನಗರ: ಹೆತ್ತ ಮಗನೇ ಸುಳ್ಳು ಹೇಳಿ ಆಸ್ತಿ ಬರೆಸಿಕೊಂಡು ಮೋಸ ಮಾಡಿದ್ದ ಪ್ರಕರಣದ ವಿಚಾರಣೆಗೆ ತನ್ನ ತಾಯಿಯನ್ನು ಮಂಚದ ಸಮೇತ ಎಸಿ ಕೋರ್ಟ್ ಗೆ ಹಾಜರುಪಡಿಸಿದ ಘಟನೆ ನಡೆದಿದೆ. ಚಾಮರಾಜನಗರ ಪಟ್ಟಣದ ನಿವಾಸಿ ಮುಮ್ತಾಜ್ ಬೇಗಂ(75) ತನ್ನ ಕೊನೆಯ ಮಗ ಸಿ.ಎನ್.ಅಬ್ದುಲ್  ರಜಾಕ್ (ಸಿದ್ದಿಕ್) ವಿರುದ್ಧ ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣೆ ಕಾಯ್ದೆ-2007 ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು. 

ಇದನ್ನೂ ಓದಿ : ಅಯೋಧ್ಯೆ ರಾಮಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ, ಶಲ್ಯ ಸಮರ್ಪಿಸಿದ ರಾಮನಗರದ ಭಕ್ತರು

ಅನಾರೋಗ್ಯದ ಕಾರಣ ಕಳೆದ ಎರಡು ತಿಂಗಳಿನಿಂದ ಮುಮ್ತಾಜ್ ಬೇಗಂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ನೋಟೀಸ್ ನೀಡಲಾಗಿತ್ತು. ಈ ತಿಂಗಳು ಎಸಿ ಕೋರ್ಟ್‌ಗೆ ಹಾಜರಾಗಲೇಬೇಕಿದ್ದರಿಂದ ಮಗಳಾದ ಸಿ.ಎನ್.ನೂರ್ ಆಯಿಷಾ ಸಂಬಧಿಕರ ನೆರವು ಪಡೆದು ಹಾಸಿಗೆ ಹಿಡಿದಿರುವ ಮುಮ್ತಾಜ್ ಬೇಗಂ ಅನ್ನು ಮಂಚದ ಮೇಲೆ ಮಲಗಿಸಿಕೊಂಡೇ ಕೋರ್ಟ್‌ಗೆ  ಕರೆತಂದಿದ್ದಾರೆ. 

ಅಮ್ಮ- ಮಗನ ಆಸ್ತಿ ಕಲಹ: 

ಮುಮ್ತಾಜ್ ಬೇಗಂಗೆ ಮೂರು ಹೆಣ್ಣು ಮತ್ತು ಆರು ಗಂಡು ಮಕ್ಕಳಿದ್ದಾರೆ. ಪತಿ ದಿ.ನಿಸಾರ್ ಅಹ್ಮದ್  ಈಕೆಯ ಹೆಸರಿಗೆ  ಸರ್ವೆ ನಂ-282 ರಲ್ಲಿ ವಿಸ್ತೀರ್ಣ 3.28.00 ಎಕರೆ ಬರೆದ್ದರಂತೆ. ಆದರೆ ಇದನ್ನು ಕೊನೆಯ ಮಗ ಅಬ್ದುಲ್ ರಜಾಕ್ ಹಜ್ ಯಾತ್ರೆಗೆ ಪಾಸ್‌ಪೋರ್ಟ್ ಮಾಡಿಸಿಕೊಡುತ್ತೇನೆ ಎಂದು ಸುಳ್ಳು ಹೇಳಿ ಅವನ ಹೆಸರಿಗೆ ಬರೆಸಿಕೊಂಡಿರುವುದಾಗಿ ಅರ್ಜಿಯಲ್ಲಿದೆ.

ತನ್ನ ಹೆಸರಲ್ಲಿ ಲಕ್ಷಾಂತರ ರೂ ಸಾಲ ಪಡೆದಿದ್ದಾನೆ. ಇದನ್ನು ಕೇಳಿದರೆ ಕೊಲೆ ಬೆದರಿಕೆ ಹಾಕುತ್ತಾನೆ ಆದ್ದರಿಂದ ಈತನ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಕೋರಿದ್ದು, ಕೊಲೆ ಬೆದರಿಕೆ ಹಾಕಿದಾಗ ಪೊಲೀಸರಿಗೂ ದೂರು ನೀಡಲು ಮುಂದಾಗಿರುವುದಾಗಿ ಪತ್ರದಲ್ಲಿದೆ.

ಇದನ್ನೂ ಓದಿ : ರಾಜ್ಯದ ಉತ್ತರ -ದಕ್ಷಿಣವಾಗಿ ಡಿಕೆಶಿ -ಸಿದ್ದರಾಮಯ್ಯ ಪ್ರತ್ಯೇಕ ಪ್ರವಾಸ

ಈ ಕುರಿತು ಎಸಿ ಗೀತಾ ಹುಡೇದ ಪ್ರತಿಕ್ರಿಯೆ ಕೊಟ್ಟಿದ್ದು, ಈ ಪರಿಸ್ಥಿತಿಯಲ್ಲಿ ವಿಚಾರಣೆಗೆ ಹಾಜರಾಗೋದು ಬೇಡ ಎಂದು ಮೊದಲೇ ತಿಳಿಸಿದ್ದೆ. ಮುಮ್ತಾಜ್ ಬೇಗಂ ಹಾಸಿಗೆ ಹಿಡಿದಿರುವ ಪೋಟೋ ಅನ್ನು ಈ ಮೊದಲೇ ನಮ್ಮ ಸಿಬ್ಬಂದಿಗೆ ಕಳುಹಿಸಿದ್ದರು. ಈ ಪರಿಸ್ಥಿತಿಯಲ್ಲಿ ಅವರನ್ನು ವಿಚಾರಣೆಗೆ ಕರೆತರವುದು ಬೇಡ ಎಂದು ಮೊದಲೇ ತಿಳಿಸಲಾಗಿತ್ತು. ಆದರೂ ಅವರ ಮನೆಯವರು ಮಂಚದ ಸಮೇತ ಆ ತಾಯಿಯನ್ನು ಕರೆತಂದಿದ್ದಾರೆ ಎಂದಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News