ಇನ್ನು ಮುಂದೆ ಅಂಗನವಾಡಿಗಳಲ್ಲಿ ಪಾಮೊಲಿನ್‌ ಬದಲಿಗೆ ಸೂರ್ಯಕಾಂತಿ ಎಣ್ಣೆ ಬಳಸಲು ಸರ್ಕಾರ ನಿರ್ಧಾರ

ಇನ್ನು ಮುಂದೆ ಅಂಗನವಾಡಿಗಳಲ್ಲಿ ಪಾಮೊಲಿನ್‌ ಬದಲಿಗೆ ಸೂರ್ಯಕಾಂತಿ ಎಣ್ಣೆ ಬಳಸಲು ರಾಜ್ಯ ಸರ್ಕಾರ ಇಂದು ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ.

Written by - Manjunath N | Last Updated : Aug 11, 2023, 05:45 PM IST
  • ಪಾಮೊಲಿನ್‌ ಎಣ್ಣೆ ಬದಲಿಗೆ ಸೂರ್ಯಕಾಂತಿ ಎಣ್ಣೆ ಬಳಕೆ ಮಾಡಲು ನಿನ್ನೆ ಮುಖ್ಯಮಂತ್ರಿ Siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ
  • ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ.
ಇನ್ನು ಮುಂದೆ ಅಂಗನವಾಡಿಗಳಲ್ಲಿ ಪಾಮೊಲಿನ್‌ ಬದಲಿಗೆ ಸೂರ್ಯಕಾಂತಿ ಎಣ್ಣೆ ಬಳಸಲು ಸರ್ಕಾರ ನಿರ್ಧಾರ title=
file photo

ಬೆಂಗಳೂರು: ಇನ್ನು ಮುಂದೆ ಅಂಗನವಾಡಿಗಳಲ್ಲಿ ಪಾಮೊಲಿನ್‌ ಬದಲಿಗೆ ಸೂರ್ಯಕಾಂತಿ ಎಣ್ಣೆ ಬಳಸಲು ರಾಜ್ಯ ಸರ್ಕಾರ ಇಂದು ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ.

ಈ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ  ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಇದನ್ನೂ ಓದಿ: ಹಾಸನದಲ್ಲಿ ಕಾಡಾನೆ ಸಂತತಿ- ಸಾವು ಎರಡೂ ಹೆಚ್ಚಳ: ಸಾವಿಗೀಡಾದ ಆನೆಗಳ ಸಂಖ್ಯೆ ಎಷ್ಟು ಗೊತ್ತಾ..?

ಮಕ್ಕಳ ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಅವಶ್ಯಕವಾದ ಲಿನೋಲಿಕ್ ಮತ್ತು ಅಲ್ಫಾ ಲಿನೋಲಿಕ್ ಆ್ಯಸಿಡ್‌ಗಳು ಸೂರ್ಯಕಾಂತಿ ಎಣ್ಣೆಯಲ್ಲಿ ಇರುವ ಕಾರಣಕ್ಕಾಗಿ ರಾಜ್ಯದ 69,899 ಅಂಗನವಾಡಿಗಳಲ್ಲಿ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೂರೈಸುವ ಪೌಷ್ಠಿಕ ಆಹಾರ ತಯಾರಿಕೆಗೆ ಇನ್ನು ಮುಂದೆ ಪಾಮೊಲಿನ್‌ ಎಣ್ಣೆ ಬದಲಿಗೆ ಸೂರ್ಯಕಾಂತಿ ಎಣ್ಣೆ ಬಳಕೆ ಮಾಡಲು ನಿನ್ನೆ ಮುಖ್ಯಮಂತ್ರಿ Siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಇದನ್ನೂ ಓದಿ: "ನ್ಯಾಯಯುತವಾಗಿ ಕಾಮಗಾರಿ ಮಾಡಿದ ಯಾವೊಬ್ಬ ಗುತ್ತಿಗೆದಾರನಿಗೂ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ"

ಇದರ ಜೊತೆಗೆ ಕರಾವಳಿ ಭಾಗದ ಜಿಲ್ಲೆಗಳ ಅಭಿವೃದ್ಧಿ ದೃಷ್ಟಿಯಿಂದ ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು "ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿ" ಎಂದು ಮರುನಾಮಕರಣ ಮಾಡಲು ಹಾಗೂ ಈ ಮಂಡಳಿಯ ವ್ಯಾಪ್ತಿಗೆ ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯ 23 ತಾಲೂಕುಗಳನ್ನು ಒಳಪಡಿಸಲು ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇನ್ನೂ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಿ, ಜನರಿಗೆ ಗುಣಮಟ್ಟದ ಆರೋಗ್ಯ ಸೌಲಭ್ಯಗಳನ್ನು ನೀಡುವ ಉದ್ದೇಶದಿಂದ ರಾಜ್ಯದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಎಂ.ಆರ್.ಐ ಹಾಗೂ ಸಿಟಿ ಸ್ಕ್ಯಾನ್ ಸೇವೆಗಳನ್ನು ಹೆಚ್ಚುವರಿಯಾಗಿ ಆರಂಭಿಸಲು ರೂ.47 ಕೋಟಿ ವೆಚ್ಚದ ಪ್ರಸ್ತಾವನೆಗೆ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News