`ಪ್ರಭುತ್ವ ನಡೆಸುತ್ತಿರುವ ನಿರಂತರ ದಾಳಿಯಿಂದ ದೇಶದ ಪ್ರಜಾಪ್ರಭುತ್ವವೇ ಅಪಾಯದಲ್ಲಿದೆ`-ಸಿದ್ಧರಾಮಯ್ಯ
ಪ್ರಭುತ್ವ ನಡೆಸುತ್ತಿರುವ ನಿರಂತರ ದಾಳಿಯಿಂದ ದೇಶದ ಪ್ರಜಾಪ್ರಭುತ್ವವೇ ಅಪಾಯದಲ್ಲಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ. ಈಗ ಅವರು ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಬೇಕು ಎಂದು ಅವರು ಜೆಡಿಎಸ್ ಶಾಸಕರಲ್ಲಿ ಮನವಿ ಮಾಡಿದ್ದಾರೆ.
ಬೆಂಗಳೂರು: ಪ್ರಭುತ್ವ ನಡೆಸುತ್ತಿರುವ ನಿರಂತರ ದಾಳಿಯಿಂದ ದೇಶದ ಪ್ರಜಾಪ್ರಭುತ್ವವೇ ಅಪಾಯದಲ್ಲಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ. ಈಗ ಅವರು ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಬೇಕು ಎಂದು ಅವರು ಜೆಡಿಎಸ್ ಶಾಸಕರಲ್ಲಿ ಮನವಿ ಮಾಡಿದ್ದಾರೆ.
ಜಾತ್ಯತೀತ ಜನತಾದಳದ ವಿಧಾನಸಭಾ ಸದಸ್ಯರಿಗೆ ಪ್ರೀತಿಯ ನಮಸ್ಕಾರಗಳು.
ದೇಶ ಅತ್ಯಂತ ಆತಂಕಕಾರಿ ಹಾದಿಯಲ್ಲಿ ಸಾಗುತ್ತಿರುವುದು ನಮ್ಮೆಲ್ಲರ ಅರಿವಿನಲ್ಲಿದೆ. ಸಾಮಾಜಿಕ ನ್ಯಾಯ, ಸಮಾನತೆ,ಭಾತೃತ್ವ, ಸ್ಯಾಮ್‌ಸಂಗ್ ತರುತ್ತಿದೆ 200MP ಕ್ಯಾಮೆರಾ ಹೊಂದಿರುವ ಸ್ಮಾರ್ಟ್‌ಫೋನ್ ..! ಹೊಸ ಫೋನ್ ವಿಡಿಯೋ ಇಲ್ಲಿದೆ
ಇದು ನಮ್ಮ ಸೈದ್ದಾಂತಿಕ ಬದ್ದತೆ. ಈ ಬಾರಿ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಇದೇ ಸೈದ್ದಾಂತಿಕ ಬದ್ದತೆಯಿಂದ ಜಾತ್ಯತೀತ ಜನತಾದಳ ನಮ್ಮ ಎರಡನೇ ಅಭ್ಯರ್ಥಿಯನ್ನು ಬೆಂಬಲಿಸಿ ಗೆಲ್ಲಿಸಬಹುದು ಎಂಬ ನಿರೀಕ್ಷೆಯಿಂದ ನಮ್ಮ ಯುವನಾಯಕ ಮನ್ಸೂರ್ ಅಲಿ ಖಾನ್ ಅವರನ್ನು ಕಣಕ್ಕಿಳಿಸಿದ್ದೆವು. ನಮ್ಮ ಅಭ್ಯರ್ಥಿ ಘೋಷಣೆ ಮಾಡಿದ ಮರುದಿನ ತಮ್ಮಲ್ಲಿ ಒಬ್ಬ ಅಭ್ಯರ್ಥಿಯನ್ನೂ ಗೆಲ್ಲಿಸುವಷ್ಟು ಮತಗಳು ಲಭ್ಯವಿಲ್ಲದೆ ಇದ್ದರೂ ಜೆಡಿಎಸ್ ಪಕ್ಷ, ಹಠಾತ್ತನೆ ತನ್ನ ಅಭ್ಯರ್ಥಿಯನ್ನು ಘೋಷಿಸಿರುವುದು ನಮಗೆ ಆಘಾತವುಂಟುಮಾಡಿದೆ.
ಈ ಚುನಾವಣೆ ಬಹುಮುಖ್ಯವಾಗಿ ಜಾತ್ಯತೀತತೆ ಮತ್ತು ಕೋಮುವಾದ ಎಂಬ ಎರಡು ಸಿದ್ದಾಂತಗಳ ನಡುವಿನ ಸಮರವೂ ಆಗಿದೆ ಎನ್ನುವುದನ್ನು ನೀವು ಬಲ್ಲಿರಿ. ರಾಷ್ಟ್ರಕವಿ ಕುವೆಂಪು ಅವರು ಹೆಮ್ಮೆಯಿಂದ ಹೇಳಿಕೊಂಡ ಸರ್ವಜನಾಂಗದ ಶಾಂತಿಯ ತೋಟವನ್ನು ಬಿಜೆಪಿ, ಧಾರ್ಮಿಕ ದ್ವೇಷಾಸೂಯೆಗಳಿಂದ ಹಾಳುಗೆಡಹುತ್ತಿರುವುದನ್ನು ನಾವು ನಿತ್ಯ ನೋಡುತ್ತಿದ್ದೇವೆ.ಪಠ್ಯಪುಸ್ತಕ ಪರಿಷ್ಕರಣೆಯ ನೆಪದಲ್ಲಿ ಬಸವಣ್ಣ,ಅಂಬೇಡ್ಕರ್,ನಾರಾಯಣ ಗುರು, ನಾಡಪ್ರಭು ಕೆಂಪೇಗೌಡ,ಕುವೆಂಪು ಸೇರಿದಂತೆ ನಾವು ಗೌರವಿಸುವ ಮಹಾಪುರುಷರಿಗೆ ಮಾಡಿರುವ ಅವಮಾನ ಇದಕ್ಕೆ ಇತ್ತೀಚಿನ ಜ್ವಲಂತ ಉದಾಹರಣೆ.
ಇದನ್ನೂ ಓದಿ : Moto G62 5G: ಕೈಗೆಟುಕುವ ಬೆಲೆಯಲ್ಲಿ 5ಜಿ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ ಮೋಟೋರೊಲಾ
ಕನ್ನಡಿಗರೆಲ್ಲರ ಆತ್ಮಸ್ವರೂಪಿಯಾದ ಕುವೆಂಪು ವಿರಚಿತ ನಾಡಗೀತೆಯನ್ನೇ ತಿರುಚಿದ ಕಿಡಿಗೇಡಿಯಿಂದಲೇ ಈ ಎಲ್ಲ ದುಷ್ಕತ್ಯಗಳನ್ನು ಮಾಡಿಸುವ ಧಾರ್ಷ್ಟ್ಯವನ್ನು ಬಿಜೆಪಿ ತೋರಿದೆ. ರಾಜ್ಯಸಭಾ ಚುನಾವಣೆಯ ಮೂಲಕ ಒದಗಿ ಬಂದ ಅವಕಾಶವನ್ನು ಬಳಸಿಕೊಂಡು ಕೋಮುವಾದಿ ಮತ್ತು ಜಾತಿವಾದಿ ಬಿಜೆಪಿಗೆ ತಕ್ಕ ಉತ್ತರ ನೀಡಬೇಕೆಂದು ಜಾತ್ಯತೀತತೆ,ಸೌಹಾರ್ದತೆ ಮತ್ತು ಸಹಬಾಳ್ವೆಯ ಮೇಲೆ ನಂಬಿಕೆ ಇಟ್ಟಿರುವ ನಾಡಬಾಂಧವರೆಲ್ಲರ ಮನದಾಳದ ಹಾರೈಕೆಯಾಗಿದೆ.
ಜಾತ್ಯತೀತತೆಯ ಸಾವು-ಬದುಕಿನ ಪ್ರಶ್ನೆಯಾಗಿ ರಾಜ್ಯಸಭಾ ಚುನಾವಣೆ ನಮ್ಮ ಮುಂದಿದೆ. ಸೈದ್ದಾಂತಿಕವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಂದು ಕಡೆ ಇದ್ದರೆ, ಕೋಮುವಾದವನ್ನೇ ಉಸಿರಾಡುವ ಬಿಜೆಪಿ ಇನ್ನೊಂದು ಕಡೆ ಇದೆ. ಈ ಹಿನ್ನೆಲೆಯಲ್ಲಿ ನಮ್ಮ ಎರಡನೇ ಅಭ್ಯರ್ಥಿಯಾಗಿರುವ ಮನ್ಸೂರ್ ಅಲಿ ಖಾನ್ ಅವರ ಸೋಲು-ಗೆಲುವನ್ನು ರಾಜ್ಯದ ಅಲ್ಪಸಂಖ್ಯಾತ ಸಮುದಾಯ ಮಾತ್ರವಲ್ಲ ಜಾತ್ಯತೀತತೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕುತೂಹಲದಿಂದ ಗಮನಿಸುತ್ತಿದ್ದಾರೆ. ಸೈದ್ದಾಂತಿಕ ಬದ್ದತೆಯಿಂದ ಜಾತ್ಯತೀತ ಜನತಾದಳ ಬೆಂಬಲಿಸಿದರೆ ಈ ಯುವನಾಯಕನ ಆಯ್ಕೆ ನಿರಾತಂಕವಾಗಿ ನಡೆದುಹೋಗುತ್ತದೆ.
ಮನ್ಸೂರು ಅಲಿ ಖಾನ್ ಅವರ ಗೆಲುವು ಯಾವುದೇ ಒಂದು ಪಕ್ಷದ ಗೆಲುವಾಗದೆ ಜಾತ್ಯತೀತ ಸಿದ್ದಾಂತದ ಮೇಲೆ ನಂಬಿಕೆ ಇಟ್ಟಿರುವ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳ ಪಕ್ಷಗಳೆರಡರ ಸೈದ್ದಾಂತಿಕ ಗೆಲುವಾಗುತ್ತದೆ. ಪ್ರಜಾಪ್ರತಿನಿಧಿಗಳಾದ ನಾವೆಲ್ಲರೂ ನಮ್ಮ ಪ್ರಭುಗಳಾದ ಪ್ರಜೆಗಳ ಆತ್ಮಸಾಕ್ಷಿಗೆ ದನಿಯಾಗಬೇಕಾಗಿರುವುದು ಕರ್ತವ್ಯವಾಗಿದೆ. ಈ ಆತ್ಮಸಾಕ್ಷಿಯ ಮತವನ್ನು ಜಾತ್ಯತೀತತೆಗೆ ಬದ್ದವಾಗಿರುವ ನಮ್ಮ ಪಕ್ಷದ ಮನ್ಸೂರ್ ಅಲಿ ಖಾನ್ ಅವರಿಗೆ ಚಲಾಯಿಸಬೇಕೆಂದು ನನ್ನ ಸವಿನಯ ವಿನಂತಿ" ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.a