ಸಂವಿಧಾನ ವಿರೋಧಿ ಇಡೀ ಸರ್ಕಾರವೇ ರಾಜೀನಾಮೆ ನೀಡಬೇಕು: ಬಸವರಾಜ ಬೊಮ್ಮಾಯಿ ಆಗ್ರಹ

ಈ ಸರ್ಕಾರ ಆಡಳಿತ ನಡೆಸಲು ಯಾವುದೇ ನೈತಿಕ ಹಕ್ಕಿಲ್ಲ, ಇಡೀ ಸರ್ಕಾರವೇ ರಾಜೀನಾಮೆ ನೀಡಬೇಕು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ‌.

Written by - Prashobh Devanahalli | Last Updated : Mar 24, 2025, 08:24 PM IST
  • ಸಂವಿಧಾನ ವಿರೋಧಿ ಇಡೀ ಸರ್ಕಾರವೇ ರಾಜೀನಾಮೆ ನೀಡಬೇಕು
  • ಸಂವಿಧಾನ ವಿರೋಧಿ ಕಾಂಗ್ರೆಸ್ಸಿನ ಮುಖವಾಡ ಕಳಚಿ ಬಿದ್ದಿದೆ
  • ಬಸವರಾಜ ಬೊಮ್ಮಾಯಿ ಆಗ್ರಹ
ಸಂವಿಧಾನ ವಿರೋಧಿ ಇಡೀ ಸರ್ಕಾರವೇ ರಾಜೀನಾಮೆ ನೀಡಬೇಕು: ಬಸವರಾಜ ಬೊಮ್ಮಾಯಿ ಆಗ್ರಹ

ನವದೆಹಲಿ: ಮುಸ್ಲೀಮರಿಗೆ ಗುತ್ತಿಗೆಯಲ್ಲಿ ಶೇ 4% ಮೀಸಲಾತಿ ನೀಡುವ ಮೂಲಕ ಈ ಸರ್ಕಾರ ಸಂವಿಧಾನ ವಿರೋಧಿ ಕೆಲಸಗಳನ್ನು ಮಾಡುತ್ತಿದೆ. ಸಂವಿಧಾನ ವಿರೋಧ ಸರ್ಕಾರ ಕರ್ನಾಟಕದಲ್ಲಿದ್ದು, ಈ ಸರ್ಕಾರ ಆಡಳಿತ ನಡೆಸಲು ಯಾವುದೇ ನೈತಿಕ ಹಕ್ಕಿಲ್ಲ, ಇಡೀ ಸರ್ಕಾರವೇ ರಾಜೀನಾಮೆ ನೀಡಬೇಕು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ‌.

Add Zee News as a Preferred Source

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಆಂಧ್ರಪ್ರದೇಶ ಹಾಗೂ ಪಶ್ಚಿಮ ಬಂಗಾಳ ಪ್ರಕರಣಗಳಲ್ಲಿ  ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶ ಇಲ್ಲ ಎಂದು ಸುಪ್ರೀಂ ಕೋರ್ಟ್ ಬಹಳ ಸ್ಪಷ್ಟವಾಗಿ ಹೇಳಿದೆ. ಆದರೂ, ಇವರು ಧರ್ಮದ ಆಧಾರದಲ್ಲಿ ಮೀಸಲಾತಿ ತರುತ್ತಿದ್ದಾರೆ. ಅದೂ ಕೂಡ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಹೊರಟಿದ್ದಾರೆ. ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಸಂವಿಧಾನದಲ್ಲಿ  ಯಾವುದೇ ಅವಕಾಶ ಇಲ್ಲ. ಟೆಂಡರ್ ನಲ್ಲಿ ಪಾರದರ್ಶಕತೆ ಕಾಯ್ದೆಯನ್ನೇ ರದ್ದು ಪಡಿಸುವುದು ಒಳ್ಳೆಯದು. ಸುಮಾರು ಶೇ  30 ರಿಂದ 40% ರಷ್ಟು ಮೀಸಲಾತಿ ನೀಡಿದರೆ, ಪಾರದರ್ಶಕತೆಗೆ ಎಲ್ಲಿ ಗೌರವ ಇರುತ್ತದೆ ಎಂದು ಪ್ರಶ್ನಿಸಿದರು. 

ಅಲ್ಲದೇ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು ಯಾವಾಗಲೂ ಸಂವಿಧಾನವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಾರೆ. ಆದರೆ, ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ದ ಕ್ರಮ ಕೈಗೊಂಡಿದ್ದಾರೆ‌. ಈ ಬಗ್ಗೆ ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ‌. ಮುಸಲ್ಮಾನರಿಗೆ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶ ಇಲ್ಲ ಅಂತ ಶಿವಕುಮಾರ್ ಅವರೇ ಒಪ್ಪಿಕೊಂಡಿದ್ದಾರೆ. ಸಂವಿಧಾನ ತಿದ್ದುಪಡಿ ತರುತ್ತೇವೆ ಅಂತ ಹೇಳಿದ್ದಾರೆ ಎಂದರು. 

ಇದನ್ನೂ ಓದಿ: ಸೋಮವಾರವೂ ಸೆನ್ಸೆಕ್ಸ್‌, ನಿಫ್ಟಿ ಭರ್ಜರಿ ಏರಿಕೆ: ಒಂದೇ ದಿನ ಹೂಡಿಕೆದಾರರಿಗೆ ₹6 ಲಕ್ಷ ಕೋಟಿಗೂ ಹೆಚ್ಚು ಲಾಭ!!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆಗೂ ಮುಂಚೆ ಬಿಜೆಪಿಯವರು ಸಂವಿಧಾನ ಬದಲಾವಣೆ ಮಾಡುತ್ತಾರೆ ಎಂದು ಹೇಳಿದ್ದರು. ಆದರೆ, ಸಂವಿಧಾನದ ಮೂಲ ಉದ್ದೇಶವನ್ನೇ ಬದಲಾವಣೆ ಮಾಡಿರುವುದು ಕಾಂಗ್ರೆಸ್ ಸರ್ಕಾರ. ಕಾಂಗ್ರೆಸ್ಸಿನ ಮುಖವಾಡ ಕಳಚಿ ಬಿದ್ದಿದೆ. ಸಂವಿಧಾನದ ಮೇಲೆ ಪ್ರಮಾಣ ವಚನ ತೆಗೆದುಕೊಂಡು ಅದರ ವಿರುದ್ದ ಕೆಲಸ ಮಾಡುತ್ತಾರೆ ಎಂದರೆ  ಇದು ಸಂವಿಧಾನ ವಿರೋಧಿ ಅಷ್ಟೇ ಅಲ್ಲ, ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿಚಾರಕ್ಕೂ ವಿರುದ್ದವಾಗಿದೆ. ತುಷ್ಟೀಕರಣದ ಪರಾಕಾಷ್ಟೇ ಮೀರಿದೆ. ತುಷ್ಟೀಕರಣಕ್ಕಾಗಿ ದೇಶವನ್ನು ಒಡೆಯುವ ತೀರ್ಮಾನ ತೆಗೆದುಕೊಳ್ಳುವುದು ಸಂವಿಧಾನಿಕ ಹುದ್ದೆಯಲ್ಲಿರುವವರಿಗೆ ಇದು ನ್ಯಾಯಾನಾ ಎಂದು ಪ್ರಶ್ನಿಸಿದರು.

ಸ್ವಾತಂತ್ರ್ಯ ಬಂದಾಗ ಕಾಂಗ್ರೆಸ್ ನವರು ತನ್ನ ಆಡಳಿತಕ್ಕಾಗಿ ದೇಶ ವಿಭಜನೆ ಮಾಡಿದರು. ಶಾಭಾನು ಪ್ರಕರಣದಲ್ಲಿ ಕುರ್ಚಿ ಉಳಿಸಿಕೊಳ್ಳಲು ಕಾನೂನು ಬದಲಾವಣೆ ಮಾಡಿದ್ದರು. ಈಗ ಸಂವಿಧಾನವನ್ನೇ ಬದಲಾವಣೆ ಮಾಡಲು ಹೊರಟಿದ್ದಾರೆ. ರಾಹುಲ್ ಗಾಂಧಿಯವರಿಗೆ ಇನ್ನು ಮುಂದೆ ಸಂವಿಧಾನವನ್ನು ಹಿಡಿಕೊಳ್ಳುವ ಯಾವುದೇ ನೈತಿಕ ಹಕ್ಕಿಲ್ಲ. ಈ ಸರ್ಕಾರ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. 

ಇದೇ ವೇಳೆ ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಹನಿಟ್ರ್ಯಾಪ್ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹನಿಟ್ರ್ಯಾಪ್ ವಿಚಾರದಲ್ಲಿ ಮತ್ತೆ ರಾಜಕಾರಣ ಶುರುವಾಗಿದೆ. ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ವಿಧಾನಸಭೆಯಲ್ಲಿ ತಮ್ಮದಷ್ಟೇ ಅಲ್ಲ 48 ಜನರ ಹನಿಟ್ರ್ಯಾಪ್ ಆಗಿದೆ ಅಂತ ಹೇಳಿದ್ದಾರೆ. ಇದು ಬಹಳ ಗಂಭೀರ ವಿಷಯ. ಅವರು ದೂರು ಕೊಡುತ್ತೇನೆ ಅಂತ ಹೇಳಿದ್ದರು. ಇನ್ನು ದೂರು ಕೊಟ್ಟಿಲ್ಲ. ತನಿಖೆಯೂ ನಡೆಯುತ್ತಿಲ್ಲ. ಅಂದರೆ, ಕಾಂಗ್ರೆಸ್ ಹೈಕಮಾಂಡ್ ಇದರಲ್ಲಿ ಮಧ್ಯ ಪ್ರವೇಶ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ  ಖರ್ಗೆ  ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ  ಈ ಪ್ರಕರ ಮುಚ್ಚಿಹಾಕುವ ಕುರಿತು ಚರ್ಚೆ ನಡೆದಿದೆ. ಕಾಂಗ್ರೆಸ್ ನ ಬುಡಕ್ಕೆ ಈ ಪ್ರಕರಣ ಬರುತ್ತದೆ ಎಂದು ಅವರಿಗೆ ಗೊತ್ತಾಗಿದೆ ಎಂದರು.

ಇವತ್ತಿನ ಡಿಸಿಎಂ ಹೇಳಿಕೆಯನ್ನು ನೋಡಿದಾಗ ಇವರು ರಾಜ್ಯವನ್ನು ಆರ್ಥಿಕವಾಗಿ ಹಾಳು ಮಾಡಿದ್ದಾರೆ. ನೈತಿಕವಾಗಿಯೂ ರಾಜ್ಯವನ್ನು ಹಾಳು ಮಾಡಿದ್ದಾರೆ. ಈಗ ಸಂವಿಧಾನ ವಿರುದ್ದವಾಗಿ ನಡೆದುಕೊಂಡಿದ್ದಾರೆ. ಇದು ಜನವಿರೋಧಿ ಸರ್ಕಾರ ಇದು ಎಷ್ಟು ಬೇಗ ತೊಲಗುತ್ತದೆಯೋ ಅಷ್ಟು ಕರ್ನಾಟಕಕ್ಕೆ ಒಳ್ಳೆಯದಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಪೋಷಕರ ವಿರೋಧದ ನಡುವೆ ಹಿಂದೂ ಯುವಕ – ಮುಸ್ಲಿಂ ಯುವತಿ ಪ್ರೇಮ ವಿವಾಹ!!

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

Trending News