ಬೆಂಗಳೂರು: ಇಂದಿನ ಪರಿಸ್ಥಿತಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol-Diesel Price) ಇಳಿಸುವುದು ಕಷ್ಟ ಎಂದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸದ್ಯದ ಸ್ಥಿತಿಯಲ್ಲಿ ಇಂಧನ ದರ ಇಳಿಸಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ ಎಂದು ಹೇಳಿದ್ದಾರೆ.
‘ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಇವತ್ತಿನ ಪರಿಸ್ಥಿತಿಯಲ್ಲಿ ಇಂಧನ ದರ ಇಳಿಕೆ ಮಾಡುವ ಸ್ಥಿತಿಯಲ್ಲಿ ನಮ್ಮ ಸರ್ಕಾರ ಇಲ್ಲ. ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳುತ್ತೋ ಕಾದು ನೋಡಬೇಕು. ಅದರ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ನಾವು ಕ್ರಮ ಕೈಗೊಳ್ಳುತ್ತೇವೆ. ಪೆಟ್ರೋಲ್ ಮತ್ತು ಡೀಸೆಲ್ ಅನ್ನು GST ವ್ಯಾಪ್ತಿಗೆ ತರಬೇಕೆಂಬುದರ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಯಾಗಿದೆ. ಆದರೆ GST ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ತರಲು ಯಾವ ರಾಜ್ಯಗಳು ಒಪ್ಪಿಗೆ ನೀಡಿಲ್ಲ’ವೆಂದು ಬಿಎಸ್ವೈ(BS Yediyurappa) ಹೇಳಿದ್ದಾರೆ.
ಇದನ್ನೂ ಓದಿ: ಕೌಟುಂಬಿಕ ಕಲಹ?: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಸಾವು..!
‘ಬೆಲೆ ಏರಿಕೆ ಬಗ್ಗೆ ಈಗಾಗಲೇ ಸದನದಲ್ಲಿ ಸಾಕಷ್ಟು ಚರ್ಚೆಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ಉತ್ತರವನ್ನು ನೀಡಿದ್ದಾರೆ. ಜನರ ಮೇಲೆ ಉಂಟಾಗಿರುವ ಬೆಲೆ ಏರಿಕೆ ಪರಿಣಾಮದ ಬಗ್ಗೆ ವಿರೋಧ ಪಕ್ಷದ ನಾಯಕರು ಸಾಕಷ್ಟು ಚರ್ಚೆ ಮಾಡಿದ್ದಾರೆ. ಬೆಲೆ ಏರಿಕೆಯ ವಾಸ್ತವಿಕ ಸ್ಥಿತಿ ಏನು ಎಂಬುದನ್ನು ತಿಳಿಸಲಾಗಿದೆ. ಬೆಲೆ ಏರಿಕೆ ನಮಗೆ ಅನಿವಾರ್ಯವಾಗಿತ್ತು. ಬರುವ ದಿನಗಳಲ್ಲಿ ಸುಧಾರಣೆ ಮಾಡಲು ಪ್ರಯತ್ನಿಸಲಾಗುವುದು’ ಎಂದು ಅವರು ಹೇಳಿದ್ದಾರೆ.
ಬಿಎಸ್ವೈ ರಾಜ್ಯ ಪ್ರವಾಸ ಆರಂಭ
ಮುಂಬರುವ 2021ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ರಾಜ್ಯ ಪ್ರವಾಸ ಕೈಗೊಂಡು ಪಕ್ಷ ಸಂಘಟನೆ ಮಾಡುತ್ತೇನೆಂದು ಬಿ.ಎಸ್.ಯಡಿಯೂರಪ್ಪನವರು ಹೇಳಿದ್ದರು. ಅದರಂತೆ ಮೈಸೂರು ಮೂಲಕ ಬಿಎಸ್ವೈ(BS Yediyurappa) ರಾಜ್ಯ ಪ್ರವಾಸ ಆರಂಭವಾಗಿದೆ. ‘ಈಗಾಗಲೇ ಮೈಸೂರು ಭಾಗದಲ್ಲಿ ಪ್ರವಾಸ ಮಾಡಿದ್ದೇನೆ. ಅಧಿವೇಶನದ ಬಳಿಕ ರಾಜ್ಯ ಪ್ರವಾಸ ಮುಂದುವರಿಯಲಿದೆ’ ಅಂತಾ ಅವರು ಹೇಳಿದ್ದಾರೆ.
ಇದನ್ನೂ ಓದಿ: ಕೊರೊನಾ ಲಸಿಕೆಯಲ್ಲಿ ಹೊಸ ದಾಖಲೆ ನಿರ್ಮಿಸಿದ ಕರ್ನಾಟಕ
ಇಂದು, ನಾಳೆ ದಾವಣಗೆರೆಯಲ್ಲಿ ಕೋರ್ ಕಮಿಟಿ ಸಭೆ ಇದೆ. ಕೋರ್ ಕಮಿಟಿ ಸಭೆಯಲ್ಲಿ 2 ದಿನ ನಾನು ಭಾಗಿಯಾಗುವೆ. ಪ್ರಸಕ್ತ ರಾಜಕೀಯ ಬೆಳವಣಿಗೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಮುಂಬರುವ ಉಪ ಚುನಾವಣೆ, ಸ್ಥಳೀಯ ಚುನಾವಣೆಗಳ ಕುರಿತು ಕೂಡ ಚರ್ಚಿಸಲಾಗುವುದು. ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಗಮನ ನೀಡುವುದು. ಬಿಜೆಪಿ ಸರ್ಕಾರ(BJP Government)ದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸುತ್ತೇವೆ. ಪಕ್ಷದಿಂದ ಏನಾದರೂ ಸಲಹೆ-ಸೂಚನೆ ಸಿಕ್ಕರೆ ಅದನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುತ್ತೇವೆ’ ಎಂದು ಬಿಎಸ್ವೈ ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.