ನವದೆಹಲಿ: ರಾಜ್ಯದ ನೆರೆ-ಬರ ವಿಚಾರದ ಕುರಿತು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಿಯೋಗ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ 2,000 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.


COMMERCIAL BREAK
SCROLL TO CONTINUE READING

ಪುನರ್ವಸತಿ ಮತ್ತು ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕೊಡಗು ಮತ್ತಿತರ ಜಿಲ್ಲೆಗಳಿಗೆ 2,000 ರೂಪಾಯಿಗಳ ಪ್ಯಾಕೇಜ್ ಘೋಷಿಸಿ ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ನಿಯೋಗದ ಇತರ  ಸದಸ್ಯರೊಂದಿಗೆ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು.


ಕೊಡಗು ಮತ್ತು ನೆರೆಯ ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಸಂಭವಿಸಿದ ಹಾನಿಯನ್ನು ಸಮೀಕ್ಷೆ ಮಾಡಲು ಕೂಡಲೇ ಕೇಂದ್ರ ಸರ್ಕಾರವು ಅಧಿಕಾರಿಗಳ ಎರಡು ತಂಡಗಳನ್ನು ಕಳುಹಿಸುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ನೇತೃತ್ವದ ನಿಯೋಗಕ್ಕೆ ಭರವಸೆ ನೀಡಿದರು.


ಆ ಸಮಯದಲ್ಲಿ 'ನಿಯೋಗದಲ್ಲಿ ನಿಮ್ಮ ಕುಟುಂಬದವರೇ ಅರ್ಧ ಜನ ಇದ್ದೀರಲ್ಲಾ? ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಕಿಚಾಯಿಸಿದ ಪ್ರಸಂಗ ನಡೆಯಿತು. 


ರಾಜ್ಯದ ನೆರೆ-ಬರ: 2,000 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮೋದಿಗೆ ಮೊರೆ


ದೆಹಲಿಯಲ್ಲಿ ಸೋಮವಾರ ಪ್ರಧಾನಿ ಮೋದಿ ಭೇಟಿ ಮಾಡಿದ್ದ ರಾಜ್ಯದ ನಿಯೋಗದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಹೆಚ್.ಡಿ. ರೇವಣ್ಣ, ಡಾ. ಜಿ. ಪರಮೇಶ್ವರ್, ಆರ್.ವಿ. ದೇಶಪಾಂಡೆ, ಡಿ.ಕೆ. ಶಿವಕುಮಾರ್ ಮತ್ತು ಕೃಷ್ಣಭೈರೇಗೌಡ ಹಾಜರಿದ್ದರು. 


ಪ್ರಧಾನಿಗೆ “ದಿ ಓಪನ್ ಐಸ್: ಎ ಜರ್ನಿ ಥ್ರೂ ಕರ್ನಾಟಕ” ಪುಸ್ತಕ ಉಡುಗೊರೆ ನೀಡಿದ ಸಿಎಂ