ಬೆಂಗಳೂರು: ಭಾರತ ಚುನಾವಣಾ ಆಯೋಗವು, ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಜನೆವರಿ 1. 2024ರ ಅರ್ಹತಾ ದಿನಾಂಕದ ಮತದಾರರ ಪಟ್ಟಿ ಪರಿಷ್ಕರಣೆಯ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ.ಪರಿಷ್ಕøತ ವೇಳಾಪಟ್ಟಿಯಂತೆ ಆಕ್ಷೇಪಣೆಗಳ ವಿಲೇವಾರಿ ಅವಧಿಯನ್ನು ಜನೆವರಿ 12. 2024ಕ್ಕೆ ವಿಸ್ತರಿಸಲಾಗಿದ್ದು. ದತ್ತಾಂಶಗಳನ್ನು ಕ್ರೂಢೀರಣ, ನವೀಕರಣ ಹಾಗೂ ಮುದ್ರಣ ಕಾರ್ಯದ ಅವಧಿಯನ್ನು ಜನೆವರಿ 17. 2024ಕ್ಕೆ ನಿಗದಿಪಡಿಸಲಾಗಿದೆ. ಅಂತಿಮ ಮತದಾರರ ಪಟ್ಟಿ ಪ್ರಕಟಣೆ ದಿನಾಂಕವನ್ನು ಜನೆವರಿ 22. 2024ಕ್ಕೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: ಪರಪ್ಪನ ಅಗ್ರಹಾರ ಬಳಿ ರಸ್ತೆ ಸಂಪೂರ್ಣ ಬಂದ್
ಮುಂಬರುವ ಲೋಕಸಭಾ ಚುನಾವಣೆ-2024ರ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಜನೆವರಿ 01. 2024ಕ್ಕೆ 18ವರ್ಷ ಪೂರ್ಣಗೊಂಡ ಎಲ್ಲ ಅರ್ಹ ಮತದಾರರು ನಮೂನೆ-6 ಅರ್ಜಿಯನ್ನು ಸಲ್ಲಿಸಬಹುದು. ಹೆಸರು, ವಿಳಾಸ ಮತ್ತು ಭಾವಚಿತ್ರ ತಿದ್ದುಪಡಿಗಾಗಿ ನಮೂನೆ-8 ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು (ಮರಣ ಹೊಂದಿದ ಮನೆಯ ಸಂಬಂಧಿಕರು) ನಮೂನೆ-7 ಅರ್ಜಿಯನ್ನು ಸಲ್ಲಿಸಬಹುದು. ಆಯೋಗದ ಅಧಿಸೂಚನೆಯಲ್ಲಿ ನಿಗದಿಪಡಿಸಿದಂತೆ ಡಿಸೆಂಬರ್ 27. 2023 ರಿಂದ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೆ ಅರ್ಹ ಮತದಾರರು ನಮೂನೆ-6, 7 ಮತ್ತು 8 ರಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಇದನ್ನೂ ಓದಿ: ಕಾರ್ಯಕರ್ತರ ಕೋಪಕ್ಕೆ BMTC ಬಸ್ ಗ್ಲಾಸ್ ಪೀಸ್ ಪೀಸ್
ಸಾರ್ವಜನಿಕರು ವೋಟರ್ ಹೆಲ್ಪ್ ಲೈನ್ ಅಪ್ಲಿಕೇಶನ್ (VHA App) ಬಳಸಿ, www.nvsp.in ಹಾಗೂ ಮುಖ್ಯ ಚುನಾವಣಾಧಿಕಾರಿಗಳ ವೆಬ್‍ಸೈಟ್ https://ceo.karnataka.gov.in ಮೂಲಕ ವೋಟರ್ ಐಡಿ ನಮೂದಿಸಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ ಖಾತರಿ ಪಡಿಸಿಕೊಳ್ಳಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಹೆಲ್ಪ್‍ಲೈನ್ ನಂ. 1950ಕ್ಕೆ ಕರೆ ಮಾಡಿ ಹೆಚ್ಚಿನ ವಿವರ ಪಡೆಯಬಹುದಾಗಿದೆ. ಒಂದು ವೇಳೆ ತಮ್ಮ ಹೆಸರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗಿದ್ದಲ್ಲಿ ಅರ್ಜಿ ನಮೂನೆ-6 ನ್ನು ಭರ್ತಿಮಾಡಿ ಸಂಬಂಧಪಟ್ಟ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶವಿರುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.