ಸತ್ತು ಬದುಕಿ ಮತ್ತೆ ಸತ್ತ ವ್ಯಕ್ತಿ ...!
ಚುನಾವಣಾ ತರಬೇತಿ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾನೆಂದಿದ್ದ ನೌಕರ ಜೀವಂತವಾಗಿರುವ ಘಟನೆ ಚಾಮರಾಜನಗರ ಹನೂರು ಪಟ್ಟಣದಲ್ಲಿ ನಡೆದಿತ್ತು. ಆದರೆ ಈಗ ಬಂದಿರುವ ವರದಿಗಳ ಪ್ರಕಾರ ಆ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಮತ್ತೆ ವೈದ್ಯರು ಘೋಷಿಸಿದ್ದಾರೆ.
ಚಾಮರಾಜನಗರ: ಚುನಾವಣಾ ತರಬೇತಿ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾನೆಂದಿದ್ದ ನೌಕರ ಜೀವಂತವಾಗಿರುವ ಘಟನೆ ಚಾಮರಾಜನಗರ ಹನೂರು ಪಟ್ಟಣದಲ್ಲಿ ನಡೆದಿತ್ತು. ಆದರೆ ಈಗ ಬಂದಿರುವ ವರದಿಗಳ ಪ್ರಕಾರ ಆ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಮತ್ತೆ ವೈದ್ಯರು ಘೋಷಿಸಿದ್ದಾರೆ.
ಕೆಮಿಕಲ್ ರಿಯಾಕ್ಷನ್ ನಿಂದ ಕೆಲಮೊಮ್ಮೆ ಹೀಗಾಗಲಿದೆ. ಮೈಸೂರಿನ ಖಾಸಗಿ ಆಸ್ಪತ್ರೆ ಆತ ಮೃತನೆಂದು ಘೋಷಿಸಿದ್ದಾರೆಂದು ಡಿಎಚ್ಒ ವಿಶ್ವೇಶ್ವರಯ್ಯ ಜೀ ಕನ್ನಡ ನ್ಯೂಸ್ ಗೆ ತಿಳಿಸಿದ್ದಾರೆ.
ಖನಿಜ ಇಲಾಖೆಯ ನೌಕರ ಜಗದೀಶ್ ಜೀವಂತವಿರುವ ನೌಕರ. ಇಂದು ಹನೂರು ಪಟ್ಟಣದ ವಿವೇಕಾನಂದ ಶಾಲೆಯಲ್ಲಿ ಎಆರ್ ಓ ಹಾಗೂ ಪಿಆರ್ ಒಗಳಿಗೆ ಚುನಾವಣಾ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು.
ತರಬೇತಿ ಆರಂಭವಾಗುತ್ತಿದ್ದಂತೆ ಜಗದೀಶ್ ಎದೆ ನೋವಿನಿಂದ ಕುಸಿದು ಬಿದ್ದಿದ್ದರಿಂದ ಕೂಡಲೇ ಅವರನ್ನು ಹತ್ತಿರದ ಕಾಮಗೆರೆ ಹೋಲಿ ಗ್ರಾಸ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.
ಮೃತನೆಂದು ವೈದ್ಯರ ಘೋಷಣೆ- ಶ್ರದ್ಧಾಂಜಲಿ:
ಈ ವೇಳೆ ಅಲ್ಲಿನ ವೈದ್ಯಾಧಿಕಾರಿಗಳು ಜಗದೀಶ್ ಅವರನ್ನು ತಪಾಸಣೆಗೆ ಒಳಪಡಿಸಿ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದರು. ಜಿಲ್ಲಾಧಿಕಾರಿ ಡಿಎಸ್ ರಮೇಶ್ ಸ್ಥಳಕ್ಕೆ ಭೇಟಿ ನೀಡಿ ವೈದ್ಯಾಧಿಕಾರಿಗಳಿಂದ ಮಾಹಿತಿ ಸಹ ಪಡೆದಿದ್ದರು. ನೌಕರರು ಜಗದೀಶ್ ಗೆ ಶ್ರದ್ಧಾಂಜಲಿ ಸಲ್ಲಿಸಿ ಸೂಕ್ತ ಪರಿಹಾರ ಕೊಡಬೇಕೆಂದು ಒತ್ತಾಯಿಸಿದ್ದರು.
ಮರಣೋತ್ತರ ಪರೀಕ್ಷೆಯಲ್ಲಿ ಜೀವಂತ
ಹನೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಜಗದೀಶ್ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯುಲಾಗಿತ್ತು. ಎರಡು ಮೂರು ತಾಸು ಕಳೆದ ಬಳಿಕ ಅಚಾನಕ್ಕಾಗಿ ತಾಯಿ ಜಗದೀಶ್ ಶವ ಗಮನಿಸಿದ್ದು ಕೈ ಕಾಲು ಆಡುತ್ತಿದ್ದನ್ನು ಕಂಡು ಅಕ್ಕಪಕ್ಕದಲ್ಲಿದ್ದ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.ತಕ್ಷಣ ಅಲ್ಲೇ ಇದ್ದ ಕೆಲ ಪತ್ರಕರ್ತರು ವಿಚಾರವನ್ನು ಅಧಿಕಾರಿಗಳಿಗೆ ತಿಳಿಸಿ ಪ್ರಾಥಮಿಕ ಚಿಕಿತ್ಸೆ ಕೊಟ್ಟು ಹೆಚ್ಚಿನ ಚಿಕಿತ್ಸೆಗಾಗಿ ತುರ್ತು ವಾಹನದ ಮೂಲಕ ಮೈಸೂರಿಗೆ ರವಾನಿಸಲಾಗಿತ್ತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.