ಬೆಂಗಳೂರು: ಕೊರೊನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿಧಾನಸಭಾ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಕೇರಳದ ಸರ್ಕಾರವು ಕೈಗೊಂಡಿರುವ ಕ್ರಮಗಳ ರೀತಿಯಲ್ಲಿಯೇ ರಾಜ್ಯದಲ್ಲಿನ ಸರ್ಕಾರವು ಕೂಡ ತೆಗೆದುಕೊಳ್ಳಬೇಕು ಎಂದು ಸರಣಿ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.


COMMERCIAL BREAK
SCROLL TO CONTINUE READING

ಪ್ರಕೃತಿ ಭಾರತದ ಪಾಲಿಗೆ ಕರುಣಾಮಯಿಯಾಗಿ, ಕರೋನಾ ಹೆಮ್ಮಾರಿಯನ್ನು ಎದುರಿಸಲು ಸಿದ್ಧತೆ ನಡೆಸಲಿಕ್ಕಾಗಿ ಸಮಯವಕಾಶ ನೀಡಿದೆ.ಈ ಸಮಯವನ್ನು ಮಾತುಗಳಲ್ಲಿಯೇ ವ್ಯರ್ಥಮಾಡದೆ ಸಮರೋಪಾದಿಯಲ್ಲಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪನವರು ಕ್ರಮಕೈಗೊಳ್ಳಬೇಕು.



ರಾಜ್ಯದ  ಬೆಂಗಳೂರು,ಮೈಸೂರು,ಹಾಸನ ಮತ್ತು ಶಿವಮೊಗ್ಗದಲ್ಲಿ ಮಾತ್ರ ಕರೋನಾ ವೈರಸ್ ಪತ್ತೆ ಹಚ್ಚುವ ಐದು ಪರೀಕ್ಷಾ ಲ್ಯಾಬ್‌ಗಳಿವೆ.ಬಳ್ಳಾರಿ ಮತ್ತು ಕಲ್ಬುರ್ಗಿಗಳಲ್ಲಿ ಮಾತ್ರ  ಕಫದ ಮಾದರಿ‌‌ ಸಂಗ್ರಹಿಸುವ  ಕೇಂದ್ರಗಳಿವೆ. ಇಷ್ಟು ಮಾತ್ರ ಸಾಕೇ? ಪರಿಸ್ಥಿತಿ ಉಲ್ಭಣಿಸಿದರೆ ಏನು ಸಿದ್ಧತೆ ಇದೆ?


ತಕ್ಷಣ 2-3 ಜಿಲ್ಲೆಗಳಿಗೊಂದರಂತೆಯಾದರೂ ಮುಖ್ಯವಾಗಿ,ಉತ್ತರ ಕರ್ನಾಟಕದಲ್ಲಿ ಕರೋನಾ ವೈರಸ್ ಪರೀಕ್ಷಾ ಲ್ಯಾಬ್ ಗಳನ್ನು ಪ್ರಾರಂಭಿಸಬೇಕು.ಎಲ್ಲ ಜಿಲ್ಲೆಗಳಲ್ಲಿ ಕಫದ ಮಾದರಿ‌ ಸಂಗ್ರಹ ಕೇಂದ್ರಗಳನ್ನು ತೆರೆಯಬೇಕು.ಐಸೋಲೇಷನ್ ಕೇಂದ್ರಗಳು ಮತ್ತು ಕೃತಕ ಉಸಿರಾಟದ ವ್ಯವಸ್ಥೆಯನ್ನು ಹೆಚ್ಚಿಸಬೇಕು.



ಮುಂದಿನ ದಿನಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ಎಲ್ಲ ಕರೋನಾ ಸೋಂಕಿತರಿಗೆ ಚಿಕಿತ್ಸೆ ಕಲ್ಪಿಸುವುದು ಸಾಧ್ಯವಾಗಲಾರದು.ಜಿಲ್ಲೆಗಳಲ್ಲಿರುವ ಖಾಸಗಿ ಆಸ್ಪತ್ರೆಗಳನ್ನು ಕೂಡಾ ಬಳಸಿಕೊಳ್ಳಲು ಕ್ರಮಕೈಗೊಳ್ಳಬೇಕು. ಜಿಲ್ಲೆಗಳ ಜವಾಬ್ದಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ನೀಡಬೇಕು.


ಸಾಮಾನ್ಯ ಜನತೆಯನ್ನು ಗಮನದಲ್ಲಿಟ್ಟುಕೊಂಡು ಕೇರಳದ ಮುಖ್ಯಮಂತ್ರಿಗಳು  ಪಿನರಾಯಿ ವಿಜಯನ್ ಕರೋನಾ ಸೋಂಕು ಎದುರಿಸಲು ಕೈಗೊಂಡಿರುವ ಕ್ರಮಗಳು ಮಾದರಿಯಾಗಿವೆ. ರಾಜ್ಯದ ಮುಖ್ಯಮಂತ್ರಿಗಳು ಕೇರಳ ರಾಜ್ಯದ ಕ್ರಮಗಳನ್ನು‌‌ಗಮನಕ್ಕೆ ತೆಗೆದುಕೊಳ್ಳಬೇಕು.