ಕೊಪ್ಪಳ: ಶ್ರೀ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಕೊಪ್ಪಳ ಕೃಷಿ ಇಲಾಖೆಯಿಂದ ಆಯೋಜಿಸಿರುವ ಕೃಷಿ ವಸ್ತು ಪ್ರದರ್ಶನವು ತುಂಬಾ ಆಕರ್ಷಿಣಿಯವಾಗಿದ್ದು, ರೈತರ ಹಾಗೂ ಸಾರ್ವಜನಿಕರ ಗಮನ ಸೆಳೆಯುವಂತಿದೆ.


COMMERCIAL BREAK
SCROLL TO CONTINUE READING

ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಪ್ರಯುಕ್ತ ಕೃಷಿ ಇಲಾಖೆಯಿಂದ ಮೂರು ದಿನಗಳ ಕಾಲ ಜಾತ್ರಾ ಆವರಣದಲ್ಲಿ ಹಮ್ಮಿಕೊಳ್ಳಲಾದ ಕೃಷಿ ವಸ್ತು ಪ್ರದರ್ಶನ-2024ಕ್ಕೆ ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ ಅವರು ಚಾಲನೆ ನೀಡಿದರು. ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಕೃಷಿ ವಸ್ತು ಪ್ರದರ್ಶನ ಮಳಿಗೆ ಉದ್ಘಾಟಿಸಿದರು.


ಇದನ್ನೂ ಓದಿ: ರಾಜಾ ರಾಮಣ್ಣ: ಭಾರತದ ಅಣುಶಕ್ತಿ ಯುಗದ ನಿರ್ಮಾತೃವಿನ ಸ್ಮರಣೆ


ಈ ಸಂರ್ಭದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೆ.ರಾಜಶೇಖರ ಹಿಟ್ನಾಳ್, ಜಿ.ಪಂ ಉಪಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ತೊದಲಬಾಗಿ, ಜಂಟಿ ಕೃಷಿ ನಿರ್ದೇಶಕರಾದ ಟಿ.ಎಸ್.ರುದ್ರೇಶಪ್ಪ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಕೃಷ್ಣ ಉಕ್ಕುಂದ್ ಸೇರಿದಂತೆ ಹಲವು ಗಣ್ಯರು, ಕೃಷಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.


ಇದನ್ನೂ ಓದಿ: ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ : ಭಾರತದ ಪ್ರಥಮ ಸೇನಾ ಮುಖ್ಯಸ್ಥರ ಜೀವನಗಾಥೆ


ಕೃಷಿ ವಸ್ತು ಪ್ರದರ್ಶನದಲ್ಲಿ ವಿವಿಧ ಅಲಂಕಾರಿಕ ಸಂಪ್ರದಾಯಿಕ ಕೃಷಿಯ ಸಲಕರಣೆಗಳ ಪ್ರದರ್ಶಿಕೆ, ಸಾವಯವ ಕೃಷಿ, ಸಮಗ್ರ ಕೃಷಿ ಪದ್ಧತಿ, ಆರೋಗ್ಯದಲ್ಲಿ ಸಿರಿಧಾನ್ಯಳ ಮಹತ್ವ ಮತ್ತು ಇಲಾಖೆಯ ಯೋಜನೆಗಳ ಮಾಹಿತಿಗಳ ಬಗ್ಗೆ ವಿವರಣೆ ಅನಾವರಣಗೊಳಿಸಲಾಗಿದೆ. ಎಲ್ಲಾ ಸಾರ್ವಜನಿಕರು ಮತ್ತು ರೈತರು ಕೃಷಿ ವಸ್ತು ಪ್ರದರ್ಶನದ ಸದುಪಯೋಗ ಪಡೆದುಕೊಳ್ಳಲು ಕೊಪ್ಪಳ ಕೃಷಿ ಇಲಾಖೆಯು ಮನವಿ ಮಾಡಿಕೊಂಡಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.