ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹೊಸ ಮಾರ್ಗ ಕಂಡುಹಿಡಿದ ಕೃಷಿ ಇಲಾಖೆ..!

2024-25 ನೇ ಸಾಲಿನಲ್ಲಿಯೂ ಸಹ ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೊತ್ಸಾಹಿಸುವ ಹಾಗೂ ಇತರೆ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಮಹಿಳೆಯರಿಗೆ ಕೃಷಿ ಪ್ರಶಸ್ತಿಯನ್ನು ನೀಡಲು ಸರ್ಕಾರವು ಅನುಮೋದನೆ ನೀಡಿದ ಪ್ರಯುಕ್ತ ಅರ್ಜಿಗಳನ್ನು ಸಲ್ಲಿಸಲು ಕೋರಲಾಗಿದೆ.

Written by - Manjunath N | Last Updated : Aug 18, 2024, 12:34 PM IST
  • ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಮಹಿಳೆಯರಿಗೆ ಕೃಷಿ ಪ್ರಶಸ್ತಿಯನ್ನು ನೀಡಲು ಸರ್ಕಾರವು ಅನುಮೋದನೆ ನೀಡಿದ ಪ್ರಯುಕ್ತ ಅರ್ಜಿಗಳನ್ನು ಸಲ್ಲಿಸಲು ಕೋರಲಾಗಿದೆ.
  • ಆಸಕ್ತಿಯುಳ್ಳ ರೈತರು ಆಗಸ್ಟ್ 31, 2024 ರೊಳಗಾಗಿ ಆನಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪ್ರವೇಶ ಶುಲ್ಕ ಇರುವುದಿಲ್ಲ.
ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹೊಸ ಮಾರ್ಗ ಕಂಡುಹಿಡಿದ ಕೃಷಿ ಇಲಾಖೆ..! title=
ಸಾಂಧರ್ಭಿಕ ಚಿತ್ರ

ಧಾರವಾಡ: ಧಾರವಾಡ ಜಿಲ್ಲೆಯ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾ ಮನೋಭಾವ ಬೆಳೆಸಲು ಕೃಷಿ ಇಲಾಖೆ ಧಾರವಾಡ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯ, ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ನಿಗದಿಪಡಿಸಿದ ವಿವಿಧ ಬೆಳೆಗಳಲ್ಲಿ ಬೆಳೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

2024-25 ನೇ ಸಾಲಿನಲ್ಲಿ ಕೃಷಿ ಪ್ರಶಸ್ತಿಯಡಿ ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿ ಇಲಾಖೆಯ K-kisan Portal ನಲ್ಲಿ ನೂತನವಾಗಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿರುತ್ತದೆ. Citizen Login ಅಥವಾ RSK Login ಮೂಲಕ ಹತ್ತಿರದ ರೈತಸಂಪರ್ಕಕೇಂದ್ರ, ಸೇವಾಕೇಂದ್ರ, ಸ್ವತಃ ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ K-kisan Portal ರಡಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ FID (Fruits Identification) ಯನ್ನು ಬಳಸಿಕೊಂಡು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.

ಇದನ್ನೂ ಓದಿ: ದೇಶದ್ರೋಹಿಗಳು ದೇಶಪ್ರೇಮದ ಪಾಠ ಮಾಡುತ್ತಿರುವುದು ಇಂದಿನ ದುರಂತ: ಡಿಸಿಎಂ ಡಿ. ಕೆ. ಶಿವಕುಮಾರ್

ಮುಂಗಾರು ಹಂಗಾಮಿಗೆ ಭತ್ತ (ನೀರಾವರಿ), ಭತ್ತ (ಮಳೆ ಆಶ್ರಿತ), ರಾಗಿ (ಮಳೆ ಆಶ್ರಿತ), ಶೇಂಗಾ (ಮಳೆ ಆಶ್ರಿತ), ತೊಗರಿ (ಮಳೆ ಆಶ್ರಿತ), ಸೋಯಾ ಅವರೆ (ಮಳೆ ಆಶ್ರಿತ), ಮುಸುಕಿನ ಜೋಳ (ಮಳೆ ಆಶ್ರಿತ), ನವಣೆ (ಮಳೆ ಆಶ್ರಿತ), ಸಜ್ಜೆ (ಮಳೆ ಆಶ್ರಿತ) ಬೆಳೆ ನಿಗದಿಪಡಿಸಲಾಗಿದೆ. ಈ ಸ್ಪರ್ಧೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಲಾಗಿದೆ.

2024-25 ನೇ ಸಾಲಿನಲ್ಲಿಯೂ ಸಹ ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೊತ್ಸಾಹಿಸುವ ಹಾಗೂ ಇತರೆ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಮಹಿಳೆಯರಿಗೆ ಕೃಷಿ ಪ್ರಶಸ್ತಿಯನ್ನು ನೀಡಲು ಸರ್ಕಾರವು ಅನುಮೋದನೆ ನೀಡಿದ ಪ್ರಯುಕ್ತ ಅರ್ಜಿಗಳನ್ನು ಸಲ್ಲಿಸಲು ಕೋರಲಾಗಿದೆ.

ಆಸಕ್ತಿಯುಳ್ಳ ರೈತರು ಆಗಸ್ಟ್ 31, 2024 ರೊಳಗಾಗಿ ಆನಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪ್ರವೇಶ ಶುಲ್ಕ ಇರುವುದಿಲ್ಲ. ಬೆಳೆ ಕಟಾವು ಮಾಡುವ ವಿಧಾನ, ಸ್ಪರ್ಧಾತ್ಮಕ ಇಳುವರಿಯ ಮಾಹಿತಿ ಇತ್ಯಾದಿಗಳ ಬಗ್ಗೆ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ ಅಥವಾ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News